4:35 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

Kolara | ಶ್ರೀನಿವಾಸಪುರದಲ್ಲಿ ಸಂಭ್ರಮ- ಸಡಗರದಲ್ಲಿ ಈದ್-ಉಲ್-ಫಿತರ್ ಆಚರಣೆ: ಸಾಮೂಹಿಕ ಪ್ರಾರ್ಥನೆ

31/03/2025, 19:08

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಶ್ರೀನಿವಾಸಪುರ ಪಟ್ಟಣದಲ್ಲಿ ಈದ್-ಉಲ್-ಫಿತರ್ ಹಬ್ಬವನ್ನು ಭಕ್ತಿಭಾವದಿಂದ ಹಾಗೂ ಅದ್ಧೂರಿಯಾಗಿ ಆಚರಿಸಲಾಯಿತು.
ನಗರದ ವಿವಿಧ ಭಾಗಗಳಿಂದ ಸಾವಿರಾರು ಮುಸ್ಲಿಮರು ಪಾದಯಾತ್ರೆಯ ಮೂಲಕ ಈದ್ಗಾ ಮೈದಾನವನ್ನು ತಲುಪಿದರು. ಬೆಳಿಗ್ಗೆ 9:45ಕ್ಕೆ ಸಾಮೂಹಿಕ ನಮಾಜ್ ಸಲ್ಲಿಸಿದರು.
ಜಾಮಿಯಾ ಮಸೀದಿಯ ಇಮಾಮ್ ಮೌಲಾನಾ ಮುಹಮ್ಮದ್ ಆಸಿಫ್ ಅವರು ಧಾರ್ಮಿಕ ಪ್ರವಚನ ನೀಡುತ್ತಾ, ಈದ್-ಉಲ್-ಫಿತರ್‌ನ ಮಹತ್ವ ಮತ್ತು ಪ್ರವಾದಿ ಮುಹಮ್ಮದ್ (ಸ) ಅವರ ಆದರ್ಶಗಳನ್ನು ವಿವರಿಸಿದರು. ಇಸ್ಲಾಮ್ ಧರ್ಮ ಶಾಂತಿ ಮತ್ತು ಸಹೋದರತ್ವದ ಸಂದೇಶ ಸಾರುತ್ತದೆಯೆಂದು ಹೇಳಿದರು. ಅವರು ರೋಜಾ (ಉಪವಾಸ) ಮತ್ತು ಜಕಾತ್ (ದಾನ) ಕುರಿತು ಮಾತನಾಡಿ, ಇದು ದಯೆ ಮತ್ತು ಸಹಾಯಹಸ್ತವನ್ನು ಪ್ರೇರೇಪಿಸುತ್ತದೆ ಎಂದರು.


ಚಾರ್ಮಿನಾರ್ ಈದ್ಗಾ ಮೈದಾನದಲ್ಲಿ ಬೆಳಿಗ್ಗೆ 7:45ಕ್ಕೆ ನಡೆದ ಸಾಮೂಹಿಕ ನಮಾಜ್‌ಗೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ನಮಾಜ್ ಮುಗಿದ ಬಳಿಕ ಜನರು ಪರಸ್ಪರ ಅಪ್ಪಿಕೊಂಡು ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು. ಮನೆಮಂದಿ ಮತ್ತು ಸ್ನೇಹಿತರು ಭೇಟಿ ನೀಡಿ ಹಬ್ಬದ ಸಂತೋಷ ಹಂಚಿಕೊಂಡರು.
ಪ್ರತಿವರ್ಷದಂತೆ ಈ ಬಾರಿ ಮಹಿಳೆಯರಿಗೂ ಪ್ರತ್ಯೇಕ ಸಾಮೂಹಿಕ ನಮಾಜ್ ವ್ಯವಸ್ಥೆ ಮಾಡಲಾಗಿತ್ತು. ಮಹಿಳೆಯರೂ ಧಾರ್ಮಿಕ ಉತ್ಸಾಹದಿಂದ ಈದ್ಗಾ ಮೈದಾನದಲ್ಲಿ ನಮಾಜ್ ಸಲ್ಲಿಸಿದರು.
ಹಬ್ಬದ ಸಂದರ್ಭದಲ್ಲಿ ಪೊಲೀಸರು ಕಟ್ಟುನಿಟ್ಟಾದ ಭದ್ರತಾ ವ್ಯವಸ್ಥೆ ಕೈಗೊಂಡು, ಶಾಂತಿಯುತ ಸಂಭ್ರಮಕ್ಕೆ ಸಹಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು