8:31 AM Wednesday5 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಮಾಜಿ ಪ್ರಧಾನಿ ದೇವೇಗೌಡರ ಚುನಾವಣಾ ರಾಜಕೀಯ ಅಂತ್ಯ: ಬಿಜೆಪಿಯಿಂದ ನಾಗರಾಜಗೆ ರಾಜ್ಯಸಭೆ ಟಿಕೆಟ್

08/06/2026, 18:15

ಬೆಂಗಳೂರು(reporterkarnataka.com): ಕರ್ನಾಟಕದಿಂದ ರಾಜ್ಯಸಭೆಗೆ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಭಾನುವಾರ ರಾತ್ರಿ ಘೋಷಿಸಿದ್ದು, ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡರ ಸಂಸದೀಯ ರಾಜಕೀಯ ಇನಿಂಗ್ಸ್ ಬಹುತೇಕ ತೆರೆಬಿದ್ದಿರುವುದರ ಸ್ಪಷ್ಟ ಸೂಚನೆಯಾಗಿದೆ.

*ಬಿಜೆಪಿಯಿಂದ ನಾಗರಾಜಗೆ ರಾಜ್ಯಸಭೆ ಟಿಕೆಟ್:*
ಬಿಜೆಪಿಯಿಂದ ರಾಜ್ಯಸಭೆ ಅಭ್ಯರ್ಥಿಯಾಗಿ ಪ್ರೊ. ಎಂ. ನಾಗರಾಜ ಅವರ ಆಯ್ಕೆಯು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಸಂಸದೀಯ ರಾಜಕೀಯ ಜೀವನದ ಅಂತ್ಯದ ಸ್ಪಷ್ಟ ಸುಳಿವು ನೀಡಿದೆ. ಪ್ರಮುಖ ಬೆಳವಣಿಗೆಯಲ್ಲಿ ರಾಜ್ಯಸಭೆಗೆ ಬಿಜೆಪಿಯ ಹೊಸ ಅಭ್ಯರ್ಥಿಯಾಗಿ ಕರ್ನಾಟಕ ರಾಜ್ಯಸಭಾ ಚುನಾವಣೆಗೆ ಪ್ರೊ. ಎಂ. ನಾಗರಾಜ ಅವರನ್ನು ಘೋಷಿಸಿದೆ.• ದೇವೇಗೌಡರ ರಾಜಕೀಯ ಜೀವನದ ಅನಿಶ್ಚಿತತೆ ಈ ಬೆಳವಣಿಗೆಯು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರ ಸಂಸದೀಯ ರಾಜಕೀಯ ಇನಿಂಗ್ಸ್ ಬಹುತೇಕ ಅಂತ್ಯಗೊಂಡಿರುವುದರ ಸ್ಪಷ್ಟ ಸೂಚನೆಯಾಗಿದೆ.•

*ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ:*
ಕರ್ನಾಟಕದಿಂದ ಮಲ್ಲಿಕಾರ್ಜುನ ಖರ್ಗೆ, ಮನ್ಸೂರ್ ಅಲಿ ಖಾನ್ ಹಾಗೂ ಪವನ್ ಖೇರಾ ಅವರನ್ನು ರಾಜ್ಯಸಭೆಗೆ ಕಳುಹಿಸಲು ಕಾಂಗ್ರೆಸ್ ನಿರ್ಧರಿಸಿದೆ. ಮಧ್ಯಪ್ರದೇಶದ ರಾಜಕೀಯ ತಂತ್ರ ಮಧ್ಯಪ್ರದೇಶದಲ್ಲಿ ಬಿಜೆಪಿ ಮಹೇಶ್ ಕೇವತ್ ಅವರನ್ನು ಕಣಕ್ಕಿಳಿಸುವ ಮೂಲಕ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಪೈಪೋಟಿ ನೀಡಲು ಮುಂದಾಗಿದೆ. ವಿಧಾನ ಪರಿಷತ್ ಚುನಾವಣಾ ಅಭ್ಯರ್ಥಿಗಳು ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಲಿಂಗರಾಜ್ ಪಾಟೀಲ್ ಹಾಗೂ ರಘು ಕೌಟಿಲ್ಯ ಅವರಿಗೆ ಬಿಜೆಪಿ ಟಿಕೆಟ್ ನೀಡಲಾಗಿದೆ. ಎಐ ಬಳಸಿ ಸಂಸ್ಕರಿಸಲಾಗಿದೆ. ಪಿವಿ ಡಿಜಿಟಲ್ ತಂಡ ಪರಿಶೀಲಿಸಿದೆ.
ಮಧ್ಯಪ್ರದೇಶದಲ್ಲಿ ಬಿಜೆಪಿ ಮೂರನೇ ಅಭ್ಯರ್ಥಿಯಾಗಿ ಮಹೇಶ್ ಕೇವತ್ ಅವರನ್ನು ಕಣಕ್ಕಿಳಿಸಿದ್ದು, ಕಾಂಗ್ರೆಸ್‌ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ಅವರಿಗೆ ಸಂಕಷ್ಟ ಉಂಟು ಮಾಡಿದೆ.
ಭಾನುವಾರ ಮಧ್ಯರಾತ್ರಿ ವೇಳೆಗೆ ಬಿಜೆಪಿ ಪ್ರಕಟಿಸಿದ ಪಟ್ಟಿಯಲ್ಲಿ, ಪ್ರೊ. ಎಂ. ನಾಗರಾಜ ಅವರನ್ನು ಕರ್ನಾಟಕದಿಂದ ಟಿಕೆಟ್ ನೀಡಿದೆ. ತೆರವಾಗಿರುವ ನಾಲ್ಕು ಸ್ಥಾನಗಳ ಪೈಕಿ ಬಿಜೆಪಿಗೆ ಒಂದರಲ್ಲಿ ಮಾತ್ರ ಗೆಲುವು ಸಾಧಿಸುವ ಅವಕಾಶ ಇದೆ. ದೇವೇಗೌಡ ಅವರ ನಿವೃತ್ತಿಯಿಂದ ಈ ಕ್ಷೇತ್ರ ತೆರವಾಗಿದೆ.
ಕರ್ನಾಟಕದಿಂದ ಆಯ್ಕೆಯಾಗಿ ನಿವೃತ್ತಿಯಾಗುತ್ತಿರುವವರ ಪೈಕಿ ಬಿಜೆಪಿಯ ಇಬ್ಬರು, ಜೆಡಿಎಸ್‌ನ ಒಬ್ಬರು ಇದ್ದಾರೆ. ಆದರೆ ವಿಧಾನಸಭೆಯಲ್ಲಿ ಕಾಂಗ್ರೆಸ್‌ನ ಬಲ ಹೆಚ್ಚಿರುವುದರಿಂದ ಮೂರವನ್ನು ರಾಜ್ಯಸಭೆಗೆ ಕಳಿಸುವ ಅವಕಾಶ ಇದೆ.
ರಾಜಕೀಯ ರಣಾಂಗಣದಲ್ಲಿ ಡಿ.ಕೆ ಶಿವಕುಮಾರ್ Vs ದೇವೇಗೌಡ ಕುಟುಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಕಾರ್ಯದರ್ಶಿ ಮನ್ಸೂರ್ ಅಲಿ ಖಾನ್ ಹಾಗೂ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಮುಖ್ಯಸ್ಥ ಪವನ್ ಖೇರಾ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ.
ಕಳೆದ ಬಾರಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಯಿಂದ ದೇವೇಗೌಡ ರಾಜ್ಯಸಭೆ ಪ್ರವೇಶಿಸಿದ್ದರು.
ಮಧ್ಯಪ್ರದೇಶದಲ್ಲಿ ತರುಣ್ ಚುಗ್, ರಜನೀಶ್ ಅಗರವಾಲ್ ಹಾಗೂ ಕೊನೆ ಕ್ಷಣದಲ್ಲಿ ಮಹೇಶ್ ಕೇವತ್ ಅವರಿಗೆ ಟಿಕೆಟ್ ಘೊಷಿಸಿದೆ. ಲೋಕಸಭಾ ಮಾಜಿ ಸಂಸದ ನಟರಾಜನ್ ಅವರನ್ನು ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ.
ಕೇವತ್‌ ಅವರನ್ನು ಕಣಕ್ಕಿಳಿಸುವ ಮೂಲಕ ಮಧ್ಯಪ್ರದೇಶ ಕಣ ಮತ್ತಷ್ಟು ಜಟಿಲಗೊಂಡಿದೆ. ನಟರಾಜನ್ ಅವರನ್ನು ಕಣಕ್ಕಿಳಿಸಿದ್ದರಿಂದ ಅಸಮಾಧಾನಿತರಾಗಿರುವ ಕಾಂಗ್ರೆಸ್ ಶಾಸಕರು ಅಡ್ಡಮತದಾನ ಮಾಡುವ ಸಾಧ್ಯತೆ ಇರುವುದರಿಂದ ಅದರ ಲಾಭ ಪಡೆದುಕೊಳ್ಳಲು ಬಿಜೆಪಿ ಮುಂದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು