5:57 AM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ಪರಿಸರ ದಿನಾಚರಣೆ: ಬೈರಾಡಿಕೆರೆ ವ್ಯಾಪ್ತಿಯಲ್ಲಿ ಸಸಿ ನೆಡುವ ಕಾರ್ಯಕ್ರಮ

08/06/2026, 10:12

ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ವತಿಯಿಂದ ವಿಶ್ವ ಪರಿಸರ ದಿನಚಾರಣೆ ಪ್ರಯುಕ್ತ ಸಂಘದ ಪ್ರಧಾನ ಕಚೇರಿಯ ಬಳಿಯಿರುವ ಬೈರಾಡಿಕೆರೆಯ ವ್ಯಾಪ್ತಿಯಲ್ಲಿ ಸಸಿನೆಡುವ ಮೂಲಕ ಕಾರ್ಯಕ್ರಮವನ್ನು ಆಚರಿಸಲಾಯಿತು.
ವಿಶ್ವ ಪರಿಸರ ದಿನಚಾರಣೆಯನ್ನು ಪರಿಸರ ಪ್ರೇಮಿ ಶ್ರೀ ಮಾಧವ ಉಳ್ಳಾಲ ರವರ ಮಾರ್ಗದರ್ಶನದಲ್ಲಿ ಬೈರಾಡಿಕೆರೆಯ ಸುತ್ತಮುತ್ತ ಸಸಿನೆಡುವ ಮೂಲಕ ಆಚರಿಸಲಾಯಿತು.
ಬೈರಾಡಿಕೆರೆ ಸಂರಕ್ಷಣಾ ಹಾಗೂ ಅಭಿವೃದ್ದಿ ಸಮಿತಿಯ ಅಧ್ಯಕ್ಷರಾದ ಡಾ. ಅಣ್ಣಯ್ಯ ಕುಲಾಲ್ ಉಳ್ತೂರು ರವರು ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ನಿರಂತರವಾಗಿ ಕಾರ್ಯಕ್ರಮಗಳನ್ನು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‌ರವರ ನೇತೃತ್ವದಲ್ಲಿ ಹಮ್ಮಿಕೊಂಡು ಬರುತ್ತಿದೆ. ಈ ಬಾರಿ ಸಂಘವು ವಿಶ್ವ ಪರಿಸರ ದಿನಚಾರಣೆಯನ್ನು ಬೈರಾಡಿಕೆರೆಯ ಸುತ್ತಮುತ್ತ ಸಸಿನೆಡುವ ಮೂಲಕ ಆಚರಿಸಿರುವುದು ನಮಗೆಲ್ಲರಿಗೂ ತುಂಬಾ ಸಂತಸದ ವಿಷಯವಾಗಿದೆ. ಬೈರಾಡಿಕೆರೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಮುಂದಿನ ದಿನಗಳಲ್ಲಿ ನಮ್ಮೊಂದಿಗೆ ಕೈ ಜೋಡಿಸಬೇಕೆಂದು ವಿನಂತಿಸಿದರು.
ಅಧ್ಯಕ್ಷತೆ ವಹಿಸಿದ್ದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‌ರವರು ಮಾತನಾಡಿ “ಸಂಘದ ವತಿಯಿಂದ ಕಳೆದ 14 ವರ್ಷಗಳಿಂದ ಸಂಘದ ವತಿಯಿಂದ ವಿಶ್ವ ಪರಿಸರ ದಿನಚಾರಣೆಯನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಈ ಹಿಂದೆ ವಿಶ್ವ ಪರಿಸರ ದಿನದಂದು ಪಡೀಲ್ ರಾಷ್ಟ್ರೀಯ ಹೆದ್ದಾರಿಯ ಡಿವೈಡರ್ ಹಾಗೂ ಸುತ್ತಮುತ್ತ ಪರಿಸರದಲ್ಲಿ ಸಸಿಗಳನ್ನು ನೆಡಲಾಗಿದೆ. ಅಲ್ಲದೇ ಸಂಘದ ಪ್ರಧಾನ ಕಚೇರಿಯ ಆವರಣದಲ್ಲಿ ಸಸಿಗಳನ್ನು ನೆಟ್ಟು, ಪೋಷಿಸುವುದರ ಮೂಲಕ ಅರ್ಥಪೂರ್ಣವಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ಈ ವರ್ಷ ವಿಶ್ವ ಪರಿಸರ ದಿನಚಾರಣೆಯನ್ನು ಬೈರಾಡಿಕೆರೆ ಸಂರಕ್ಷಣಾ ಮತ್ತು ಅಭಿವೃದ್ದಿ ಸಮಿತಿ ಹಾಗೂ ಸ್ಥಳೀಯ ಸಂಘ-ಸಂಸ್ಥೆಗಳ ಸಹಭಾಗಿತ್ವದೊಂದಿಗೆ ಆಯೋಜನೆ ಮಾಡಿದ್ದು, ಮುಂದಿನ ದಿನಗಳಲ್ಲಿ ಬೈರಾಡಿಕೆರೆಯ ಸ್ವಚ್ಚತೆಯನ್ನು ಕಾಪಾಡುವಲ್ಲಿ ಸ್ಥಳೀಯ ಸಂಘ-ಸಂಸ್ಥೆಗಳೊಂದಿಗೆ ನಿರಂತರವಾಗಿ ಕೈ ಜೋಡಿಸಲಾಗುವುದು ಎಂದರು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ಶ್ರೀ ಗೋಪಾಲ್ ಎಮ್. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್, ಮಂಗಳೂರು ಮಹಾನಗರ ಪಾಲಿಕೆಯ ಪರಿಸರ ವಿಭಾಗದ ಇಂಜಿನಿಯರ್ ಶ್ರೀ ದಯಾನಂದ ಪೂಜಾರಿ, ಶ್ರೀ ಸಯ್ಯದ್, ಬೈರಾಡಿಕೆರೆ ಸಂರಕ್ಷಣಾ ಹಾಗೂ ಅಭಿವೃದ್ದಿ ಸಮಿತಿಯ ಪದಾಧಿಕಾರಿಗಳಾದ ಶ್ರೀ ಅನಿಲ್ ಕೆಂಬಾರ್, ಶ್ರೀ ಸಂತೋಷ್ ಶೆಟ್ಟಿ, ಶ್ರೀ ಸುರೇಶ್ ಆಚಾರ್, ಶ್ರೀ ವಿಕ್ಕಿ ಪೂಜಾರಿ ಮತ್ತಿತ್ತರರು, ಹಾಗೂ ಮಡಿಲು ಸೇವಾ ತಂಡ ಪಡೀಲು ಇದರ ಗೌರವಾಧ್ಯಕ್ಷರಾದ ಶ್ರೀಮತಿ ಪುಷ್ಪಲತಾ, ಅಧ್ಯಕ್ಷರಾದ ಶ್ರೀ ಗಜೇಂದ್ರ, ಕರ್ನಾಟಕ ಟೈಲರ್ ಅಸೋಷಿಯನ್‌ನ ರಾಜ್ಯ ಸಮಿತಿಯ ಕೋಶಾಧಿಕಾರಿಯಾಗಿರುವ ಶ್ರೀ ಪ್ರಜ್ವಲ್ ಕುಮಾರ್, ಮಂಗಳೂರು ಸಮಿತಿಯ ಅಧ್ಯಕ್ಷರಾದ ಶ್ರೀ ಹರೀಶ್ ರೈ, ಸ್ಥಳೀಯ ಸಂಘ – ಸಂಸ್ಥೆಗಳ ಪಧಾಧಿಕಾರಿಗಳು ಹಾಗೂ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು