ಇತ್ತೀಚಿನ ಸುದ್ದಿ
ಹಳೆ ಜಿಲ್ಲಾಧಿಕಾರಿ ಕಚೇರಿ ಕಟ್ಟಡದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆ: ಪ್ರಭಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ
22/05/2025, 23:10

ಮಂಗಳೂರು(reporterkarnataka.com): ನಗರದ ಹೃದಯ ಭಾಗದಲ್ಲಿರುವ ಹಳೆ ಜಿಲ್ಲಾಧಿಕಾರಿ ಕಚೇರಿಯ ಕಟ್ಟಡ ಸಂಕೀರ್ಣವನ್ನು ಹೈಕೋರ್ಟ್ ಸಂಚಾರಿ ಪೀಠಕ್ಕೆ ಮೀಸಲಿಡುವಂತೆ ಒತ್ತಾಯಿಸಿ ಪ್ರಭಾರ ಜಿಲ್ಲಾಧಿಕಾರಿ ಆನಂದ್ ಕೆ ಅವರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಹೈಕೋರ್ಟ್ ಪೀಠ ಹೋರಾಟ ಸಮಿತಿಯ ಸಂಚಾಲಕರು ಹಾಗೂ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ಹೈಕೋರ್ಟ್ ಪೀಠ ಹೋರಾಟ ಸಮಿತಿಯ ಅಧ್ಯಕ್ಷ ಎಚ್. ವಿ. ರಾಘವೇಂದ್ರ, ಪ್ರಧಾನ ಕಾರ್ಯದರ್ಶಿ ಶ್ರೀಧರ ಎಚ್., ಕೋಶಾಧಿಕಾರಿ ಗಿರೀಶ್ ಶೆಟ್ಟಿ, ಸಮಿತಿಯ ಸದಸ್ಯರಾದ ದೇವದಾಸ್ ರಾವ್, ಪ್ರವೀಣ್ ಅಡ್ಯಪಾಡಿ, ಆರತಿ ಸುರತ್ಕಲ್, ಅಕ್ಷತಾ, ವಕೀಲಾದ ಶಿವರಾಜ್ ಕೊಟ್ಟಾರಿ ಉಪಸ್ಥಿತರಿದ್ದರು.