11:33 PM Thursday8 - January 2026
ಬ್ರೇಕಿಂಗ್ ನ್ಯೂಸ್
ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ… ಬಾಂಗ್ಲಾದವರು ನುಸುಳುವವರೆಗೆ ಕೇಂದ್ರ ಗೃಹ ಇಲಾಖೆ ನಿದ್ದೆಗೆ ಜಾರಿತ್ತಾ?: ಸಚಿವ ಕೃಷ್ಣ ಬೈರೇಗೌಡ… ಇನ್ಫೋಸಿಸ್ ನಿಂದ 53.5 ಎಕರೆ ಭೂಮಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಮಾರಾಟ: ತನಿಖೆಗೆ… ಕ್ವಾಂಟಮ್ ತಂತ್ರಜ್ಞಾನ ಮತ್ತು ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ ಉಪಮುಖ್ಯಮಂತ್ರಿ ಒಲವು ಲಾರಿ- ಬೈಕ್ ಡಿಕ್ಕಿ: ಗಾಯಾಳು ಬೈಕ್ ಸವಾರ ಗೋಣಿಕೊಪ್ಪಲು ಲೋಪಮುದ್ರ ಆಸ್ಪತ್ರೆಯಲ್ಲಿ ಸಾವು ಸುದೀರ್ಘ ಅವಧಿಗೆ ಸಿಎಂ ಎಂಬ ದಾಖಲೆ ಜನರ ಆಶೀರ್ವಾದಿಂದ ಸಾಧ್ಯವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಕಲೆ ರಾಜ್ಯದ ಸಂಸ್ಕೃತಿಯ ಕನ್ನಡಿ; ಕಲಾವಿದರು,ಕಲಾಸಕ್ತರಿಗೆ ಚಿತ್ರಸಂತೆ ವೇದಿಕೆ ಕಲ್ಪಿಸಿದೆ: ಮುಖ್ಯಮಂತ್ರಿ

ಇತ್ತೀಚಿನ ಸುದ್ದಿ

ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ ಶಾಲೆ!

08/01/2026, 21:28

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮುತ್ತಿಗೆಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶೈಕ್ಷಣಿಕ ಸಾಧನೆ ಹಾಗೂ ಸೌಲಭ್ಯಗಳ ಮೂಲಕ ಖಾಸಗಿ ಶಾಲೆಗಳಿಗೆ ಸವಾಲು ಹಾಕುವಂತ ಕಾರ್ಯ ಮಾಡಿ ಜಿಲ್ಲೆಯಾದ್ಯಂತ ಗಮನ ಸೆಳೆದಿದೆ.
ಶಾಲೆಯ ವಿದ್ಯಾರ್ಥಿಗಳು ಇತ್ತೀಚೆಗೆ ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ ಕೈಗೊಂಡಿದ್ದು, ಸರ್ಕಾರಿ ಶಾಲಾ ಮಕ್ಕಳಿಗೆ ಇದೇ ಮೊದಲ ಬಾರಿಗೆ ವಿಮಾನ ಪ್ರಯಾಣದ ಅವಕಾಶ ದೊರಕಿರುವುದು ವಿಶೇಷವಾಗಿದೆ.
ಈ ಶಾಲೆಯ ವೈಶಿಷ್ಟ್ಯವೇನೆಂದರೆ, ಖಾಸಗಿ ಶಾಲೆಗಳಲ್ಲಿ ದೊರೆಯುವಂತ ಗುಣಮಟ್ಟದ ಶಿಕ್ಷಣ, ಶೈಕ್ಷಣಿಕ ಸೌಲಭ್ಯಗಳು ಮತ್ತು ಸಂಸ್ಕೃತಿಪೂರ್ಣ ವಾತಾವರಣವನ್ನು ಸರ್ಕಾರಿ ಶಾಲೆಯಲ್ಲೇ ಒದಗಿಸಲಾಗುತ್ತಿದೆ. ಇದರಿಂದ ಸಾರ್ವಜನಿಕರಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.


ಜಿಲ್ಲೆಯಲ್ಲಿ ಮೊದಲ ಬಾರಿಗೆ ಸರ್ಕಾರಿ ಶಾಲಾ ಮಕ್ಕಳಿಗೆ ವಿಮಾನದಲ್ಲಿ ಪ್ರಯಾಣಿಸುವ ಅವಕಾಶ ಕಲ್ಪಿಸುವಲ್ಲಿ ಸ್ಥಳೀಯ ಗ್ರಾಮ ಪಂಚಾಯಿತಿ, ಎಸ್‌ಡಿಎಂಸಿ ಸದಸ್ಯರು, ದಾನಿಗಳು ಹಾಗೂ ಶಾಲಾ ಶಿಕ್ಷಕರು ಪ್ರಮುಖ ಪಾತ್ರ ವಹಿಸಿದ್ದಾರೆ. ಅವರ ಸಹಕಾರ ಮತ್ತು ಸಮರ್ಪಿತ ಪ್ರಯತ್ನಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಪ್ರವಾಸಕ್ಕೆ ಹೊರಟಿರುವ ಶಾಲಾ ಮಕ್ಕಳ ಸಂತಸಕ್ಕೆ ಮಿತಿ ಇರಲಿಲ್ಲ. ವಿಮಾನ ಪ್ರಯಾಣದ ಅನುಭವವು ಮಕ್ಕಳಲ್ಲಿ ಹೊಸ ಉತ್ಸಾಹ, ಆತ್ಮವಿಶ್ವಾಸ ಹಾಗೂ ಭವಿಷ್ಯದ ಕನಸುಗಳನ್ನು ಬೆಳೆಸುವಲ್ಲಿ ಸಹಕಾರಿಯಾಗಲಿದೆ ಎಂದು ಶಿಕ್ಷಕರು ಅಭಿಪ್ರಾಯಪಟ್ಟಿದ್ದಾರೆ.
ಇತ್ತೀಚಿನ ದಿನಗಳಲ್ಲಿ ‘ಸರ್ಕಾರಿ ಶಾಲೆ’ ಎಂದರೆ ಅಸಡ್ಡೆ ಮನೋಭಾವ ಹೊಂದಿರುವವರಿಗೆ ಉತ್ತರವಾಗಿ, ದಾನಿಗಳ ಸಹಕಾರದಿಂದ ಸುಸಜ್ಜಿತ ಕಟ್ಟಡವನ್ನು ನಿರ್ಮಿಸಿ ಈ ಶಾಲೆ ಇಡೀ ರಾಜ್ಯವೇ ಹೆಮ್ಮೆಪಡುವಂತ ಮಾದರಿಯಾಗಿ ಹೊರಹೊಮ್ಮಿದೆ. ಮುತ್ತಿಗೆಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಈ ಸಾಧನೆ ಸರ್ಕಾರಿ ಶಾಲೆಗಳ ಶಕ್ತಿಯನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು