8:37 PM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ ಕಾಂತೇಶ್

01/05/2024, 17:00

ಬೆಂಗಳೂರು(reporterkatnataka.com):ಮಾಜಿ ಉಪ ಮುಖ್ಯಮಂತ್ರಿ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಬಂಡುಕೋರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಅವರ ಪುತ್ರ ಕೆ.ಇ.ಕಾಂತೇಶ್ ಅವರು ತಮ್ಮ ವಿರುದ್ಧ ಮಾನಹಾನಿ ವರದಿ ಪ್ರಸಾರ ಮಾಡದಂತೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್‌ನಿಂದ ಮಾಧ್ಯಮಗಳ ವಿರುದ್ಧ ಮಧ್ಯಂತರ ತಡೆಯಾಜ್ಞೆ ತಂದಿದ್ದಾರೆ.

ಕಾಂತೇಶ್ ಅವರು ಸಲ್ಲಿಸಿದ್ದ ದಾವೆಯ ವಿಚಾರಣೆ ನಡೆಸಿದ ಬೆಂಗಳೂರಿನ 6ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಧೀಶ ಡಿ.ಪಿ.ಕುಮಾರಸ್ವಾಮಿ ಈ ಪ್ರತಿಬಂಧಕಾಜ್ಞೆ ನೀಡಿದರು.
ಕೆ.ಇ.ಕಾಂತೇಶ್ ಅವರು 50 ಮಾಧ್ಯಮಗಳ ಹೆಸರು ಉಲ್ಲೇಖಿಸಿದ್ದು, ಯಾರೇ ಆದರೂ ದೂರಿನಲ್ಲಿ ಉಲ್ಲೇಖಿಸಿದ ರೀತಿ ಮಾನಹಾನಿ ಮಾಡುವಂತಹ ಮಾಹಿತಿ ಪ್ರಸಾರ ಮಾಡಬಾರದು ಎಂದು ಕೋರಿದ್ದರು.
ಅಶ್ಲೀಲ ವಿಡಿಯೊ ಪ್ರಸಾರ, ಫೋಟೋ, ವರದಿ ಮುದ್ರಣ, ಅವುಗಳ ಹಂಚಿಕೆ ಮಾಡಬಾರದು. ಇದಕ್ಕೆ ಪ್ರತಿಬಂಧಕಾಜ್ಞೆ ನೀಡಲಾಗಿದೆ ಎಂದು ನ್ಯಾಯಾಲಯವು ತನ್ನ ಆದೇಶದಲ್ಲಿ ತಿಳಿಸಿದೆ.
ಇದರಂತೆ, ಪ್ರತಿವಾದಿಗಳಿಗೆ ನೋಟಿಸ್, ಸಮನ್ಸ್ ಜಾರಿ ಮಾಡಿದ ನ್ಯಾಯಾಲಯವು ಈ ದಾವೆಯ ವಿಚಾರಣೆಯನ್ನು ಆಗಸ್ಟ್ 3ಕ್ಕೆ ಮುಂದೂಡಿದೆ.
*ದಾವೆಯಲ್ಲಿ ಏನಿದೆ?: ಕೆ. ಇ. ಕಾಂತೇಶ್ ಅವರ ಪರವಾಗಿ ವಕೀಲ ಎಂ ವಿನೋದ್ ಕುಮಾರ್‌ ಕೋರ್ಟ್‌ನಲ್ಲಿ ವಾದ ಮಂಡಿಸಿದ್ದರು. ಪ್ರತಿವಾದಿಗಳ ಸ್ಥಾನದಲ್ಲಿರುವ ಇಂಟರ್ನೆಟ್, ಟಿವಿ ಮಾಧ್ಯಮ, ಪತ್ರಿಕೆಗಳಲ್ಲಿ ದೂರುದಾರರ ವಿರುದ್ಧ ಆಕ್ಷೇಪಾರ್ಹವಾದ ಸುದ್ದಿ ಪ್ರಸಾರವಾಗುತ್ತಿದೆ. ಈ ಮೂಲಕ ದೂರುದಾರರ ವರ್ಚಸ್ಸು ಹಾಳು ಮಾಡಲು ಪ್ರಯತ್ನಿಸಲಾಗುತ್ತಿದೆ. ಲೋಕಸಭಾ ಚುನಾವಣೆ ರಾಜಕೀಯವಾಗಿ ಮಹತ್ವ ಪಡೆದುಕೊಂಡ ಸಂದರ್ಭವಾದ ಕಾರಣ, ದೂರುದಾರರಿಗೆ ಮಾನಹಾನಿಯಿಂದ ರಕ್ಷಣೆ ಬೇಕು ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು