6:38 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಎಕ್ಸ್‌ಪರ್ಟ್ ಕಾಲೇಜಿನಲ್ಲಿ ಈದ್ ಉಲ್ ಫಿತ್ರ್ ಆಚರಣೆ; ಅತ್ಯುತ್ತಮ ರಾಜಕಾರಣಿಗಳು ಭಾರತಕ್ಕೆ ಬೇಕು: ಸ್ಪೀಕರ್ ಖಾದರ್

31/03/2025, 16:28

ಮಂಗಳೂರು(reporterkarnataka.com): ವಳಚ್ಚಿಲ್‌ನ ಎಕ್ಸ್‌ಪರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ಈದ್ ಉಲ್ ಫಿತ್ರ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.
ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಉತ್ತಮ ವೈದ್ಯರು ಮತ್ತು ಎಂಜಿನಿಯರ್ ಗಳು ಎಷ್ಟು ಮುಖ್ಯವೋ ಅಷ್ಟೇ ಉತ್ತಮ ರಾಜಕಾರಣಿಗಳೂ ಈ ದೇಶಕ್ಕೆ ಮುಖ್ಯ. ಉತ್ತಮ ವಿದ್ಯಾರ್ಥಿಗಳು ಉತ್ತಮ ರಾಜಕಾರಣಿ ಆಗುವ ಕನಸನ್ನು ಹೊಂದಿರಬೇಕು ಎಂದರು.


ಎಕ್ಸ್‌ಪರ್ಟ್ ಶಿಕ್ಷಣ ಸಮೂಹ ಸಂಸ್ಧೆಗಳ ಅಧ್ಯಕ್ಷ ಪ್ರೊ. ನರೇಂದ್ರ ಎಲ್. ನಾಯಕ್ ಅವರು ಮಾತನಾಡಿ,ನೀವು ವೈದ್ಯರಾದರೆ ಅಥವಾ ಎಂಜಿನಿಯರಾದರೆ ಅಥವಾ ಯಾವುದೇ ಕ್ಷೇತ್ರವನ್ನು ಆಯ್ಕೆ ಮಾಡಿದರೆ ಆ ಕ್ಷೇತ್ರದಲ್ಲಿ ಸದಾ ಅತ್ಯುತ್ತಮ ಸೇವೆ ನೀಡಿ ಶ್ರೇಷ್ಠರಾಗಬೇಕು ಎಂದು ಕಿವಿ ಮಾತು ಹೇಳಿದರು.
ಸಂಸ್ಥೆಯ ಉಪಾಧ್ಯಕ್ಷೆ ಡಾ. ಉಷಾಪ್ರಭಾ ಎನ್. ನಾಯಕ್ ಮಾತನಾಡಿ, ಎಕ್ಸ್ ಪರ್ಟ್ ನಲ್ಲಿ ಎಲ್ಲಾ ಹಬ್ಬಗಳನ್ನು ಸಮಾನವಾಗಿ ಆಚರಿಸಲಾಗುತ್ತದೆ ಮತ್ತು ವಿದ್ಯಾರ್ಥಿಗಳು ತಮ್ಮ ಬದುಕಿಗೆ ಹೊಸತನವನ್ನು ತಂದುಕೊಡುವ ಮೂಲಕ ರಾಷ್ಟ್ರದ ಜವಾಬ್ದಾರಿಯುತ ನಾಗರಿಕರಾಗಬೇಕೆಂದು ಕರೆ ನೀಡಿದರು.
ಟ್ರಸ್ಟಿ ಉಸ್ತಾದ್ ರಫೀಕ್ ಖಾನ್, ಪ್ರಾಂಶುಪಾಲ ಡಾ. ಎನ್ ಕೆ ವಿಜಯನ್, ಉಪಪ್ರಾಂಶುಪಾಲ(ಶೈಕ್ಷಣಿಕ) ಸುಬ್ರಹ್ಮಣ್ಯ ಉಡುಪ, ಉಪ ಪ್ರಾಂಶುಪಾಲೆ(ಆಡಳಿತ) ಧೃತಿ ವಿ ಹೆಗ್ಡೆ ಉಪಸ್ಥಿತರಿದ್ದರು.
ಮಾಹಿತಿ ತಂತ್ರಜ್ಞಾನ ವಿಭಾಗದ ನಿರ್ದೇಶಕ ಅಂಕುಶ್ ಎನ್ ನಾಯಕ್ ಅವರು ಸ್ವಾಗತಿಸಿದರು.
ವಿದ್ಯಾರ್ಥಿನಿ ಪ್ರಣತಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಈದ್ ಉಲ್ ಫಿತ್ರ್ ಹಬ್ಬದ ಪ್ರಯುಕ್ತ ವಿಶೇಷ ಬಿರಿಯಾನಿ ಭೋಜನವನ್ನು ವಿದ್ಯಾರ್ಥಿಗಳು ಸವಿದರು.

ಇತ್ತೀಚಿನ ಸುದ್ದಿ

ಜಾಹೀರಾತು