2:41 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17 ಕಡೆ ರೈಡ್

20/04/2026, 11:48

ಬೆಂಗಳೂರು(reporterkarnataka.com): ಸಿಲಿಕಾನ್ ಸಿಟಿಯಲ್ಲಿ ಇಂದು ಜಾರಿ ನಿರ್ದೇಶನಾಲಯ (ED) ಭಾರಿ ಕಾರ್ಯಾಚರಣೆ ನಡೆಸಿದೆ. ಶಾಂತಿನಗರ ಶಾಸಕ ಹಾಗೂ ಬಿಡಿಎ ಅಧ್ಯಕ್ಷ ಎನ್.ಎ. ಹ್ಯಾರಿಸ್ ಮತ್ತು ಅವರ ಪುತ್ರ, ಯುವ ಕಾಂಗ್ರೆಸ್ ನಾಯಕ ಮೊಹಮ್ಮದ್ ನಲಪಾಡ್ ಅವರಿಗೆ ಇಡಿ ಅಧಿಕಾರಿಗಳು ಬಿಗಿ ಸಂಕಷ್ಟ ತಂದೊಡ್ಡಿದ್ದಾರೆ.
ಬೆಂಗಳೂರಿನ ಒಟ್ಟು 17 ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿರುವ ಅಧಿಕಾರಿಗಳು ಮಹತ್ವದ ದಾಖಲೆಗಳನ್ನು ಜಾಲಾಡುತ್ತಿದ್ದಾರೆ.


*17 ಕಡೆ ಏಕಕಾಲಕ್ಕೆ ದಾಳಿ:* ಅಶೋಕ್ ನಗರದಲ್ಲಿರುವ ನಲಪಾಡ್ ನಿವಾಸ ಸೇರಿದಂತೆ ಬೆಂಗಳೂರಿನ ಹಲವೆಡೆ ಬೆಳಿಗ್ಗೆ 6 ಗಂಟೆಯಿಂದಲೇ ಶೋಧ ಕಾರ್ಯ ಆರಂಭವಾಗಿದೆ.
ಸುಮಾರು 12 ಮಂದಿ ಅಧಿಕಾರಿಗಳ ತಂಡ ರೈಡ್ ನಡೆಸುತ್ತಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಸಿಆರ್‌ಪಿಎಫ್ ಸಿಬ್ಬಂದಿಯಿಂದ ಭಾರಿ ಭದ್ರತೆ ಒದಗಿಸಲಾಗಿದೆ.

*ಬಿಟ್ ಕಾಯಿನ್ ದಂಧೆ ನಂಟು?:*
ಹ್ಯಾಕರ್ ಶ್ರೀಕಿ ಜೊತೆ ನಲಪಾಡ್ ಆರ್ಥಿಕ ವ್ಯವಹಾರ ಹೊಂದಿದ್ದರು ಎಂಬ ಆರೋಪ ಕೇಳಿಬಂದಿದೆ. ಸುಮಾರು 6 ವರ್ಷಗಳ ಕಾಲ ಶ್ರೀಕಿ ಜೊತೆ ಸಂಪರ್ಕದಲ್ಲಿದ್ದ ನಲಪಾಡ್, ಅಂದಾಜು 4.5 ಕೋಟಿ ರೂ. ವಹಿವಾಟು ನಡೆಸಿದ್ದಾರೆ ಎಂಬ ಶಂಕೆಯ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗುತ್ತಿದೆ.
ಬಿಟ್ ಕಾಯಿನ್ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಇಡಿ ಅಧಿಕಾರಿಗಳು, ಹಣ ವರ್ಗಾವಣೆ ಆಯಾಮದಲ್ಲಿ ಈ ರೈಡ್ ಕೈಗೊಂಡಿದ್ದಾರೆ. ಹ್ಯಾರಿಸ್ ಹಾಗೂ ನಲಪಾಡ್ ಅವರ ಆರ್ಥಿಕ ವ್ಯವಹಾರಗಳ ದಾಖಲೆಗಳು ಬ್ಯಾಂಕ್ ಖಾತೆಗಳು ಮತ್ತು ಬಿಟ್ ಕಾಯಿನ್ ಹಗರಣದ ಆರೋಪಿಗಳೊಂದಿಗೆ ಇರುವ ಲಿಂಕ್ ಬಗ್ಗೆ ಅಧಿಕಾರಿಗಳು ಪ್ರಶ್ನಿಸುವ ಸಾಧ್ಯತೆ ಇದೆ.

ಇತ್ತೀಚಿನ ಸುದ್ದಿ

ಜಾಹೀರಾತು