2:30 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

22/08/2025, 22:06

* *ಡಿಸಿಎಂ‌ ಶಿವಕುಮಾರ್ ಅಧ್ಯಕ್ಷತೆಯಲ್ಲಿ ಕರಾವಳಿ ಅಭಿವೃದ್ಧಿ ಬಗ್ಗೆ ಚರ್ಚೆ

ಬೆಂಗಳೂರು(reporter Karnataka.com): ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಭಿವೃದ್ಧಿಗೆ ಪೂರಕವಾದ ವಾತಾವರಣವಿದ್ದು, ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಈ ಜಿಲ್ಲೆಗಳನ್ನು ‌ಅಭಿವೃದ್ಧಿ ಪಡಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ವಿಧಾನ ಸಭಾಧ್ಯಕ್ಷರಾದ ಯು.ಟಿ.ಖಾದರ್ ಹಾಗೂ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ‌ ಶುಕ್ರವಾರ ನಡೆದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಭಿವೃದ್ಧಿ ಬಗ್ಗೆ ಸಮಗ್ರವಾಗಿ ಚರ್ಚೆ ನಡೆಸಲಾಯಿತು.
ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಕಷ್ಟು ದೇವಾಲಯಗಳಿವೆ. ಇವು ಪ್ರವಾಸೋದ್ಯಮಕ್ಕೆ ಪೂರಕವಾಗಿವೆ. ಹೊರ ರಾಜ್ಯಗಳಲ್ಲಿ ಉಳಿದುಕೊಂಡಿರುವ ಕರಾವಳಿ ಮೂಲದ ಉದ್ಯಮಿಗಳು ಈ ಭಾಗಗಳಲ್ಲಿ ಬಂದು ಬಂಡವಾಳ ಹೂಡುವಂತಾಗಬೇಕು. ಹೀಗಾದರೆ ಮುಂದಿನ ಎರಡ್ಮೂರು ವರ್ಷದಲ್ಲಿ ಸಮಗ್ರ ಅಭಿವೃದ್ಧಿ ಕಾಣಬಹುದು ಎಂದರು.
ಸಭೆಯಲ್ಲಿ ಸಚಿವರಾದ ಎಚ್.ಕೆ.ಪಾಟೀಲ್,‌ ದಿನೇಶ್ ಗುಂಡೂರಾವ್, ಮಂಕಾಳ್ ವೈದ್ಯ, ಕರಾವಳಿ ಜಿಲ್ಲೆಗಳ ಶಾಸಕರು, ವಿಧಾನ ಪರಿಷತ್ ಸದಸ್ಯರು, ಉನ್ನತ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು