6:11 PM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಶಾಕ್: ಶುಲ್ಕ ಶೇ.10ರಷ್ಟು ಏರಿಕೆ: 2 ವರ್ಷ ಹೆಚ್ಚಳ ಮಾಡಿಲ್ಲ ಎಂದು ಸಚಿವರ ಸಮರ್ಥನೆ

23/06/2022, 11:06

ಬೆಂಗಳೂರು(reporterkarnataka.com): ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಶುಲ್ಕ 10% ಹೆಚ್ಚಳ ಮಾಡುವ ಮೂಲಕ ಸರಕಾರ ಶಾಕ್ ನೀಡಿದೆ.

ವಿಕಾಸಸೌಧದಲ್ಲಿ ಸಚಿವ ಅಶ್ವಥ್ ನಾರಾಯಣ್ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಈ ವರ್ಷ ಸೇರುವ ವಿದ್ಯಾರ್ಥಿಗಳಿಗೆ ಶೇ.10ರಷ್ಟು ಫೀಸ್ ಹೆಚ್ಚಿಸಲು ನಿರ್ಧಾರ ಮಾಡಲಾಗಿದೆ. 45% ಲೋವರ್ ಫೀಸ್, 30% ಹೈಯರ್ ಫೀಸ್ 25% ಮ್ಯಾನೇಜ್ಮೆಂಟ್ ಸೀಟ್ ಗೆ ಹೋಗಲಿದೆ ಎಂದು ಹೇಳಿದರು.

ಎಂಜಿನಿಯರಿಂಗ್ ಕಾಲೇಜುಗಳ ಜೊತೆ ಚರ್ಚೆಯಾಗಿದೆ. ಹಲವು ವಿಚಾರ ಚರ್ಚೆಯಾಗಿದೆ. ವಿದ್ಯಾರ್ಥಿಗಳಿಗೆ ಹೆಚ್ಚು ಫೀಸ್ ಸಂಗ್ರಹ ಮಾಡಬಾರದು. ನಿರ್ದಿಷ್ಟ ಶುಲ್ಕ ಮಾತ್ರ ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ. ಕೋರ್ಡಿನೇಷನ್ ಸಿಂಪಲ್ ಮಾಡುವ ಬಗ್ಗೆ ಚರ್ಚೆ ಆಗಿದೆ ಎಂದರು.

ಈವರೆಗೂ ಸರ್ಕಾರಿ ಸೀಟುಗಳಿಗೆ ಮಾತ್ರ ಸಿಇಟಿ ನಡೆಯುತ್ತಿತ್ತು. ಖಾಸಗಿ ಸೀಟುಗಳಿಗೆ ಕಾಮಿಡ್ ಕೆ ಸೀಟು ಮಾಡಲಾಗುತ್ತಿತ್ತು. ಇದೀಗ ಸಿಇಟಿ ಮತ್ತು ಕಾಮೆಡ್ ಕೆ ಎರಡನ್ನೂ ಒಟ್ಟಿಗೆ ನಡೆಸಲು ಸಮ್ಮತಿ ನೀಡಿದ್ದಾರೆ. ಹಾಗಾಗಿ ಹೇಗೆ ಪರೀಕ್ಷೆ ನಡೆಸಬೇಕು ಅಂತ ಚರ್ಚೆ ಮಾಡಿದ್ದೇವೆ. ಈ ವರ್ಷ ಮಾತ್ರ ಸಿಇಟಿ ಮತ್ತು ಕಾಮೆಡ್-ಕೆ ಪ್ರತ್ಯೇಕ ಪರೀಕ್ಷೆ ಇರಲಿದೆ. ಮುಂದಿನ ವರ್ಷದಿಂದ ಸಿಇಟಿ ಮಾತ್ರ. ಕಾಮೆಡ್-ಕೆ, ಸಿಇಟಿ ಒಟ್ಟಿಗೆ ಏಕರೂಪದ ಸಿಇಟಿ ನಡೆಸಲು ನಿರ್ಧಾರ ಮಾಡಲಾಗಿದೆ. ಈ ಬಗ್ಗೆ ಒಡಂಬಡಿಕೆ ಆಗಲಿದೆ ಎಂದು ಅಶ್ವಥ್ ನಾರಾಯಣ್ ಮಾಹಿತಿ ನೀಡಿದರು.

ಕೊರೊನಾ ಹಿನ್ನಲೆ ಎರಡು ವರ್ಷಗಳ ಕಾಲ ಶುಲ್ಕ ಹೆಚ್ಚಳ ಮಾಡಿರಲಿಲ್ಲ. ಹೀಗಾಗಿ ಶುಲ್ಕ ಹೆಚ್ಚಳಕ್ಕೆ ಖಾಸಗಿ ಕಾಲೇಜುಗಳು ಬೇಡಿಕೆ ಇಟ್ಟಿದ್ದರು. 20-25% ಶುಲ್ಕ ಹೆಚ್ಚಳಕ್ಕೆ ಮನವಿ ಮಾಡಿದ್ರು. ನಾವು 10% ಶುಲ್ಕ ಹೆಚ್ವಳಕ್ಕೆ ಅನುಮತಿ ಕೊಟ್ಟಿದ್ದೇವೆ ಎಂದು ಅವರು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು