1:19 PM Tuesday27 - October 2026
ಬ್ರೇಕಿಂಗ್ ನ್ಯೂಸ್
Chikkamagaluru | ಆಟೋ‌- ಬೈಕ್ ನಡುವೆ ಮುಖಾಮುಖಿ ‌ಡಿಕ್ಕಿ: ಬೈಕ್ ಸವಾರರ ಸ್ಥಳದಲ್ಲೇ… ಆಯುಧ ಪೂಜೆ–ವಿಜಯ ದಶಮಿ: ನಾಡಿನ ಒಳಿತಿಗಾಗಿ ರಾಜ್ಯಪಾಲ ಡಾ. ಸುಧಾ ಯಾದವ್ ಪ್ರಾರ್ಥನೆ ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣ | ವಿಜಯದಶಮಿಯೊಳಗೆ ಆರೋಪಿಗಳ ಬಂಧಿಸದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ:… ಗೊತ್ತು ಗುರಿ ಇಲ್ಲದ ಟೂರಿಸಂ ನೀತಿ | ನಿರ್ವಹಣೆ ಇಲ್ಲದೆ ಭೂತ ಬಂಗಲೆಯಂತಾದ… ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್…

ಇತ್ತೀಚಿನ ಸುದ್ದಿ

ಪರಿಸರ ಸಂರಕ್ಷಣಾ ಪ್ರತಿಜ್ಞಾ ಅಭಿಯಾನ: 1.36 ಲಕ್ಷಕ್ಕೂ ಅಧಿಕ ಮಂದಿ ಸಾಥ್

27/10/2026, 13:18

*ವಿದ್ಯಾರ್ಥಿ ಅಬ್ದುಲ್ ರಝಿದ್‌ಗೆ ಒಂದು ಲಕ್ಷ ರೂ. ಬಹುಮಾನ*

ಮಂಗಳೂರು(repoeterkarnataka.com): ಮಂಗಳೂರು ಧರ್ಮಪ್ರಾಂತ್ಯದ ಪರಿಸರ ಆಯೋಗದ ವತಿಯಿಂದ ಧರ್ಮಪ್ರಾಂತ್ಯದ ವ್ಯಾಪ್ತಿಯ 124 ಧರ್ಮಕ್ಷೇತ್ರಗಳಲ್ಲಿ ಆಯೋಜಿಸಲಾಗಿದ್ದ ‘ನಮ್ಮ ಉಳಿವಿಗಾಗಿ ಪ್ರತಿಜ್ಞಾ ಆಂದೋಲನ 2026’ ಪರಿಸರ ಜಾಗೃತಿ ಅಭಿಯಾನದಲ್ಲಿ 1,36,966 ಮಂದಿ ಭಾಗವಹಿಸಿದ್ದಾರೆ. ಅಭಿಯಾನದ ಸಮಾರೋಪ ಸಮಾರಂಭ ಅ. 25ರಂದು ಸುರತ್ಕಲ್ ಚರ್ಚ್ ಸಭಾಂಗಣದಲ್ಲಿ ನಡೆಯಿತು.
ಅಭಿಯಾನದ ಅಂಗವಾಗಿ ಪ್ರತಿಜ್ಞಾ ಪತ್ರಕ್ಕೆ ಸಹಿ ಹಾಕಿದವರ ಪೈಕಿ ಲಾಟರಿ ಮೂಲಕ ವಿಜೇತರನ್ನು ಆಯ್ಕೆ ಮಾಡಲಾಯಿತು. ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಅತಿ ವಂ. ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಅವರು ಲಾಟರಿ ಮೂಲಕ ವಿಜೇತರನ್ನು ಆಯ್ಕೆ ಮಾಡಿದರು. ಕಣಚೂರು ವೈದ್ಯಕೀಯ ಕಾಲೇಜಿನ ಪ್ರಥಮ ವರ್ಷದ ಎಂ.ಬಿ.ಬಿ.ಎಸ್. ವಿದ್ಯಾರ್ಥಿ ಹಾಗೂ ಪಂಜಿಮುಗೇರ್ ನಿವಾಸಿ ಅಬ್ದುಲ್ ರಝಿದ್ ಅವರು ಒಂದು ಲಕ್ಷ ರೂ. ನಗದು ಬಹುಮಾನಕ್ಕೆ ಆಯ್ಕೆಯಾದರು. ಅ. 26ರಂದು ಬಿಷಪ್ ನಿವಾಸದಲ್ಲಿ ಅವರಿಗೆ ಬಹುಮಾನ ಹಸ್ತಾಂತರಿಸಲಾಯಿತು.
ಪರಿಸರ ಸಂರಕ್ಷಣೆಯ ಮಹತ್ವವನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾದ ಈ ಅಭಿಯಾನದಲ್ಲಿ ವಿದ್ಯಾರ್ಥಿಗಳು ಸೇರಿದಂತೆ ವಿವಿಧ ವರ್ಗಗಳ ನಾಗರಿಕರು ಉತ್ಸಾಹದಿಂದ ಪಾಲ್ಗೊಂಡಿದ್ದರು. ಪರಿಸರದ ಬಗ್ಗೆ ಜಾಗೃತಿ ಮೂಡಿಸುವುದರ ಜೊತೆಗೆ, ಪ್ರಕೃತಿಯ ಸಂರಕ್ಷಣೆಗೆ ಪ್ರತಿಯೊಬ್ಬರೂ ವೈಯಕ್ತಿಕ ಹೊಣೆಗಾರಿಕೆಯಿಂದ ಕೈಜೋಡಿಸಬೇಕು ಎಂಬ ಸಂದೇಶವನ್ನು ಈ ಅಭಿಯಾನ ಸಾರಿದೆ.
ಸಮಾರೋಪ ಸಮಾರಂಭದಲ್ಲಿ ಸುರತ್ಕಲ್ ಚರ್ಚ್‌ನ ಧರ್ಮಗುರು ವಂ. ಆಸ್ಟಿನ್ ಪೆರಿಸ್ ಹಾಗೂ ಮಂಗಳೂರು ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ರೊಯ್ ಕ್ಯಾಸ್ತೆಲಿನೊ ಉಪಸ್ಥಿತರಿದ್ದರು. ಪರಿಸರ ಆಯೋಗದ ಕಾರ್ಯದರ್ಶಿ ಹಾಗೂ ಕಾರ್ಯಕ್ರಮದ ಸಂಚಾಲಕ ಲುವಿ ಜೆ. ಪಿಂಟೊ ವಂದಿಸಿದರು. ಕ್ಲೆಮೆಂಟ್ ಪಿಂಟೊ ಕಾರ್ಯಕ್ರಮ ನಿರೂಪಿಸಿದರು. ಧರ್ಮಪ್ರಾಂತ್ಯದ ಯುವ ಆಯೋಗ ಮತ್ತು ಶೈಕ್ಷಣಿಕ ಆಯೋಗದ ಸದಸ್ಯರು ಅಭಿಯಾನದ ಯಶಸ್ಸಿಗೆ ಸಹಕರಿಸಿದರು.
ಮಂಗಳೂರು ಧರ್ಮಪ್ರಾಂತ್ಯದ ಪರಿಸರ ಆಯೋಗವು ಪ್ರತಿವರ್ಷ ಪರಿಸರ ಜಾಗೃತಿ ಅಭಿಯಾನಗಳನ್ನು ಆಯೋಜಿಸುತ್ತಿದ್ದು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ಪರಿಸರ ಸಂರಕ್ಷಣೆಯ ಕುರಿತು ಅರಿವು ಮೂಡಿಸಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು