11:39 AM Monday21 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಶಿಕ್ಷಕ, ಉದ್ಯಮಿ, ಸಾಮಾಜಿಕ ಧುರೀಣ ಬೆಂಜಮಿನ್ ಡಿಸೋಜ ಇನ್ನಿಲ್ಲ

28/07/2024, 18:53

ಮಂಗಳೂರು(reporterkarnataka.com): ಶಿಕ್ಷಣ, ಉದ್ಯಮ ಮತ್ತು ಸಮಾಜಸೇವೆಯಲ್ಲಿ ತನ್ನದೇ ಛಾಪು ಮೂಡಿಸಿರುವ ಕೆಲರಾಯ್‌ನ ಬೆಂಜಮಿನ್ ಡಿ ಸೋಜ( 75 ) ಅವರು ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ದಿ। ಜೊನ್ ಮತ್ತು ದಿ।ಪಿಯಾದ್ ಡಿಸೋಜ ದಂಪತಿಯ 12 ಮಕ್ಕಳಲ್ಲಿ ಕೊನೆಯವರಾದ ಬೆಂಜಮಿನ್ ತಮ್ಮ ಪ್ರಾಥಮಿಕ ಶಿಕ್ಷಣವನ್ನು ಕೆಲರಾಯ್ ಸಂತ ಜೋಕಿಮ್ ಶಾಲೆಯಲ್ಲಿ ಪೂರೈಸಿ, ಫ್ರೌಡಶಾಲೆಯಿಂದ ಪದವಿಯ ವರೆಗೆ ಮಂಗಳೂರಿನ ಸಂತ ಅಲೋಶಿಯಸ್ ಸಂಸ್ಥೆಯಲ್ಲಿ ಕಲಿತು, ಮಂಗಳೂರಿನ ಸರಕಾರಿ ಕಾಲೇಜಿನಲ್ಲಿ ಶಿಕ್ಷಣ ಪದವಿ ಹಾಗೂ ತಿರುಪತಿಯ ವೆಂಕಟೇಶ್ವರ ವಿಶ್ವವಿದ್ಯಾಲಯದಿಂದ ರಾಜಕೀಯ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಮಂಗಳೂರು, ಪುತ್ತೂರು ಮತ್ತು ಉಡುಪಿಯ ಕಲ್ಯಾಣ್ಪುರದ ಶಾಲೆಗಳಲ್ಲಿ ಶಿಕ್ಷಕರಾಗಿ ದೀರ್ಘ ಕಾಲ ಸೇವೆ ಸಲ್ಲಿಸಿದ್ದರು.
ಶಿಕ್ಷಣ ಕ್ಷೇತ್ರದಿಂದ ಉದ್ಯಮ ರಂಗಕ್ಕೆ ಪಾದಾರ್ಪಣೆ ಮಾಡಿ ವಿವಿಧ ಉದ್ಯಮಗಳಲ್ಲಿ ತೊಡಗಿಸಿಕೊಳ್ಳುವುದರ ಜೊತೆಗೆ ದಕ್ಷಿಣ ಕನ್ನಡ ಜಿಲ್ಲಾ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಅತ್ಯುತ್ತಮ ಸಮಾಜ ಸೇವಕ ಪುರಸ್ಕಾರವನ್ನು ಪಡೆದುಕೊಂಡ ಬೆಂಜಮಿನ್ ಡಿಸೋಜ ಬಸ್ಸು ಮಾಲಕರ ಸಂಘದ ಕಾರ್ಯದರ್ಶಿಯಾಗಿ, ಭೂ ನ್ಯಾಯ ಮಂಡಲಿಯ ಸದಸ್ಯರಾಗಿ, ಬಜ್ಪೆ ಮಂಡಲ ಪಂಚಾಯತಿಯ ಪ್ರಧಾನ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.
ಮಂಗಳೂರು ಧರ್ಮಪ್ರಾಂತ್ಯದ ಪಾಲನ ಪರಿಷತ್ತಿನಲ್ಲಿ ಮೂರು ಅವಧಿಗೆ ಸದಸ್ಯರಾಗಿ, ಕಥೊಲಿಕ ಸಭಾ ಸಂಘಟನೆಯ ಪ್ರಥಮ ಅಜೀವ ಸದಸ್ಯರಾಗಿ, ಧರ್ಮಕ್ಷೇತ್ರದಲ್ಲಿ ಗುರಿಕಾರ, ಪಾಲನ ಪರಿಷತ್ ಉಪಾಧ್ಯಕ್ಷ, ಉತ್ತಮ ಕಾರ್ಯಕ್ರಮ ನಿರ್ವಾಹಕರಾಗಿ ಗಣನೀಯ ಸೇವೆ ಸಲ್ಲಿಸಿದ್ದು, ಓರ್ವ ಗಾಯಕ ಮತ್ತು ಕ್ರೀಡಾಪಟುವಾಗಿಯೂ ಗುರುತಿಸಿಕೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು