2:17 AM Friday1 - May 2026
ಬ್ರೇಕಿಂಗ್ ನ್ಯೂಸ್
ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ…

ಇತ್ತೀಚಿನ ಸುದ್ದಿ

Election Commission | ನವದೆಹಲಿ: ಮಾ.4, 5ರಂದು ಎಲ್ಲ ರಾಜ್ಯಗಳ / ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಚುನಾವಣಾಧಿಕಾರಿಗಳ 2 ದಿನಗಳ ಸಮ್ಮೇಳನ

24/02/2025, 21:26

ನವದೆಹಲಿ (reporterkarnataka.com): ಭಾರತೀಯ ಚುನಾವಣಾ ಆಯೋಗದಿಂದ ಎಲ್ಲಾ ರಾಜ್ಯಗಳ / ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಚುನಾವಣಾಧಿಕಾರಿಗಳ ಎರಡು ದಿನಗಳ ಸಮ್ಮೇಳನವನ್ನು ಮಾರ್ಚ್ 4 ಮತ್ತ 5ರಂದು‌ ಇಂಡಿಯಾ ಇಂಟರ್ ನ್ಯಾಶನಲ್ ಇನ್ಸ್ಟಿಟ್ಯೂಟ್ ಆಫ್ ಡೆಮಾಕ್ರಸಿ & ಎಲೆಕ್ಷನ್ ಮ್ಯಾನೇಜ್ ಮೆಂಟ್, ನವದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದೆ.
ಭಾರತ ಮುಖ್ಯ ಚುನಾವಣಾಧಿಕಾರಿಗಳಾಗಿ ನೇಮಕವಾಗಿರುವ ಜ್ಞಾನೇಶ್ ಕುಮಾರ್ ಅಧಿಕಾರ ವಹಿಸಿಕೊಂಡ ನಂತರ ಹಮ್ಮಿಕೊಳ್ಳಲಾಗಿರುವ ಮೊದಲ‌ ಸಮ್ಮೇಳನ ಇದಾಗಿದೆ. ಮೊದಲನೆಯದಾಗಿ‌ ಎಲ್ಲ ರಾಜ್ಯಗಳ ಮುಖ್ಯ ಚುನಾವಣಾಧಿಕಾರಿಗಳಿಗೆ ಸಮ್ಮೇಳನದಲ್ಲಿ ಭಾಗವಹಿಸುವಂತೆ ಎಲ್ಲಾ ಜಿಲ್ಲಾ ಚುನಾವಣಾಧಿಕಾರಿಗಳು (ಡಿ.ಇ.ಓ) ಮತ್ತು ಎಲೆಕ್ಟ್ರೋಲ್ ರಿಜಿಸ್ಟ್ರೇಷನ್ ಅಧಿಕಾರಿಗಳನ್ನು (ಇ.ಆರ್.ಓ) ನಾಮನಿರ್ದೇಶನ ಮಾಡಲು ಸೂಚನೆ ನೀಡಲಾಗಿದೆ.
ಶಾಸನಬದ್ಧ ಅಧಿಕಾರಿಗಳಾಗಿ, ಎಲ್ಲಾ ರಾಜ್ಯ / ಕೇಂದ್ರಾಡಳಿತ ಮುಖ್ಯ ಚುನಾವಣಾಧಿಕಾರಿಗಳು, ಜಿಲ್ಲಾ ಚುನಾವಣಾಧಿಕಾರಿಗಳು‌ ಮತ್ತು ಎಲೆಕ್ಟ್ರೋಲ್ ರಿಜಿಸ್ಟ್ರೇಷನ್ ಅಧಿಕಾರಿಗಳು (ಇ.ಆರ್.ಓ) ರಾಜ್ಯ, ಜಿಲ್ಲಾ ಮತ್ತು ವಿಧಾನಸಭಾ ಕ್ಷೇತ್ರದ ಮಟ್ಟದಲ್ಲಿ ಪ್ರಮುಖ ಕಾರ್ಯಗಳನ್ನು ನಿರ್ವಹಿಸಲು ಈ ಸಮ್ಮೇಳನವು ಅಗತ್ಯ ಮಾಹಿತಿಯನ್ನು ಒದಗಿಸಲಿದೆ. ಅಲ್ಲದೆ ಎರಡು ದಿನಗಳ ಈ ಸಮ್ಮೇಳನವು ಪರಸ್ಪರರ ಅನುಭವಗಳಿಂದ ಬುದ್ದಿಮತ್ತೆ ಮತ್ತು ಪರಸ್ಪರ ಕಲಿಕೆಗೆ ರಾಜ್ಯಗಳು / ಕೇಂದ್ರಾಡಳಿತ ಚುನಾವಣಾ ಅಧಿಕಾರಿಗಳಿಗೆ ಒಂದು ವೇದಿಕೆಯನ್ನು ನೀಡುತ್ತದೆ.
ಸಮ್ಮೇಳನದ ಮೊದಲನ ದಿನ ಆಧುನಿಕ ಚುನಾವಣಾ ನಿರ್ವಹಣೆಯ ಪ್ರಮುಖ ಕ್ಷೇತ್ರಗಳ ಬಗ್ಗೆ ಮಾಹಿತಿ ತಂತ್ರಜ್ಞಾನ, ಪರಿಣಾಮಕಾರಿ ಸಂವಹನ, ಸಾಮಾಜಿಕ ಮಾಧ್ಯಮವನ್ನು ಹೆಚ್ಚಿಸುವುದು ಮತ್ತು ಚುನಾವಣಾ ಪ್ರಕ್ರಿಯೆಗಳಲ್ಲಿ ವಿಭಿನ್ನ ಕಾರ್ಯಕರ್ತರ ಶಾಸನಬದ್ಧ ಪಾತ್ರದ ಕುರಿತು ಚರ್ಚೆಗಳನ್ನು ನಡೆಸಲಿದೆ.
ಎರಡನೇ ದಿನ, ರಾಜ್ಯಗಳು/ಕೇಂದ್ರಾಡಳಿತದ‌ ಮುಖ್ಯ ಚುನಾವಣಾಧಿಕಾರಿಗಳು ಹಿಂದಿನ ದಿನದ ವಿಷಯಾಧಾರಿತ ಚರ್ಚೆಗಳ ಕುರಿತು ಆಯಾ ಕ್ರಿಯಾ ಯೋಜನೆಯನ್ನು ಪ್ರಸ್ತುತಪಡಿಸುತ್ತಾರೆ ಎಂದು‌ ಭಾರತ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯ ಪ್ರಕಟಣೆ ತಿಳಿಸಿದೆ

ಇತ್ತೀಚಿನ ಸುದ್ದಿ

ಜಾಹೀರಾತು