ಇತ್ತೀಚಿನ ಸುದ್ದಿ
ಎಲ್ಯಾರ್‌ಪದವು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ: ಜು. 13ರಂದು ಉಚಿತ ನೇತ್ರ ತಪಾಸಣಾ ಮತ್ತು ಸಾಮಾನ್ಯ ವೈದ್ಯಕೀಯ ಶಿಬಿರ
10/07/2025, 23:06

ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಎಲ್ಯಾರ್‌ಪದವು ಶಾಖೆಯ ಪ್ರಥಮ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ನೇತ್ರ ತಪಾಸಣಾ ಮತ್ತು ಸಾಮಾನ್ಯ ವೈದ್ಯಕೀಯ ಶಿಬಿರ ಜು. ೧೩ ಭಾನುವಾರ ಪೂರ್ವಾಹ್ನ ಸಮಯ ೯.೩೦ ರಿಂದ ಮಧ್ಯಾಹ್ನ ೧೨.೩೦ರ ವರೆಗೆ “ಶರೂನ್ ಸ್ಟçಕ್ಚರ್”, ಹೋಲಿ ಕ್ರಾಸ್ ಚರ್ಚ್ ಬಳಿ, ಎಲ್ಯಾರ್‌ಪದವು, ಶಾಖೆಯ ಆವರಣ) ಕೊಣಾಜೆಯಲ್ಲಿ ಆಯೋಜಿಸಲಾಗಿದೆ.
ಈ ವೈದ್ಯಕೀಯ ಶಿಬಿರದಲ್ಲಿ ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ನಾಟೆಕಲ್ ಮಂಗಳೂರು, ಇವರ ನುರಿತ ವೈದ್ಯರ ತಂಡದಿಂದ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತ್ರ ಚಿಕಿತ್ಸೆ, ಮಧುಮೇಹ ತಪಾಸಣೆ, ಬಿ.ಪಿ. ತಪಾಸಣೆ, ಚರ್ಮರೋಗ, ಕೀಲು ಮತ್ತು ಗಂಟು ನೋವು ತಪಾಸಣೆ, ಸಾಮಾನ್ಯ ವೈದ್ಯಕೀಯ ತಪಾಸಣೆ , ಉಚಿತ ಔಷಧಿ ವಿತರಣೆ, ಇನ್ನಿತರ ವೈದ್ಯಕೀಯ ಸೇವೆಗಳು, ಹೆಚ್ಚಿನ ಚಿಕಿತ್ಸೆಗೆ ಹಸಿರು ಕಾರ್ಡನ್ನು ನೀಡುವುದು ಹಾಗೂ ಸಂಘದ ವತಿಯಿಂದ ಉಚಿತ ಕನ್ನಡಕ ವಿತರಣೆ ಮಾಡಲಾಗುವುದು.
ಈ ವೈದ್ಯಕೀಯ ಶಿಬಿರವು ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ (ರಿ.) ಗ್ರಾಮಚಾವಡಿ, ಕೊಣಾಜೆ, ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ ಹಾಗೂ ಮಹಿಳಾ ಸಂಘ (ರಿ.) ಅಂಬ್ಲಮೊಗರು, ಭಾರತೀಯ ಕ್ಯಾಥೋಲಿಕ್ ಯುವ ಸಂಚಲನ ಎಲ್ಯಾರ್‌ಪದವು, ಯುವ ಕ್ಯಾಥೋಲಿಕ್ ಸಂಚಲನ ಎಲ್ಯಾರ್‌ಪದವು ಹಾಗೂ ಆದಿಮಾಯೆ ರಾಮ ದತ್ತಾಂಜನೇಯ ಭಜನಾ ಮಂದಿರ (ರಿ.) ಎಲ್ಯಾರ್‌ಪದವು ಇವರುಗಳ ಸಹಕಾರದೊಂದಿಗೆ ನಡೆಯಲಿದೆ.
ಸಂಘದ ಸದಸ್ಯರು ಮತ್ತು ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯಬೇಕಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.