ಇತ್ತೀಚಿನ ಸುದ್ದಿ
ಎರಡು ದೋಣಿಗಳ ನಡುವೆ ಭೀಕರ ಅಪಘಾತ : ನೂರಕ್ಕೂ ಅಧಿಕ ಮಂದಿ ಜಲ ಸಮಾಧಿ ?
09/09/2021, 11:44
ಜೊರ್ಹಾತ್ (Reporterkarnataka.com)
ಅಸ್ಸಾಂನಲ್ಲಿ ಸಂಭವಿಸಿದ ಭೀಕರ ದೋಣಿ ದುರಂತದಲ್ಲಿ ನೂರಕ್ಕೂ ಅಧಿಕ ಮಂದಿ ಜಲಸಮಾಧಿಯಾಗಿರಬಹುದೆಂದು ಶಂಕಿಸಲಾಗಿದೆ.ಬ್ರಹ್ಮಪುತ್ರ ನದಿಯಲ್ಲಿ 2 ಬೋಟ್‌ಗಳು ಡಿಕ್ಕಿ ಹೊಡೆದ ಪರಿಣಾಮ ನೂರಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದು, ನದಿಯಲ್ಲಿ ಶೋಧ ಕಾರ್ಯಾಚರಣೆ ಮುಂದುವರೆದಿದೆ.
ಬುಧವಾರ ಮಧ್ಯಾಹ್ನ 3.30ರ ಸುಮಾರಿಗೆ ಜೊರ್ಹಾತ್ ಜಿಲ್ಲೆಯ ನಿಮಾತಿ ಘಾಟ್ ನಲ್ಲಿ ಈ ಘಟನೆ ನಡೆದಿದೆ. ಮಾ ಕಮಲ ದೋಣಿ ನಿಮಾತಿ ಘಾಟ್ ನಿಂದ ಮಜುಲಿಗೆ ಸಂಚರಿಸುತ್ತಿದ್ದಾಗ ಮಜುಲಿಯಿಂದ ವಾಪಸ್ಸಾಗುತ್ತಿದ್ದ ಸರ್ಕಾರಿ ಸ್ವಾಮ್ಯದ ಟ್ರಿಪ್ಕೈಗೆ ಡಿಕ್ಕಿ ಹೊಡೆದಿದೆ.
ಮೂಲಗಳ ಪ್ರಕಾರ ಈ ವರೆಗೆ ಓರ್ವ ಮಹಿಳೆಯೊಬ್ಬರ ಮೃತದೇಹವನ್ನು ಹೊರ ತೆಗೆಯಲಾಗಿದೆ ಎಂದು ಹೇಳಲಾಗುತ್ತಿದ್ದು, ಸಂವಹನ ಸಮಸ್ಯೆಯಿಂದ ಎರಡು ದೋಣಿಗಳ ನಡುವೆ ಡಿಕ್ಕಿ ಸಂಭವಿಸಿದೆ, ಡಿಕ್ಕಿಯಾದ ಕೂಡಲೇ ಒಂದು ದೋಣಿ ಮುಳುಗಿ ಹೋಗಿದೆ. ಎರಡನೇ ದೋಣಿ ಕೂಡ ಮುಳುಗುವ ಹಂತದಲ್ಲಿದ್ದಾಗ ಪೊಲೀಸರು ಹಾಗೂ ಸ್ಥಳೀಯರು ರಕ್ಷಣೆಗೆ ಧಾವಿಸಿ, ಹಲವರನ್ನು ರಕ್ಷಣೆ ಮಾಡಿದ್ದಾರೆ.
ಸಣ್ಣ ದೋಣಿಯಲ್ಲಿ 40 ಮಂದಿಯಿದ್ದು. ದೊಡ್ಡ ದೋಣಿಯಲ್ಲಿ 120 ಮಂದಿ ಜನರಿದ್ದರು ಎಂದು ತಿಳಿದುಬಂದಿದೆ. ನಾಪತ್ತೆಯಾಗಿರುವವರು ಜಲಸಮಾಧಿಯಾಗಿರಬಹುದು ಎಂದು ಹೇಳಲಾಗುತ್ತಿದೆ.