4:47 PM Friday8 - May 2026
ಬ್ರೇಕಿಂಗ್ ನ್ಯೂಸ್
ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್

ಇತ್ತೀಚಿನ ಸುದ್ದಿ

ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ ರಾಜ್ಯ ಸರಕಾರ

17/01/2026, 16:32

ಬೆಂಗಳೂರು(repprterkarnataka.com): ಬೆಂಗಳೂರಿನಲ್ಲಿ ಬೃಹತ್ತಾದ, ಸಾರ್ವಜನಿಕ ಉದ್ದೇಶವುಳ್ಳ, ಲೋಕೋಪಕಾರಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ತೆರೆಯಲು ರಾಜ್ಯ ಸರ್ಕಾರ (ಸರ್ಕಾರ) ಮತ್ತು ಅಜೀಂ ಪ್ರೇಮ್‌ಜಿ ಫೌಂಡೇಷನ್‌ (ಫೌಂಡೇಷನ್) ಪಾಲುದಾರಿಕೆಗೆ ಕೈ ಜೋಡಿಸಿವೆ.
ಈ ಆಸ್ಪತ್ರೆಯನ್ನು 1000 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನಾಗಿ ಅಭಿವೃದ್ಧಿಪಡಿಸಲಾಗುತ್ತಿದ್ದು ಈ ಮೂಲಕ ದುರ್ಬಲ ವರ್ಗಗಳು ಮತ್ತು ಸೂಕ್ತ ಸೇವೆಗಳಿಂದ ವಂಚಿತರಾದ ಜನರಿಗೆ ಉತ್ತಮ ಗುಣಮಟ್ಟದ ಆರೈಕೆಯನ್ನು ಒದಗಿಸುವ ಉದ್ದೇಶವನ್ನು ಹೊಂದಿದೆ. ಒಟ್ಟಾರೆ ಶೇಕಡಾ 75ರಷ್ಟು ಹಾಸಿಗೆಗಳನ್ನು ರೋಗಿಗಳಿಗೆ ಉಚಿತವಾಗಿ ಒದಗಿಸುವ ಗುರಿ ಹೊಂದಲಾಗಿದ್ದು, ಉಳಿದ ಹಾಸಿಗೆಗಳಿಗೆ ತೃತೀಯ ಹಂತದ ಆರೈಕೆ ಒದಗಿಸುವ ಸರ್ಕಾರಿ ಆಸ್ಪತ್ರೆಗಳ ದರಕ್ಕೆ ಸರಿಸಮಾನವಾದ ದರವನ್ನು ವಿಧಿಸಲಾಗುತ್ತದೆ.
ಈ ಆಸ್ಪತ್ರೆಯು ವಿವಿಧ ಸ್ಪೆಷಾಲಿಟಿಗಳನ್ನು ಒದಗಿಸಲಿದ್ದು, ಅಂಗಾಂಗ ಕಸಿಗೆ ವಿಶೇಷ ಒತ್ತನ್ನು ನೀಡಲಾಗುತ್ತದೆ. ಅಲ್ಲದೆ ಇದು ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನೆಗೆ ತನ್ನ ಕೊಡುಗೆಯನ್ನು ನೀಡಲಿದೆ. ಈ ಉಪಕ್ರಮವು, ಅತ್ಯಾಧುನಿಕ ತೃತೀಯ ಹಂತದ ಆರೈಕೆಯ ಲಭ್ಯತೆಯನ್ನು ವಿಸ್ತರಿಸುವ ಮೂಲಕ ನಗರದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸುವ ಮತ್ತು ಅದಕ್ಕೆ ಪೂರಕವಾಗಿ ಕೊಡುಗೆ ನೀಡುವ ಉದ್ದೇಶವನ್ನು ಹೊಂದಿದೆ.
ಆಸ್ಪತ್ರೆಯ ಸಂಪೂರ್ಣ ಬಂಡವಾಳ ಮತ್ತು ಕಾರ್ಯನಿರ್ವಹಣಾ ವೆಚ್ಚವನ್ನು ಫೌಂಡೇಷನ್‌ ಭರಿಸಲಿದೆ. ಇದನ್ನು ಸರ್ಕಾರಿ ಮಾಲೀಕತ್ವದ ಜಮೀನಿನಲ್ಲಿ ಸ್ಥಾಪಿಸಲಾಗುತ್ತದೆ. ಅಜೀಂ ಪ್ರೇಮ್‌ಜಿ ಫೌಂಡೇಷನ್‌ ಸ್ಥಾಪಿಸುವ ಪ್ರತ್ಯೇಕ ಲಾಭೇತರ ಸಂಸ್ಥೆಯ ಮೂಲಕ ಈ ಆಸ್ಪತ್ರೆಯನ್ನು ನಿರ್ಮಿಸಿ ನಿರ್ವಹಿಸಲಾಗುತ್ತದೆ. ಆಸ್ಪತ್ರೆಯ ಆಡಳಿತ ಮಂಡಳಿಯು ಸರ್ಕಾರಿ ಪ್ರತಿನಿಧಿಗಳನ್ನು ಹೊಂದಿರಲಿದೆ.
ಜಮೀನನ್ನು ಗುತ್ತಿಗೆ ಪಡೆದು ಅಗತ್ಯ ಅನುಮೋದನೆಗಳನ್ನು ಗಳಿಸಿದ ನಂತರ ಐದು ವರ್ಷಗಳೊಳಗೆ ಆಸ್ಪತ್ರೆಯು ಸಂಪೂರ್ಣವಾಗಿ ಕಾರ್ಯ ನಿರ್ವಹಿಸುವ ನಿರೀಕ್ಷೆ ಇದೆ. ಆಸ್ಪತ್ರೆಯ ಎಲ್ಲ ಚಟುವಟಿಕೆಗಳು ಸಾರ್ವಜನಿಕ ಹಿತಾಸಕ್ತಿಯ ಉದ್ದೇಶಕ್ಕೆ ತಕ್ಕುದಾಗಿ ಇರಲಿವೆ.

ಇತ್ತೀಚಿನ ಸುದ್ದಿ

ಜಾಹೀರಾತು