2:30 PM Monday7 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ಇತ್ತೀಚಿನ ಸುದ್ದಿ

Elephant Attack | ಪುತ್ತೂರು: ಕಾಡಾನೆ ದಾಳಿಗೆ ಮಹಿಳೆ ದಾರುಣ ಸಾವು; ಅರಣ್ಯ ಸಚಿವ ಈಶ್ವರ ಖಂಡ್ರೆ ಸಂತಾಪ

30/04/2025, 12:35

ಪುತ್ತೂರು(reporterkarnataka.com): ಪುತ್ತೂರು ತಾಲೂಕಿನ‌.ಮಾಡಾವು ಗ್ರಾಮದಲ್ಲಿ ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಅರಣ್ಯ ಸಚಿವ ಈಶ್ವರ ಖಂಡ್ರೆ ಸಂತಾಪ ಸೂಚಿಸಿದ್ದಾರೆ.
ರಬ್ಬರ್ ಟ್ಯಾಪಿಂಗ್ ಕೆಲಸಕ್ಕೆ ತೆರಳುತ್ತಿದ್ದ ಸೆಲ್ಲಮ್ಮ (65) ಎಂಬ ಮಹಿಳೆಯ ಮೇಲೆ ಕಾಡಾನೆ ದಾಳಿ ನಡೆಸಿದೆ. ಗಂಭೀರ ಗಾಯಗೊಂಡ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದರು.
ಮೃತ ಮಹಿಳೆ ಮಾಡವು ಗ್ರಾಮದ ಕನಿಯಾರು ಸಿ ಆರ್ ಸಿ ಕಾಲೊನಿ ನಿವಾಸಿಯಾಗಿದ್ದರು. ಅವರು ಕೆ ಎಫ್ ಡಿ ಸಿ ಯ ರಬ್ಬರ್ ತೋಟದಲ್ಲಿ ರಬ್ಬರ್ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದರು. ಎಂದಿನಂತೆ ಮಂಗಳವಾರ ಬೆಳಿಗ್ಗೆ ಹತ್ರ್ಯಡ್ಕ ಎಂಬಲ್ಲಿ ರಬ್ಬರ್ ಟ್ಯಾಪಿಂಗ್ ಮಾಡುತ್ತಿದ್ದ ವೇಳೆ ಕಾಡಾನೆಯೊಂದು ದಾಳಿ ಮಾಡಿ ಸೆಲ್ಲಮ್ಮ ಅವರನ್ನು ತುಳಿದು ಗಂಭೀರ ಗಾಯಗೊಳಿಸಿದೆ. ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದರು. ಘಟನಾ ಸ್ಥಳಕ್ಕೆ ಅರಣ್ಯಾಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಮೃತರ ಪುತ್ರ ಟಿ ಯೋಗರಾಜ್ ಅವರು ನೀಡಿದ ದೂರಿನಂತೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
*ಸಚಿವ ಈಶ್ವರ ಖಂಡ್ರೆ ಸಂತಾಪ:* ಪುತ್ತೂರು ತಾಲೂಕಿನ ಮಾಡಾವು ಗ್ರಾಮದಲ್ಲಿ 65 ವರ್ಷದ ಮಹಿಳೆಯೊಬ್ಬರು ಕಾಡಾನೆ ದಾಳಿಯಿಂದ ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿ, ಈ ದುಃಖದ ಸಂದರ್ಭದಲ್ಲಿ ಸರ್ಕಾರ ಅವರ ಕುಟುಂಬದ ಜೊತೆ ನಿಲ್ಲುತ್ತದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸಂತಾಪ ಸೂಚಿಸಿದ್ದಾರೆ.
ಮೃತ ಮಹಿಳೆಯ ಆತ್ಮಕ್ಕೆ ಶಾಂತಿ ದೊರಕಲಿ, ಅವರ ಕುಟುಂಬಕ್ಕೆ ಈ ನೋವು ತಾಳಿಕೊಳ್ಳುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು