2:41 PM Monday22 - September 2025
ಬ್ರೇಕಿಂಗ್ ನ್ಯೂಸ್
ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ…

ಇತ್ತೀಚಿನ ಸುದ್ದಿ

ಎಲೆಕ್ಟ್ರೋಲ್ ಬಾಂಡ್ ಒಂದು ಬ್ರಹ್ಮಾಂಡ ಭ್ರಷ್ಟಾಚಾರ: ಬೀದರ್ ನಲ್ಲಿ ಸಚಿವ ಈಶ್ವರ ಖಂಡ್ರೆ ಕಿಡಿ

29/03/2024, 17:47

ಬೀದರ್(reporterkarnataka.com):ಎಲೆಕ್ಟ್ರೋಲ್ ಬಾಂಡ್ ಒಂದು ಬ್ರಹ್ಮಾಂಡ ಭ್ರಷ್ಟಾಚಾರವಾಗಿದ್ದು, ಬಾಂಡ್ ದೇಣಿಗೆ ನೀಡಿದವರಿಗೆ ಸರ್ಕಾರದ ಎಲ್ಲ ಟೆಂಡರ್ ನೀಡುವ ಮೂಲಕ ಪ್ರಜಾಪ್ರಭುತ್ವವನ್ನು ಕಗ್ಗೊಲೆ ಮಾಡಲು ಹೊರಟಿದ್ದಾರೆ ಎಂದು ರಾಜ್ಯದ ಅರಣ್ಯ, ಪರಿಸರ ಹಾಗೂ ಜೀವಶಾಸ್ತ್ರ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಮಂತ್ರಿ ಈಶ್ವರ ಖಂಡ್ರೆ ಹೇಳಿದರು.
ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಬಾಂಡ್ ದೇಣಿಗೆ ನೀಡಿದವರಿಗೆ ಸರ್ಕಾರದ ಎಲ್ಲ ಟೆಂಡರ್ ನೀಡುವ ಮೂಲಕ ಪ್ರಜಾಪ್ರಭುತ್ವವನ್ನು ಕಗ್ಗೊಲೆ ಮಾಡಿದೆ. ಈಡಿ, ಸಿಬಿಐಗಳನ್ನು ಬಳಿಸಿ ವಿರೋಧ ಪಕ್ಷದವರಿಗೆ ಜೈಲಿಗೆ ಹಾಕುವ ಹುನ್ನಾರ ನಡೆಸುತ್ತಿದೆ ಎಂದರು.
ಬಿಜೆಪಿ ಸಂವಿಧಾನ ಬದಲಿಸುವ ಮಾತುಗಳನ್ನಾಡಿ ದೇಶವನ್ನು ಅರಾಜಕತೆಯತ್ತ ಕೊಂಡೊಯ್ಯುವ ಪಿರೂರಿ ನಡೆಸುತ್ತಿದೆ. ಬೆಲೆಯೇರಿಕೆ, ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ ಸೇರಿದಂತೆ ದಿನನಿತ್ಯದ ವಸ್ತುಗಳು ಸಹ ದುಬಾರಿಯಾಗಿವೆ. 10 ವರ್ಷದ ಬಿಜೆಪಿ ಅಡಳಿತದಲ್ಲಿ ಜಾತಿ- ಜಾತಿಗಳ ಮಧ್ಯ ವಿಷ ಬೀಜ ಬಿತ್ತುವ ಕಾರ್ಯ ನಡೆದಿದ್ದು ಅಭಿವೃದ್ಧಿ ಶೂನ್ಯ. ಹಾಗಾಗಿ ದೇಶದಲ್ಲಿ ಈ ಬಾರಿ ಬಿಜೆಪಿ ಸರ್ಕಾರ ಬರಲು ಸಾಧ್ಯವಿಲ್ಲ. ರಾಜ್ಯದಲ್ಲಿ ನಾವು ಕನಿಷ್ಟ 25 ಸೀಟು ಗೆಲ್ಲುತ್ತೇವೆ. ಮುಂಬರುವ 10 ವರ್ಷಗಳ ವರೆಗೆ ನಮ್ಮ ಗ್ಯಾರಂಟಿ ಯೋಜನೆಗಳು ಜಾರಿಯಲ್ಲಿರುತ್ತವೆ ಎಂದವರು ಹೇಳಿದರು.
ಕೇಂದ್ರ ಸಚಿವ ಭಗವಂತ ಖೂಬಾ ಅವರಿಗೆ ಸುಳ್ಳೆ ಮನೆದೇವರಾಗಿದ್ದು, ಸುಳ್ಳು ಹೇಳಿಕೊಂಡು, ಸ್ವಪಕ್ಷಿಯವರ ಮುನಿಸು ಈ ಬಾರಿ ಅವರಿಗೆ ಸೋಲಿನ ರುಚಿ ದೊರೆಯಲಿದೆ ಎಂದು ಖಂಡ್ರೆ ಹೇಳಿದರು.
ಔರಾದ್ ತಾಲೂಕಿನ ಬಲ್ಲೂರ್ ಬಳಿ ಸಿಪೆಟ್ ಕಾಮಗಾರಿ ಪ್ರಾರಂಭಿಸುವುದಾಗಿ ಹೇಳಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಂದ ಪೂಜೆ ಮಾಡಿಸಿದರು. ನಂತರ ಕೇಂದ್ರದಿಂದ 90 ಕೋಟಿ ತರುವುದಾಗಿ ಹೇಳಿ ಒಂದು ನಯಾ ಪೈಸೆ ತರಲಿಕ್ಕೆ ಇವರಿಂದ ಆಗಲಿಲ್ಲ. ಪ್ರಧಾನಿ ನರೇಂದ್ರ ಮೋದಿಯವರಿಂದ ಎಫ್.ರೇಡಿಯೊ ಕೇಂದ್ರಕ್ಕೆ ಚಾಲನೆ ಕೊಡಿಸಿ ಅದು ಅಲ್ಲಿಯೆ ಮಕಾಡೆ ಮಲಗಿದೆ. ವಿಮಾನ ಸೇವೆ ನಿಂತು ಹೋಗಿದೆ. ಕಳೆದ 10 ವರ್ಷದಲ್ಲಿ ಇವರು ಮಾಡಿರುವ ಸಾಧನೆಗಳಾದರೂ ಏನು? ಎಂದು ಪ್ರಶ್ನಿಸಿದರು.
ಕಳೆದ 10 ವರ್ಷದಲ್ಲಿ ಪ್ರಧಾನ ಮಂತ್ರಿ ಆವಾಜ್ ಯೋಜನೆಯಡಿ ಜಿಲ್ಲೆಗೆ ಎಷ್ಟು ಮನೆ ತಂದಿದಿರಿ, ಎಷ್ಟು ಜನರಿಗೆ ಶುದ್ದ ಕುಡಿಯುವ ನೀರು ಕೊಟ್ಟಿದ್ದಿರಿ? ರಾಷ್ಟ್ರೀಯ ಹೆದ್ದಾರಿಗಳೆಲ್ಲ ಕಳಪೆ ಕಾಮಗಾರಿ ಆಗಿರುವ ಬಗ್ಗೆ ನನ್ನ ಗಮನಕ್ಕೆ ಬಂದಿದ್ದು ತಪ್ಪಿತಸ್ತರ ವಿರೂದ್ಧ ಕ್ರಮ ಆಗಲಿದೆ ಎಂದರು.
ರಾಜ್ಯದ ಪೌರಾಡಳಿತ ಸಚಿವ ರಹಿಮ್ ಖಾನ್, ಲೋಕಸಭೆ ಅಭ್ಯರ್ಥಿ ಸಾಗರ ಖಂಡ್ರೆ, ಮಾಜಿ ಶಾಸಕ ಅಶೋಕ ಖೇಣಿ, ಮಾಜಿ ವಿಧಾನ ಪರಿಷತ್ ಸದಸ್ಯ ವಿಜಯಸಿಂಗ್ ಮಾತನಾಡಿದರು.
ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಾಲಾ ನಾರಯಣ ರಾವ್, ಮಾಜಿ ಸಚಿವ ರಾಜಶೇಖರ ಪಾಟೀಲ್, ವಿಧಾನ ಪರಿಷತ್ ಸದಸ್ಯರಾದ ಅರವಿಂದ ಅರಳಿ, ಭೀಮರಾವ ಪಾಟೀಲ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಪ್ರಚಾರ ಸಮಿತಿ ಅಧ್ಯಕ್ಷ ಅಮೃತರಾವ ಚಿಮಕೊಡೆ, ಮುಖಂಡರಾದ ಸುಭಾಷ ರಾಠೋಡ, ಭೀಮಸೇನರಾವ ಶಿಂಧೆ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು