ಇತ್ತೀಚಿನ ಸುದ್ದಿ
ಇಂದಿನಿಂದ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಜಿಲ್ಲಾ ಪ್ರವಾಸ
10/08/2021, 08:06
ಮಂಗಳೂರು(reporterkarnataka.com): ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ
ಕೋಟಾ ಶ್ರೀನಿವಾಸ ಪೂಜಾರಿ ಅವರು ಇದೇ ಆ.10 ಮತ್ತು 11ರಂದು ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.
10 ರ ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಮಂಗಳೂರಿಗೆ ಆಗಮಿಸಿ ದಕ್ಷಿಣ ಕನ್ನಡ ಜಿಲ್ಲಾ ಭಾರತೀಯ ಜನತಾ ಪಕ್ಷದ ಕಚೇರಿಗೆ ಭೇಟಿ ನೀಡುವರು. ಸಂಜೆ 4 ಗಂಟೆಗೆ ಕದ್ರಿ ಮಂಜುನಾಥೇಶ್ವರ ದೇವಾಲಯಕ್ಕೆ ಭೇಟಿ. ಸಂಜೆ 4.45 ಕ್ಕೆ ಮಂಗಳಾದೇವಿ ದೇವಸ್ಥಾನಕ್ಕೆ ಭೇಟಿ ನೀಡುವರು. 5.30ಕ್ಕೆ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ತೆರಳುವರು, ಸಂಜೆ 6.30ಕ್ಕೆ ಮಂಗಳೂರಿನಿಂದ ಕೋಟಾಗೆ ತೆರಳಿ ಅಲ್ಲಿ ವಾಸ್ತವ್ಯ ಮಾಡುವರು.
ಅದೇ ರೀತಿ ಆಗಸ್ಟ್ 11 ರ ಬುಧವಾರ 3 ಗಂಟೆಗೆ ಮಂಗಳೂರಿಗೆ ಆಗಮಿಸಿ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸುವರು.
ಸಂಜೆ 5.30ಕ್ಕೆ ಮಂಗಳೂರಿನಿಂದ ರಸ್ತೆ ಮಾರ್ಗವಾಗಿ ಬೆಂಗಳೂರಿಗೆ ಪ್ರಯಾಣಿಸಿ ಅಲ್ಲಿಯೇ ವಾಸ್ತವ್ಯ ಮಾಡುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.