ಇತ್ತೀಚಿನ ಸುದ್ದಿ
ಆನೆ ದಾಳಿ; ವೃದ್ದ ವ್ಯಕ್ತಿಗೆ ಗಂಭೀರ ಗಾಯ; ವಿರಾಜಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲು
23/01/2026, 18:23
ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ವಿರಾಜಪೇಟೆ ತಾಲೂಕು ಬಾಡಗ ಬಾಣಂಗಾಲದ ಮಟ್ಟ ಪೈಸಾರಿ ನಿವಾಸಿ ಪೈಸಾರಿ ಸಮೀಪ ನಡೆದುಕೊಂಡು ಹೋಗುತ್ತಿದ್ದಾಗ ಕಾಡಾನೆ ದಾಳಿ ನಡೆಸಿದ ಪರಿಣಾಮ ವೃದ್ದರೊಬ್ಬರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ಇಂದು ಬೆಳಗ್ಗೆ ಆನೆ ದಾಳಿಗೆ ಒಳಗಾದ ಅಲ್ಲಿನ ನಿವಾಸಿ ದೇವರಾಜ್ (61) ತೊಡೆ ಭಾಗಕ್ಕೆ ಗಂಭೀರ ಸ್ವರೂಪಗಳ ಗಾಯಗಳಾಗಿದ್ದು, ಗಾಯಾಳುವನ್ನು ವಿರಾಜಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ.
ಸುದ್ದಿ ತಿಳಿದು ಅರಣ್ಯ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.












