3:50 PM Thursday24 - September 2026
ಬ್ರೇಕಿಂಗ್ ನ್ಯೂಸ್
ಅ.11ರಿಂದ ಕೆಆರ್‌ಎಸ್‌ನಲ್ಲಿ ಸಂಪ್ರದಾಯಬದ್ಧ ಕಾವೇರಿ ಆರತಿ: ಮುಖ್ಯಮಂತ್ರಿ ಉದ್ಘಾಟನೆ *ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ…

ಇತ್ತೀಚಿನ ಸುದ್ದಿ

ಎಲ್ಯಾರ್‌ಪದವು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ: ಜು. 13ರಂದು ಉಚಿತ ನೇತ್ರ ತಪಾಸಣಾ ಮತ್ತು ಸಾಮಾನ್ಯ ವೈದ್ಯಕೀಯ ಶಿಬಿರ

10/07/2025, 23:06

ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಎಲ್ಯಾರ್‌ಪದವು ಶಾಖೆಯ ಪ್ರಥಮ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ನೇತ್ರ ತಪಾಸಣಾ ಮತ್ತು ಸಾಮಾನ್ಯ ವೈದ್ಯಕೀಯ ಶಿಬಿರ ಜು. ೧೩ ಭಾನುವಾರ ಪೂರ್ವಾಹ್ನ ಸಮಯ ೯.೩೦ ರಿಂದ ಮಧ್ಯಾಹ್ನ ೧೨.೩೦ರ ವರೆಗೆ “ಶರೂನ್ ಸ್ಟçಕ್ಚರ್”, ಹೋಲಿ ಕ್ರಾಸ್ ಚರ್ಚ್ ಬಳಿ, ಎಲ್ಯಾರ್‌ಪದವು, ಶಾಖೆಯ ಆವರಣ) ಕೊಣಾಜೆಯಲ್ಲಿ ಆಯೋಜಿಸಲಾಗಿದೆ.
ಈ ವೈದ್ಯಕೀಯ ಶಿಬಿರದಲ್ಲಿ ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ನಾಟೆಕಲ್ ಮಂಗಳೂರು, ಇವರ ನುರಿತ ವೈದ್ಯರ ತಂಡದಿಂದ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತ್ರ ಚಿಕಿತ್ಸೆ, ಮಧುಮೇಹ ತಪಾಸಣೆ, ಬಿ.ಪಿ. ತಪಾಸಣೆ, ಚರ್ಮರೋಗ, ಕೀಲು ಮತ್ತು ಗಂಟು ನೋವು ತಪಾಸಣೆ, ಸಾಮಾನ್ಯ ವೈದ್ಯಕೀಯ ತಪಾಸಣೆ , ಉಚಿತ ಔಷಧಿ ವಿತರಣೆ, ಇನ್ನಿತರ ವೈದ್ಯಕೀಯ ಸೇವೆಗಳು, ಹೆಚ್ಚಿನ ಚಿಕಿತ್ಸೆಗೆ ಹಸಿರು ಕಾರ್ಡನ್ನು ನೀಡುವುದು ಹಾಗೂ ಸಂಘದ ವತಿಯಿಂದ ಉಚಿತ ಕನ್ನಡಕ ವಿತರಣೆ ಮಾಡಲಾಗುವುದು.
ಈ ವೈದ್ಯಕೀಯ ಶಿಬಿರವು ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ (ರಿ.) ಗ್ರಾಮಚಾವಡಿ, ಕೊಣಾಜೆ, ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ ಹಾಗೂ ಮಹಿಳಾ ಸಂಘ (ರಿ.) ಅಂಬ್ಲಮೊಗರು, ಭಾರತೀಯ ಕ್ಯಾಥೋಲಿಕ್ ಯುವ ಸಂಚಲನ ಎಲ್ಯಾರ್‌ಪದವು, ಯುವ ಕ್ಯಾಥೋಲಿಕ್ ಸಂಚಲನ ಎಲ್ಯಾರ್‌ಪದವು ಹಾಗೂ ಆದಿಮಾಯೆ ರಾಮ ದತ್ತಾಂಜನೇಯ ಭಜನಾ ಮಂದಿರ (ರಿ.) ಎಲ್ಯಾರ್‌ಪದವು ಇವರುಗಳ ಸಹಕಾರದೊಂದಿಗೆ ನಡೆಯಲಿದೆ.
ಸಂಘದ ಸದಸ್ಯರು ಮತ್ತು ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯಬೇಕಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು