10:49 AM Tuesday16 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ…

ಇತ್ತೀಚಿನ ಸುದ್ದಿ

ಈಶ್ವರ ಖಂಡ್ರೆ – ಕೇರಳ ಅರಣ್ಯ ಸಚಿವ ಸಶೀಂದ್ರನ್ ಭೇಟಿ: ಕೇರಳ ಮೃಗಾಲಯಕ್ಕೆ ತಾಂತ್ರಿಕ ನೈಪುಣ್ಯತೆಯ ವಿನಿಮಯಕ್ಕೆ ಸಮ್ಮತಿ

12/06/2025, 23:56

ಬೆಂಗಳೂರು(reporterkarnataka.com): ಕೇರಳದ ತ್ರಿಶೂರ್ ಜಿಲ್ಲೆಯ ಪುಥೂರ್ ನಲ್ಲಿ ನೂತನವಾಗಿ ಆರಂಭಿಸುತ್ತಿರುವ ಜೈವಿಕ ಉದ್ಯಾನದಲ್ಲಿ ವನ್ಯಜೀವಿ ಮತ್ತು ಪಕ್ಷಿಗಳ ನಿರ್ವಹಣೆಗೆ ಅಗತ್ಯವಾದ ನೈಪುಣ್ಯತೆ ಮತ್ತು ಜ್ಞಾನ ವಿನಿಮಯಕ್ಕೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸಮ್ಮತಿಸಿದ್ದಾರೆ.
ವಿಕಾಸಸೌಧದಲ್ಲಿಂದು ತಮ್ಮನ್ನು ಭೇಟಿಯಾದ ಕೇರಳ ಅರಣ್ಯ ಸಚಿವ ಎ.ಕೆ. ಸಶೀಂದ್ರನ್, ಕೇರಳ ಅರಣ್ಯ ಇಲಾಖೆಯಿಂದ ಆರಂಭಿಸಲಾಗುತ್ತಿರುವ ಪ್ರಥಮ ಜೈವಿಕ ಉದ್ಯಾನದಲ್ಲಿ ವನ್ಯಜೀವಿಗಳ ನಿರ್ವಹಣೆ ಕುರಿತಂತೆ ತಾಂತ್ರಿಕ ನೈಪುಣ್ಯತೆ ಹಂಚಿಕೊಳ್ಳುವಂತೆ ಮಾಡಿದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದರು.
ವಿಶ್ವ ವಿಖ್ಯಾತ ಮೃಗಾಲಯ ವಿನ್ಯಾಸಕಾರ ಆಸ್ಟ್ರೇಲಿಯಾದ ಜಾನ್ ಸಿಯೋ ಅವರಿಂದ ಜೈವಿಕ ಉದ್ಯಾನದ ವಿನ್ಯಾಸ ಮಾಡಿಸಿದ್ದು, 136.8 ಎಕರೆ ಪ್ರದೇಶದಲ್ಲಿ ಇದು ಸಾಕಾರವಾಗುತ್ತಿದ್ದು, ಬರುವ ಆಗಸ್ಟ್ ಅಂತ್ಯಕ್ಕೆ ಕಾರ್ಯಾರಂಭ ಮಾಡಲಿದೆ ಎಂದು ಸಚಿವ ಸಶೀಂದ್ರನ್ ಮಾಹಿತಿ ನೀಡಿದರು, ಹೊಸ ಮೃಗಾಲಯಕ್ಕೆ ಕರ್ನಾಟಕದ ಮೃಗಾಲಯಗಳಲ್ಲಿ ಹೆಚ್ಚುವರಿಯಾಗಿರುವ ಕೆಲವು ವನ್ಯಜೀವಿಗಳನ್ನು ನೀಡುವಂತೆಯೂ ಮನವಿ ಮಾಡಿದರು.
ಈ ಭೇಟಿಯ ವೇಳೆ ಕೇರಳ ರಾಜ್ಯದಲ್ಲಿ ಡೀಮ್ಡ್ ಅರಣ್ಯ ಕುರಿತಂತೆ ಕೈಗೊಂಡಿರುವ ಕ್ರಮಗಳು, ಕಸ್ತೂರಿ ರಂಗನ್ ವರದಿಯ ಕುರಿತಂತೆ ಕೈಗೊಳ್ಳಲಾಗಿರುವ ನಿರ್ಣಯಗಳ ಕುರಿತಂತೆಯೂ ಸಮಾಲೋಚಿಸಲಾಯಿತು.

ಕೇರಳ ಅರಣ್ಯ ಇಲಾಖೆಯ ಮುಖ್ಯ ವನ್ಯಜೀವಿ ಪರಿಪಾಲಕ ಪ್ರಮೋದ್ ಜಿ ಕೃಷ್ಣನ್ ಮತ್ತು ಕರ್ನಾಟಕದ ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳಾದ ಮೀನಾಕ್ಷಿ ನೇಗಿ, ಸುಭಾಷ್ ಮಲ್ಕಡೆ, ಸುನೀಲ್ ಪನ್ವಾರ್, ಸೂರ್ಯ ಸೇನ್ ಮತ್ತಿತರರು ಸಭೆಯಲ್ಲಿ ಭಾಗಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು