6:49 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಎರಡು ದೋಣಿಗಳ ನಡುವೆ ಭೀಕರ ಅಪಘಾತ : ನೂರಕ್ಕೂ ಅಧಿಕ ಮಂದಿ ಜಲ ಸಮಾಧಿ ?

09/09/2021, 11:44

ಜೊರ್ಹಾತ್ (Reporterkarnataka.com)

ಅಸ್ಸಾಂನಲ್ಲಿ ಸಂಭವಿಸಿದ ಭೀಕರ ದೋಣಿ ದುರಂತದಲ್ಲಿ ನೂರಕ್ಕೂ ಅಧಿಕ ಮಂದಿ ಜಲಸಮಾಧಿಯಾಗಿರಬಹುದೆಂದು ಶಂಕಿಸಲಾಗಿದೆ.ಬ್ರಹ್ಮಪುತ್ರ ನದಿಯಲ್ಲಿ 2 ಬೋಟ್‌ಗಳು ಡಿಕ್ಕಿ ಹೊಡೆದ ಪರಿಣಾಮ ನೂರಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದು, ನದಿಯಲ್ಲಿ ಶೋಧ ಕಾರ್ಯಾಚರಣೆ ಮುಂದುವರೆದಿದೆ.

ಬುಧವಾರ ಮಧ್ಯಾಹ್ನ 3.30ರ ಸುಮಾರಿಗೆ ಜೊರ್ಹಾತ್ ಜಿಲ್ಲೆಯ ನಿಮಾತಿ ಘಾಟ್ ನಲ್ಲಿ ಈ ಘಟನೆ ನಡೆದಿದೆ. ಮಾ ಕಮಲ ದೋಣಿ ನಿಮಾತಿ ಘಾಟ್ ನಿಂದ ಮಜುಲಿಗೆ ಸಂಚರಿಸುತ್ತಿದ್ದಾಗ ಮಜುಲಿಯಿಂದ ವಾಪಸ್ಸಾಗುತ್ತಿದ್ದ ಸರ್ಕಾರಿ ಸ್ವಾಮ್ಯದ ಟ್ರಿಪ್ಕೈಗೆ ಡಿಕ್ಕಿ ಹೊಡೆದಿದೆ.

ಮೂಲಗಳ ಪ್ರಕಾರ ಈ ವರೆಗೆ ಓರ್ವ ಮಹಿಳೆಯೊಬ್ಬರ ಮೃತದೇಹವನ್ನು ಹೊರ ತೆಗೆಯಲಾಗಿದೆ ಎಂದು ಹೇಳಲಾಗುತ್ತಿದ್ದು, ಸಂವಹನ ಸಮಸ್ಯೆಯಿಂದ ಎರಡು ದೋಣಿಗಳ ನಡುವೆ ಡಿಕ್ಕಿ ಸಂಭವಿಸಿದೆ, ಡಿಕ್ಕಿಯಾದ ಕೂಡಲೇ ಒಂದು ದೋಣಿ ಮುಳುಗಿ ಹೋಗಿದೆ. ಎರಡನೇ ದೋಣಿ ಕೂಡ ಮುಳುಗುವ ಹಂತದಲ್ಲಿದ್ದಾಗ ಪೊಲೀಸರು ಹಾಗೂ ಸ್ಥಳೀಯರು ರಕ್ಷಣೆಗೆ ಧಾವಿಸಿ, ಹಲವರನ್ನು ರಕ್ಷಣೆ ಮಾಡಿದ್ದಾರೆ.

ಸಣ್ಣ ದೋಣಿಯಲ್ಲಿ 40 ಮಂದಿಯಿದ್ದು. ದೊಡ್ಡ ದೋಣಿಯಲ್ಲಿ 120 ಮಂದಿ ಜನರಿದ್ದರು ಎಂದು ತಿಳಿದುಬಂದಿದೆ. ನಾಪತ್ತೆಯಾಗಿರುವವರು ಜಲಸಮಾಧಿಯಾಗಿರಬಹುದು ಎಂದು ಹೇಳಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು