11:49 PM Tuesday30 - December 2025
ಬ್ರೇಕಿಂಗ್ ನ್ಯೂಸ್
ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ

ಇತ್ತೀಚಿನ ಸುದ್ದಿ

ಎರಡನೇ ಪತ್ನಿಗೂ ಅಮೀರ್ ಖಾನ್ ವಿಚ್ಛೇದನ : ಕಿರಣ್ ರಾವ್ ಜತೆಗಿನ ಹದಿನೈದು ವರ್ಷಗಳ ದಾಂಪತ್ಯ ಜೀವನ ಅಂತ್ಯ

03/07/2021, 14:05

ಮುಂಬಾಯಿ (ReporterKarnataka.com)

ಬಾಲಿವುಡ್ ನ ‘ಪರ್ಫೆಕ್ಷನಿಸ್ಟ್’ ಅಮೀರ್ ಖಾನ್ ವೈಯಕ್ತಿಕ ಜೀವನದಲ್ಲಿ ಮತ್ತೊಮ್ಮೆ ಎಡವಿದ್ದಾರೆ, ತಮ್ಮ ಎರಡನೇ ಪತ್ನಿ ಕಿರಣ್ ರಾವ್ ವಿಚ್ಛೇದನ ನೀಡುವುದಾಗಿ ಘೋಷಿಸಿದ್ದಾರೆ.

ಈ ಬಗ್ಗೆ ಜಂಟಿ ಹೇಳಿಕೆ ಹೊರಡಿಸಿದ್ದು, 15 ವರ್ಷಗಳ ವೈವಾಹಿಕ ಜೀವನವನ್ನು ಕೊನೆಗೊಳಿಸುತ್ತಿರುವುದಾಗಿ ತಿಳಿಸಿದ್ದಾರೆ.
ಪುತ್ರನಿಗೆ ಪೋಷಕರಾಗಿ ಮುಂದುವರಿಯುತ್ತೇವೆ ಮತ್ತು ಈ ವಿಚಾರದಲ್ಲಿ ಪರಸ್ಪರ ಸಹಕಾರ ನೀಡುತ್ತೇವೆ ಎಂದು ತಿಳಿಸಿದ್ದಾರೆ.
ಈ ಮೂಲಕ ಅಮೀರ್ ಖಾನ್ ಅವರ ಎರಡನೇ ವೈವಾಹಿಕ ಜೀವನವೂ ಮುರಿದು ಹೋದಂತಾಗಿದೆ.

ಅಮೀರ್ ಖಾನ್ ಮತ್ತು ಕಿರಣ್ ರಾವ್ ಲಗಾನ್ ಚಿತ್ರದ ಚಿತ್ರೀಕರಣ ವೇಳೆ ಆಪ್ತರಾಗಿ ಪರಸ್ಪರ ಪ್ರೀತಿಸಿ 2005ರಲ್ಲಿ ವಿವಾಹವಾಗಿದ್ದರು. ಅವರಿಗೆ ಆಜಾದ್ ಎಂಬ ಮಗನಿದ್ದಾನೆ.
ಇದಕ್ಕೂ ಮುನ್ನ ಅಮೀರ್ ಖಾನ್ 1986ರಲ್ಲಿ ರೀನಾ ದತ್ತರನ್ನು ಮದುವೆಯಾಗಿ ಇಬ್ಬರು ಮಕ್ಕಳನ್ನು ಪಡೆದು 2002ರಲ್ಲಿ ವಿಚ್ಛೇದನ ಪಡೆದಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು