12:35 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಕಲ್ಲರಕೋಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಕಲಿಕೋಪಕರಣ ಮತ್ತು ವಿಜ್ಞಾನ ವಸ್ತು ಪ್ರದರ್ಶನ

11/08/2025, 15:21

ಮಂಗಳೂರು(reporterkarnataka.com): ನರಿಂಗಾನ ಸಮೀಪದ ಕಲ್ಲರಕೋಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಕಲಿಕೋಪಕರಣ ಮತ್ತು ವಿಜ್ಞಾನ ವಸ್ತು ಪ್ರದರ್ಶನ ಇತ್ತೀಚಿಗೆ ಜರುಗಿತು.



ಶಾಲಾ ಮೇಲುಸ್ತುವಾರಿ ಸಮಿತಿಯ ಉಪಾಧ್ಯಕ್ಷ ಅಬೂಬಕ್ಕರ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅವರು ಮಾತನಾಡಿ, ಮಕ್ಕಳಲ್ಲಿ ಸುಪ್ತವಾಗಿ ಅಡಗಿರುವ ಪ್ರತಿಭೆಯನ್ನು ಹೊರತರಲು ಇಂತಹ ವಸ್ತು ಪ್ರದರ್ಶನದ ಅಗತ್ಯವಿದೆ ಎಂದು ಶುಭಹಾರೈಸಿದರು, ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕಿ ನಯನಾ ಕುಮಾರಿ‌ ಕೆ. ಅವರು ವಹಿಸಿಕೊಂಡಿದ್ದರು. ಶಾಲಾ ಮೇಲುಸ್ತುವಾರಿ ಸಮಿತಿಯ ಪದಾಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು, ಶಾಲಾ ಹಿರಿಯ ಶಿಕ್ಷಕಿ ಸೀಮಾ ಮರಿಯಾ ಡಿಸೋಜ ಅವರು ಸ್ವಾಗತಿಸಿದರು.ಜಯಲಕ್ಷ್ಮೀ ಜಿ. ವಂದಿಸಿದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಪ್ರಭಾಕರ ಜೋಗಿ ನಿರೂಪಿಸಿದರು.
ನರಿಂಗಾನ ಗ್ರಾಮ ಪಂಚಾಯತ್ ಅಧ್ಯಕ್ಷ ನವಾಜ್ ಎಂಬಿ, ಮರಳಿಧರ್ ಶೆಟ್ಟಿ, ಸುಂದರ ಪೂಜಾರಿ, ಆಶ್ರಫ್, ಸಾಬಿರ ಅವರು ಕಲಿಕೋ ಉಪಕರಣಗಳನ್ನು ವೀಕ್ಷಿಸಿ ಶುಭ ಹಾರೈಸಿದರು. ವಿದ್ಯಾರ್ಥಿಗಳ ಪೋಷಕರು ಹೆತ್ತವರು, ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು ಕಲಿ ಕೋಪಕರಣಗಳ ಪ್ರದರ್ಶನ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು