3:25 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಪಕ್ಷ ವಿರೋಧಿ ಕೃತ್ಯಕ್ಕೆ ಸಿಕ್ತು ಸಾಕ್ಷ್ಯ: ಜಮೀರ್ ಅಹ್ಮದ್ ಸ್ಫೋಟಕ ಆಡಿಯೋ ವೈರಲ್

01/06/2026, 15:25

ಬೆಂಗಳೂರು(reporterkarnataka.com): ವಸತಿ ಸಚಿವ ಬಿ.ಝಡ್. ಜಮೀರ್ ಅಹ್ಮದ್ ಖಾನ್ ಅವರಿಗೆ ಸಂಬಂಧಿಸಿದ ಆಡಿಯೋ ಲೀಕ್ ವಿವಾದವೊಂದು ಕಾಂಗ್ರೆಸ್ ಹೈಕಮಾಂಡ್ ಮೆಟ್ಟಿಲೇರಿದ್ದು, ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿದೆ.


ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆಯ ಸಂದರ್ಭದಲ್ಲಿ ಅಧಿಕೃತ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಒಳಸಂಚು ನಡೆಸಿದ ಹಾಗೂ ಎಸ್‌ಡಿಪಿಐ (SDPI) ಪಕ್ಷಕ್ಕೆ ಪರೋಕ್ಷ ಬೆಂಬಲ ನೀಡಿದ ಆರೋಪ ಜಮೀರ್ ಅವರ ಮೇಲಿದೆ.

*ಆಡಿಯೋದಲ್ಲಿ ಏನಿದೆ?:*
ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ನಾಯಕರಿಗೆ ಕಾಂಗ್ರೆಸ್ ಟಿಕೆಟ್ ನಿರಾಕರಿಸಿದ್ದಕ್ಕೆ ಅಲ್ಪಸಂಖ್ಯಾತ ನಾಯಕರು ಅಸಮಾಧಾನಗೊಂಡಿದ್ದರು. ಈ ನಡುವೆ ಲೀಕ್ ಆಗಿರುವ ಆಡಿಯೋದಲ್ಲಿ, ಅಧಿಕೃತ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರನ್ನು ಸೋಲಿಸಲು ಮತ್ತು ಪಕ್ಷದ ಆಂತರಿಕ ಕಾರ್ಯತಂತ್ರಗಳನ್ನು ಹಳಿತಪ್ಪಿಸಲು ನಡೆದ ಚರ್ಚೆಗಳು ಅಡಗಿವೆ ಎನ್ನಲಾಗಿದೆ.
ಆಡಿಯೋದಲ್ಲಿ ಮಹಮ್ಮದ್ಸಿರಾಜ್‌ ಅವರೊಂದಿಗೆ ಮುಸ್ಲಿಂ ಮತದಾರರನ್ನು ನೀವಾಗಿಯೇ ಕರೆತರಬೇಡಿ ಎಂದಿದ್ದಾರೆ. ಬಂದರೂ ಅವರಿಗೆ ಕಾಂಗ್ರೆಸ್‌ಗೆ ವೋಟ್ ಹಾಕಿ ರೂಡಿ, ಅವರಿಗೆ ಪಕ್ಷೇತರರಿಗೆ ವೋಟ್‌ ಹಾಕಲು ಹೇಳಿ ಎಂದಿದ್ದಾರೆ.
ಈ ಸಂವೇದನಾಶೀಲ ಆಡಿಯೋ ರೆಕಾರ್ಡಿಂಗ್‌ಗಳು ಸದ್ಯ ಕಾಂಗ್ರೆಸ್ ಹೈಕಮಾಂಡ್ ಕೈಸೇರಿದ್ದು, ನವದೆಹಲಿ ಮಟ್ಟದಲ್ಲಿ ಗಂಭೀರ ಪರಿಶೀಲನೆ ಆರಂಭವಾಗಿದೆ.
ಈ ವಿವಾದದ ಕುರಿತು ಮಾಧ್ಯಮಗಳಿಗೆ ವಿಶೇಷ ಪ್ರತಿಕ್ರಿಯೆ ನೀಡಿರುವ ಸಚಿವ ಜಮೀರ್ ಅಹ್ಮದ್ ಖಾನ್, ತಮ್ಮ ಮೇಲಿನ ಎಲ್ಲಾ ಆರೋಪಗಳನ್ನು ಸಂಪೂರ್ಣವಾಗಿ ತಳ್ಳಿಹಾಕಿದ್ದಾರೆ.

*ರಾಜಕೀಯ ಪ್ರೇರಿತ:* ಈ ಆಡಿಯೋ ಲೀಕ್ ಹಗರಣವು ಸಂಪೂರ್ಣ ರಾಜಕೀಯ ಪ್ರೇರಿತವಾಗಿದ್ದು, ತಾವು ಯಾವಾಗಲೂ ಪಕ್ಷದ ಹಿತಾಸಕ್ತಿಗಾಗಿಯೇ ಕೆಲಸ ಮಾಡಿದ್ದೇನೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಕಾಂಗ್ರೆಸ್ ಶಿಸ್ತುಕ್ರಮ ಕೈಗೊಳ್ಳಲಿದೆಯೇ? ಇಬ್ಬರು ನಾಯಕರ ಅಮಾನತು: ಈ ಒಳಸಂಚಿನ ವಿವಾದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಈಗಾಗಲೇ ತನ್ನ ಇಬ್ಬರು ಹಿರಿಯ ಅಲ್ಪಸಂಖ್ಯಾತ ನಾಯಕರಾದ ಅಬ್ದುಲ್ ಜಬ್ಬಾರ್ ಮತ್ತು ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ವಿರುದ್ಧ ಕಠಿಣ ಕ್ರಮ ಕೈಗೊಂಡು ಪಕ್ಷದಿಂದ ಹೊರಹಾಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು