6:39 AM Sunday6 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಕುಶಾಲನಗರದ ಹಿಲಾಲ್ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ: ಸಾಮೂಹಿಕ ಪ್ರಾರ್ಥನೆ

20/03/2026, 19:19

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮುಸಲ್ಮಾನರ ಪವಿತ್ರ ಹಬ್ಬಗಳಲ್ಲಿ ಒಂದಾದ ಈದುಲ್ ಫಿತರ್ ಹಬ್ಬವನ್ನು ಕುಶಾಲನಗರದ ಹಿಲಾಲ್ ಮಸೀದಿಯಲ್ಲಿ ಆಚರಿಸಲಾಯಿತು.
ನಿರಂತರ ೨೯ ದಿನಗಳ ವ್ರತಾಚರಣೆಯ ನಂತರ ಶಾಫಿ ಬಾಂಧವರು ಈದುಲ್ ಫಿತರ್ ಹಬ್ಬವನ್ನು ಆಚರಿಸಿದರು. ಹಬ್ಬದ ದಿನದಂದು ಬೆಳಿಗ್ಗೆ ವಿಶೇಷವಾದ ಪ್ರಾರ್ಥನೆ ನೆರವೇರಿಸಲಾಯಿತು.
ಶಾಂತಿ, ಸೌಹಾರ್ದತೆ, ಕರುಣೆ, ಸಹನೆ ಬಗ್ಗೆ ಧರ್ಮಗುರುಗಳಾದ ಶಾಫಿ ಫೈಜ಼ಿ ಇರ್ಪಾನಿಯವರು ಪ್ರಭಾಷಣ ನೀಡಿದರು. ಜೊತೆಗೆ ಈದುಲ್ ಫಿತರ್ ನ ಪ್ರಾಮುಖ್ಯತೆ ಬಗ್ಗೆ, ಪ್ರತಿಯೊಬ್ಬರೂ ಕಡ್ಡಾಯವಾಗಿ ನೀಡಬೇಕಾದ ದಾನದ ಬಗ್ಗೆ ಅವರು ಭೋದನೆ ನೀಡಿದರು.
ನಮಾಜ಼್ ನ ನಂತರ ಪರಸ್ಪರ ಈದ್ ನ‌ ಶುಭಾಶಯ ಹಂಚಿಕೊಂಡಿದರು.
ಈ ಸಂದರ್ಭ ಮಾತನಾಡಿದ ಹಿಲಾಲ್ ಮಸೀದಿ ಅಧ್ಯಕ್ಷರಾದ ರಫೀಕ್ ಹಾಗೂ ಕಾರ್ಯದರ್ಶಿ ಕರೀಂ, ಹಸಿದವನ ನೋವನ್ನು ಅರಿಯುವ ಉದ್ದೇಶದಿಂದ ನಾವು ಮೂವತ್ತು ದಿನಗಳ‌ ಕಾಲ ವ್ರತಾಚರಣೆ ಮಾಡುತ್ತೇವೆ‌. ಎಲ್ಲರಿಗೂ ಈದುಲ್ ಫಿತರ್ ಹಬ್ಬದ ಶುಭಾಶಯಗಳು ಎಂದರು.

format: 3; filter: 0; fileterIntensity: 0.0; filterMask: 0; captureOrientation: 0;
runfunc: 0; algolist: 0;
isCameraSense: false;
multi-frame: 1;
brp_mask:0;
brp_del_th:0.0000,0.0000;
brp_del_sen:0.0000,0.0000;
motionR: 0;
delta:1;
bokeh:1;
module: photo;hw-remosaic: false;touch: (-1.0, -1.0);sceneMode: 12582912;cct_value: 0;AI_Scene: (-1, -1);aec_lux: 278.0;aec_lux_index: 0;albedo: ;confidence: ;motionLevel: -1;weatherinfo: weather?null, icon:null, weatherInfo:100;temperature: 35;zeissColor: nature;


ಈ ಸಂದರ್ಭ ಹಿಲಾಲ್ ಮಸೀದಿ ಕಮಿಟಿ ಪ್ರಮುಖರು, ಸದಸ್ಯರು, ನುಸ್ರತುಲ್ ಇಸ್ಲಾಂ ಯೂತ್ ಅಸೋಸಿಯೇಷನ್ ಸದಸ್ಯರು ಇದ್ದರು.
ಕೂಡಿಗೆ, ನಂಜರಾಯಪಟ್ಟಣ, ಹೊಸಕೋಟೆ, ಶುಂಠಿಕೊಪ್ಪ ಸೇರಿದಂತೆ ಇನ್ನಿತರ ಕಡೆಗಳಲ್ಲಿ ಈದುಲ್ ಫಿತರ್ ಹಬ್ಬವನ್ನು ಆಚರಿಸಲಾಯಿತು. ಗುರುವಾರ ರಾತ್ರಿ ಚಂದ್ರ ದರ್ಶನವಾದ ಹಿನ್ನಲೆ ಶಾಫಿ ಬಾಂಧವರಿಂದ ಶುಕ್ರವಾರ ಹಬ್ಬವನ್ನು ಆಚರಿಸಲಾಯಿತು. ಶನಿವಾರದಂದು ಹನಫಿ ಬಾಂಧವರು ಈದುಲ್ ಫಿತರ್ ಹಬ್ಬವನ್ನು ಆಚರಿಸಲಿದ್ದಾರೆ. ಕುಶಾಲನಗರದ ಗಂಧಕೋಟೆಯ ಈದ್ಗಾ ಮೈದಾನದಲ್ಲಿ ಈದುಲ್ ಫಿತರ್ ಹಬ್ಬದ ವಿಶೇಷ ಪ್ರಾರ್ಥನೆ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು