12:30 PM Wednesday14 - January 2026
ಬ್ರೇಕಿಂಗ್ ನ್ಯೂಸ್
ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ

ಇತ್ತೀಚಿನ ಸುದ್ದಿ

ಎಂಜಿನಿಯರಿಂಗ್ ಸ್ನಾತಕೋತ್ತರ ಪದವೀಧರ, ದೇಶವೊಂದರ ಉನ್ನತ ಸಚಿವ ಈಗ ಡೆಲಿವರಿ ಬಾಯ್ !!

25/08/2021, 21:04

ReporterKarnataka.com

ಕಾಲ ಹೇಗೆ ಬದಲಾಗುತ್ತದೆ ಎನ್ನುವುದಕ್ಕೆ ಸೈಯದ್ ಅಹ್ಮದ್ ಸಾದತ್ ಜೀವಂತ ಉದಾಹರಣೆಯಾಗಿದ್ದಾರೆ. ಒಂದು ಸಮಯದಲ್ಲಿ ದೇಶವೊಂದರ ಸಚಿವರಾಗಿದ್ದವರು ಈಗ ಡೆಲಿವರಿ ಬಾಯ್ ಆಗಿದ್ದಾರೆ.

ಅಫ್ಘಾನಿಸ್ತಾನದ ಹಿಂದಿನ ಸರ್ಕಾರದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಸೈಯದ್‌ ಅಹ್ಮದ್‌ ಸಾದತ್‌ ಜರ್ಮನಿಯಲ್ಲಿ ಪಿಜ್ಜಾ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದಾರೆ.

ಸೈಯದ್‌ ಅವರು ಅಶ್ರಫ್‌ ಘನಿ ನೇತೃತ್ವದ ಸರ್ಕಾರದಲ್ಲಿ ಸಂವಹನ ಮತ್ತು ತಂತ್ರಜ್ಞಾನ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಬಳಿಕ ಘನಿ ಜತೆ ಮನಸ್ತಾಪ ಹೊಂದಿ ಸ್ಥಾನ ತೊರೆದು ದೇಶ ಬಿಟ್ಟು ಜರ್ಮನಿಯಲ್ಲಿ ನೆಲೆಸಿದ್ದರು. ಈಗ ತಾಲಿಬಾನ್ ಸಂಪೂರ್ಣ ದೇಶದ ಮೇಲೆ ಹಿಡಿತ ಸಾಧಿಸಿದ್ದು ವಾಪಾಸಾಗುವ ಹಾಗೆಯೂ ಇಲ್ಲ.

ಈಗ ಜರ್ಮನಿಯಲ್ಲಿ ಜೀವನೋಪಾಯ ಕಂಡುಕೊಂಡಿರುವ ಅವರು ಪಿಜ್ಜಾ ಡೆಲಿವರಿ ಬಾಯ್‌ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಮಾಧ್ಯಮ ಸಂಸ್ಥೆ ಅಲ್‌ ಜಜೀರಾ(ಅರೇಬಿಕ್) ವರದಿ ಮಾಡಿದೆ.

ಮಾಹಿತಿಯ ಪ್ರಕಾರ, ಸೈಯದ್​ ಅಹ್ಮದ್​ ಶಾ ಸಾದತ್ ಅವರು ಆಕ್ಸ್​ಫರ್ಡ್​​ ವಿಶ್ವವಿದ್ಯಾಲಯದಿಂದ ಸಂವಹನ ಮತ್ತು ಎಲೆಕ್ಟ್ರಿಕ್​ ಎಂಜಿನಿಯರಿಂಗ್​ನಲ್ಲಿ ಎರಡು ಸ್ನಾತಕೋತ್ತರ ಪದವಿ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಇದರ ಹೊರತಾಗಿ 13 ದೇಶಗಳ 20ಕ್ಕೂ ಹೆಚ್ಚು ಕಂಪನಿಗಳೊಂದಿಗೆ ಸಂವಹನ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು