2:02 PM Wednesday19 - August 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :…

ಇತ್ತೀಚಿನ ಸುದ್ದಿ

Elephant Attack | ಪುತ್ತೂರು: ಕಾಡಾನೆ ದಾಳಿಗೆ ಮಹಿಳೆ ದಾರುಣ ಸಾವು; ಅರಣ್ಯ ಸಚಿವ ಈಶ್ವರ ಖಂಡ್ರೆ ಸಂತಾಪ

30/04/2025, 12:35

ಪುತ್ತೂರು(reporterkarnataka.com): ಪುತ್ತೂರು ತಾಲೂಕಿನ‌.ಮಾಡಾವು ಗ್ರಾಮದಲ್ಲಿ ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಅರಣ್ಯ ಸಚಿವ ಈಶ್ವರ ಖಂಡ್ರೆ ಸಂತಾಪ ಸೂಚಿಸಿದ್ದಾರೆ.
ರಬ್ಬರ್ ಟ್ಯಾಪಿಂಗ್ ಕೆಲಸಕ್ಕೆ ತೆರಳುತ್ತಿದ್ದ ಸೆಲ್ಲಮ್ಮ (65) ಎಂಬ ಮಹಿಳೆಯ ಮೇಲೆ ಕಾಡಾನೆ ದಾಳಿ ನಡೆಸಿದೆ. ಗಂಭೀರ ಗಾಯಗೊಂಡ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದರು.
ಮೃತ ಮಹಿಳೆ ಮಾಡವು ಗ್ರಾಮದ ಕನಿಯಾರು ಸಿ ಆರ್ ಸಿ ಕಾಲೊನಿ ನಿವಾಸಿಯಾಗಿದ್ದರು. ಅವರು ಕೆ ಎಫ್ ಡಿ ಸಿ ಯ ರಬ್ಬರ್ ತೋಟದಲ್ಲಿ ರಬ್ಬರ್ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದರು. ಎಂದಿನಂತೆ ಮಂಗಳವಾರ ಬೆಳಿಗ್ಗೆ ಹತ್ರ್ಯಡ್ಕ ಎಂಬಲ್ಲಿ ರಬ್ಬರ್ ಟ್ಯಾಪಿಂಗ್ ಮಾಡುತ್ತಿದ್ದ ವೇಳೆ ಕಾಡಾನೆಯೊಂದು ದಾಳಿ ಮಾಡಿ ಸೆಲ್ಲಮ್ಮ ಅವರನ್ನು ತುಳಿದು ಗಂಭೀರ ಗಾಯಗೊಳಿಸಿದೆ. ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದರು. ಘಟನಾ ಸ್ಥಳಕ್ಕೆ ಅರಣ್ಯಾಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಮೃತರ ಪುತ್ರ ಟಿ ಯೋಗರಾಜ್ ಅವರು ನೀಡಿದ ದೂರಿನಂತೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
*ಸಚಿವ ಈಶ್ವರ ಖಂಡ್ರೆ ಸಂತಾಪ:* ಪುತ್ತೂರು ತಾಲೂಕಿನ ಮಾಡಾವು ಗ್ರಾಮದಲ್ಲಿ 65 ವರ್ಷದ ಮಹಿಳೆಯೊಬ್ಬರು ಕಾಡಾನೆ ದಾಳಿಯಿಂದ ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿ, ಈ ದುಃಖದ ಸಂದರ್ಭದಲ್ಲಿ ಸರ್ಕಾರ ಅವರ ಕುಟುಂಬದ ಜೊತೆ ನಿಲ್ಲುತ್ತದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸಂತಾಪ ಸೂಚಿಸಿದ್ದಾರೆ.
ಮೃತ ಮಹಿಳೆಯ ಆತ್ಮಕ್ಕೆ ಶಾಂತಿ ದೊರಕಲಿ, ಅವರ ಕುಟುಂಬಕ್ಕೆ ಈ ನೋವು ತಾಳಿಕೊಳ್ಳುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು