7:45 AM Sunday8 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಜಿಲ್ಲಾಸ್ಪತ್ರೆಗಳು, ಆರೋಗ್ಯ ಕೇಂದ್ರಗಳಲ್ಲಿ ಯೋಗ ಮಂದಿರ ಸ್ಥಾಪನೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

21/06/2025, 18:46

*ವಿಶ್ವ ಯೋಗ ದಿನಾಚರಣೆಯ ಪ್ರಯುಕ್ತ 10 ಸಾವಿರ ಸ್ಥಳಗಳಲ್ಲಿ 'ಯೋಗ ಸಂಗಮ' ಕಾರ್ಯಕ್ರಮ ಯಶಸ್ವಿ*

*ವಿಧಾನ ಸೌಧದ ಮೆಟ್ಟಿಲುಗಳ ಮುಂದೆ ಯೋಗಭ್ಯಾಸ ನಡೆಸಿದ ರಾಜ್ಯಪಾಲರು*

ಬೆಂಗಳೂರು(reporterkarnataka.com): ರಾಜ್ಯದಲ್ಲಿ ಹೆಚ್ಚಿನ ಜನರಿಗೆ ಯೋಗ ಪರಿಚಯಿಸುವ ನಿಟ್ಟಿನಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ‘ಯೋಗ ಮಂದಿರ’ಗಳನ್ನು ಸ್ಥಾಪಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಬೆಂಗಳೂರಿನ ವಿಧಾನ ಸೌಧದಲ್ಲಿ ಇಂದು 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡು ಸಚಿವರು ಮಾತನಾಡುತ್ತಿದ್ದರು.
ವಿಶ್ವ ಮಟ್ಟದಲ್ಲಿ ಮನ್ನಣೆ ಪಡೆದಿರುವ ಯೋಗವನ್ನು ನಾವು ಹೆಚ್ಚಿನ ಜನರಿಗೆ ಪರಿಚಯಿಸಬೇಕಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಲವು ಕಾರ್ಯಕ್ರಮಗಳನ್ನ ಹಾಕಿಕೊಳ್ಳುತ್ತಿದೆ. ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳು, ತಾಲೂಕು ಆಸ್ಪತ್ರೆಗಳು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಯೋಗ ಪರಿಚಯಿಸುವ ‘ಯೋಗ ಮಂದಿರ’ಗಳನ್ನ ಪ್ರಾರಂಭಿಸುವುದಾಗಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಮೈಸೂರು ಜಿಲ್ಲೆಯನ್ನು ಯೋಗ ಜಿಲ್ಲೆಯನ್ನಾಗಿ ನಿರ್ಮಿಸುವತ್ತ ಈಗಾಗಲೇ ಯೋಜನೆ ರೂಪಿಸಲಾಗಿದೆ.‌ ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದೇವೆ. ಮೈಸೂರು ಜಿಲ್ಲೆಯ ಪ್ರತಿ ಮನೆಗಳಲ್ಲಿ ಒಬ್ಬರಾದರೂ ಯೋಗಭ್ಯಾಸ ನಡೆಸುವ ರೀತಿಯಲ್ಲಿ ವ್ಯವಸ್ಥೆ ಕಲ್ಪಿಸಲು ಗುರಿ ಹೊಂದಲಾಗಿದೆ. ದೇಶದಲ್ಲಿಯೇ ಪ್ರಥಮ ಬಾರಿಗೆ ರಾಜ್ಯದಲ್ಲಿ ಒಂದು ಜಿಲ್ಲೆಯನ್ನು ಸಂಪೂರ್ಣವಾಗಿ ಯೋಗ ಜಿಲ್ಲೆಯನ್ನಾಗಿ ರೂಪಿಸುವತ್ತ ಹೆಜ್ಜೆ ಇಟ್ಟಿದ್ದೇವೆ. ರಾಜ್ಯದಲ್ಲಿ ಪರಂಪರಾಗತವಾಗಿ ಬಂದ ಅಷ್ಟಾಂಗ ಯೋಗಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಆಯುಷ್ ಇಲಾಖೆಯಿಂದ ಇಂದು ಯಶಸ್ವಿಯಾಗಿ 11ನೇ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಗಿದೆ. ರಾಜ್ಯದ 10 ಸಾವಿರ ಸ್ಥಳಗಳಲ್ಲಿ 5 ಲಕ್ಷಕ್ಕೂ ಹೆಚ್ಚು ಜನರಿಗೆ ಯೋಗಭ್ಯಾಸ ಮಾಡಲು ಸರ್ಕಾರ ಅನುವು ಮಾಡಿಕೊಟ್ಟುತ್ತು. 45 ನಿಮಿಷಗಳ ಯೋಗ ಪ್ರಾತ್ಯಕ್ಷಿಕೆಯನ್ನ ಪ್ರದರ್ಶಿಸಲಾಯಿತು.
ರಾಜ್ಯದ ಹಲವೆಡೆ ಯೋಗ ದಿನಾಚರಣೆಯ ಪ್ರಯುಕ್ತ ಯೋಗ ಪಾರ್ಕ್, ಯೋಗ ಧನುಷ್, ಹಸಿರು ಯೋಗ, ಯೋಗ ಮಹಾಕುಂಭ, ಯೋಗ ಸಂಯೋಗ, ಯೋಗ ಅನ್ ಪ್ಲಗ್ಸ್ ನಂತಹ ಕಾರ್ಯಕ್ರಮಗಳನ್ನು ಆಯುಷ್ ಇಲಾಖೆಯಿಂದ ಹಮ್ಮಿಕೊಳ್ಳಲಾಗಿದೆ. ಹಸಿರು ಯೋಗ ಕಾರ್ಯಕ್ರಮದ ಅಡಿಯಲ್ಲಿ 1 ಲಕ್ಷ ಗಿಡಗಳನ್ನ ನಡಲಾಗುವುದು. ಅಲ್ಲದೇ ಯೋಗ ಧನಷ್ ಎಂಬ ಕಾರ್ಯಕ್ರಮದ ಮೂಲಕ ರಾಜ್ಯದಾದ್ಯಂತ 5 ಲಕ್ಷ ಜನರಿಗೆ ಯೋಗ ಪ್ರೋಟೋಕಾಲ್ ಅನ್ನು ಹೇಳಿಕೊಡಲಾಗಿದ್ದು, ಕಾರ್ಯಕ್ರಮದ ಅಡಿಯಲ್ಲಿ 5000 ಶಾಲೆಗಳಲ್ಲಿ ಯೋಗ ಪ್ರೋಟೋಕಾಲ್ ಅನ್ನು ಮಾಡಲು ಕ್ರಮಕೈಗೊಳ್ಳಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.‌


ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ’ ಎಂಬ ಘೋಷವಾಕ್ಯದೊಂದಿಗೆ ಈ ಬಾರಿಯ ವಿಶ್ವ ಯೋಗ ದಿನಾಚರಣೆಯನ್ನ ಆಚರಿಸಲಾಯಿತು. ವಿಧಾನ ಸೌಧದ ಮೆಟ್ಟಿಲುಗಳ ಎದುರು 5 ಸಾವಿರಕ್ಕೂ ಹೆಚ್ಚು ಜನರು ಯೋಗಾಭ್ಯಾಸ ನಡೆಸಿದರು.‌ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಸಭಾಪತಿ ಬಸವರಾಜ್ ಹೊರಟ್ಟಿ ಅವರೊಂದಿಗೆ ಯೋಗಭ್ಯಾಸ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು