9:52 AM Tuesday26 - November 2024
ಬ್ರೇಕಿಂಗ್ ನ್ಯೂಸ್
ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ… ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣಗೆ ಜಯ: ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಮುಖಭಂಗ ​ ಮಹಾರಾಷ್ಟ್ರ: ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ? ಆರೆಸ್ಸೆಸ್ ಮುಖ್ಯಸ್ಥ ಡಾ. ಭಾಗವತ್ ಡಿ. 7ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ… ಬೆಂಗಳೂರು ಮತ್ತು ಚೆನ್ನೈಗೆ ಆಸ್ಟ್ರೇಲಿಯನ್ ಡಿಜಿಟೆಕ್ ಟ್ರೇಡ್ ಮಿಷನ್ ಭೇಟಿ ವೈಜ್ಞಾನಿಕತೆ, ವೈಚಾರಿಕತೆ ಇಲ್ಲದ ಶಿಕ್ಷಣದಿಂದ ಮಾನವೀಯ ಮೌಲ್ಯ ಬೆಳೆಸಿಕೊಳ್ಳಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ ನೀರು ಹರಿಸುವ ನಿರ್ಣಯದಿಂದ ನಮ್ಮ ಭಾಗದ ರೈತರಿಗೆ ಅನ್ಯಾಯ: ಮಾಜಿ ಸಚಿವ ನರಸಿಂಹ…

ಇತ್ತೀಚಿನ ಸುದ್ದಿ

ಎತ್ತಿನಹೊಳೆ ವಿರುದ್ದ ಪ್ರತಿಭಟನೆ ನಡೆಸಿದ್ದ ನಳಿನ್ ಇಂದು ನಾವೇ ಮಾಡಿದ್ದು ಎನ್ನುತ್ತಿದ್ದಾರೆ: ಮಾಜಿ ಸಚಿವ ರೈ ಲೇವಡಿ

22/12/2022, 17:07

ಮಂಗಳೂರು(reporterkarnataka.com): ಎತ್ತಿನಹೊಳೆ ಯೋಜನೆ ಜಾರಿಗೆ ತಂದಾಗ ಅದರ ವಿರುದ್ಧ ಪಾದಯಾತ್ರೆ, ಪ್ರತಿಭಟನೆ ನಡೆಸಿದ್ದ ಬಿಜೆಪಿ ರಾಜ್ಯಾಧ್ಯಕ್ಷರೂ ಆಗಿರುವ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಇದೀಗ ಹಾಸನ, ಕೋಲಾರ ಭಾಗದಲ್ಲಿ ಅದನ್ನು ನಾವೇ ಮಾಡಿದ್ದು ಎಂದು ಹೇಳಿಕೊಂಡು ತಿರುಗುತ್ತಿದ್ದಾರೆ ಎಂದು ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಬಿ. ರಮಾನಾಥ ರೈ ಲೇವಡಿ ಮಾಡಿದರು.
ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎತ್ತಿನ ಹೊಳೆ ವಿಚಾರದಲ್ಲಿಯೂ ನಾನು ಎಂದೂ ಹಿಪಾಕ್ರಸಿ ಪಾಲಿಟಿಕ್ಸ್ ಮಾಡಿಲ್ಲ. ಎತ್ತಿನಹೊಳೆ ಯೋಜನೆಯಿಂದ ಜಿಲ್ಲೆಯ ಜನರಿಗೆ ತೊಂದರೆ ಆದರೆ ಪಶ್ಚಿಮ ವಾಹಿನಿ ಯೋಜನೆಗಾಗಿ ಸುಮಾರು 60 ಮಂದಿಯ ರೈತರ ನಿಯೋಗವನ್ನು ಅಂದು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯರ ಬಳಿ ಕರೆದುಕೊಂಡು ಹೋಗಿದ್ದೆ. ಯೋಜನೆಗೆ
ಬಜೆಟ್‍ನಲ್ಲಿ ಹಣ ಮಂಜೂರು ಮಾಡಲಾಗಿತ್ತು. ಬಳಿಕ ಬಿಜೆಪಿ ಸರಕಾರ ಆಡಳಿತಕ್ಕೆ ಬಂತು. ಅವರು ಕಳೆದ ವರ್ಷ ಮತ್ತು ಈ ವರ್ಷ ಬಜೆಟ್‍ನಲ್ಲಿ ಹಣ ಬಿಡುಗಡೆ ಮಾಡಿದ್ದಾರೆ ಎಂದು ವಿವರ ನೀಡಿದರು.
ಅಂದು ಎತ್ತಿನಹೊಳೆ ವಿರುದ್ಧ ಪಾದಯಾತ್ರೆ ಮಾಡಿ ಇಂದು ಎತ್ತಿನ ಹೊಳೆ ಯೋಜನೆಗಾಗಿ ಕರಸೇವೆ ರೀತಿ ಚಳವಳಿ ಮಾಡುವುದಾಗಿ ಹೇಳುತ್ತಿರುವುದು ಚುನಾವಣೆ ಹತ್ತಿರ ಬಂದಾಗ ಬಿಜೆಪಿಯವರು ನಡೆಸುತ್ತಿರುವ ಕುತಂತ್ರ. ಇದೀಗ
ರಾಜ್ಯ ಸರಕಾರ ಕಸ್ತೂರಿ ರಂಗನ್ ವರದಿಗೆ ವಿರೋಧ ಇದೆ ಎಂದು ಹೇಳಿಕೆ ನೀಡಿ ರಾಜಕೀಯ ಲಾಭ ಪಡೆಯುವ ಪ್ರಯತ್ನ ಮಾಡುತ್ತಿದೆ. ಅದು ಬೇಡ. ಅದರ ಬದಲಿಗೆ
ಅದನ್ನು ರದ್ದುಪಡಿಸುವ ಬಗ್ಗೆ ಕ್ರಮ ವಹಿಸಲಿ ಎಂದು ರಮಾನಾಥ ರೈ ಒತ್ತಾಯಿಸಿದರು.
ಕಸ್ತೂರಿ ರಂಗನ್ ವರದಿ ಇನ್ನೂ ರದ್ದಾಗಿಲ್ಲ. ಆ ಸಮಸ್ಯೆ ಇನ್ನೂ ಜೀವಂತ ಇದೆ. ಕಸ್ತೂರಿ ರಂಗನ್ ವರದಿ ಜಾರಿ ಬೇಡ ಎಂದು ಆಕ್ಷೇಪವನ್ನು ಕೇಂದ್ರಕ್ಕೆ ರಾಜ್ಯ ಸರಕಾರ ಕಳುಹಿಸಿದೆ. ಅದನ್ನು ಜಾರಿಗೊಳಿಸುವ ಪ್ರಯತ್ನ ಮಾಡಲಿ ಎಂದು ಅವರು ತಾಕೀತು ಮಾಡಿದರು.
ಇಂದು ಬಿಜೆಪಿಯ ಡಬ್ಬಲ್ ಇಂಜಿನ್ ಸರಕಾರ ಇರುವಾಗ ಅದನ್ನು ರದ್ದುಪಡಿಸಲು ಕ್ರಮ ವಹಿಸುವುದು ಬಿಟ್ಟು ವಿರೋಧ ಎಂದು ಹೇಳುವುದು ರಾಜಕೀಯ ಪ್ರೇರಿತ ಎಂದು ಮಾಜಿ ಸಚಿವರು ನುಡಿದರು.
ಕಸ್ತೂರಿ ರಂಗನ್ ವರದಿ ಕೂಡಾ ಇನ್ನೂ ಕರಡು ಅಧಿಸೂಚನೆಯ ಹಂತದಲ್ಲಿದ್ದು, ಇದು ಜೀವಂತವಾಗಿದ್ದು, ಎಂದಿಗೂ ತೂಗುಗತ್ತಿಯಾಗಿದೆ. ಬಿಜೆಪಿ ತನ್ನ ಹಿಂದಿನ ಚುನಾವಣೆಯ ಪ್ರಣಾಳಿಕೆಯಲ್ಲಿಯೂ ಕಸ್ತೂರಿ ರಂಗನ್ ವರದಿ ರದ್ದುಪಡಿಸುವುದಾಗಿ ಹೇಳಿಕೊಂಡಿತ್ತು. ಆದರೆ ಐದು ವರ್ಷವಾದರೂ ಆಗಿಲ್ಲ ಎಂದು ರೈ ಆಕ್ರೋಶ ವ್ಯಕ್ತಪಡಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಶಾಲೆಟ್ ಪಿಂಟೋ, ಶಾಹುಲ್ ಹಮೀದ್, ಅಪ್ಪಿ, ಗಣೇಶ್ ಪೂಜಾರಿ, ಉಮೇಶ್ ದಂಡಕೇರಿ, ಜಯಶೀಲ ಅಡ್ಯಂತಾಯ, ಬಿ.ಎಲ್. ಪದ್ಮನಾಭ, ಶಬೀರ್, ನಝೀರ್ ಬಜಾಲ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು