11:50 PM Friday23 - January 2026
ಬ್ರೇಕಿಂಗ್ ನ್ಯೂಸ್
ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು

ಇತ್ತೀಚಿನ ಸುದ್ದಿ

ಮಾಜಿ ಸಂಸದ ದ್ರುವನಾರಾಯಣ್ ಸ್ಮರಣಾರ್ಥ ಆಶ್ರಯ ಚಾರಿಟೀಸ್ ವತಿಯಿಂದ ಬಡಬಗ್ಗರಿಗೆ ವಿವಿಧ ಸವಲತ್ತು ವಿತರಣೆ

29/10/2024, 19:02

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಮಾಜಿ ಸಂಸದ ಆರ್ ಧ್ರುವನಾರಾಯಣ್ ಸ್ಮರಣಾರ್ಥ ಆಶ್ರಯ ಚಾರಿಟೀಸ್ ವತಿಯಿಂದ ಬಡಬಗ್ಗರು, ವಿಕಲಚೇತನರು ಹಾಗೂ ವಿದ್ಯಾರ್ಥಿಗಳಿಗೆ ವಿವಿಧ ಸವಲತ್ತುಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ದರ್ಶನ್ ದ್ರುವ ನಾರಾಯಣ್ ಸೇರಿದಂತೆ ವೇದಿಕೆ ಮೇಲಿನ ಗಣ್ಯರು ದೀಪ ಬೆಳಗಿಸುವ ಮೂಲಕ ನೆರವೇರಿಸಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಶಾಸಕ ದರ್ಶನ್ ಮಾತನಾಡಿ, ಕಳೆದ ಹಲವಾರು ವರ್ಷಗಳಿಂದ ಆಶ್ರಯ ಚಾರಿಟೀಸ್ ಸಂಸ್ಥೆಯ ಸಂಸ್ಥಾಪಕರಾದ ಸಂಜಯ್ ಪಾಲ್ ಅವರು ವಿವಿಧ ಜನಪರ ಸೇವೆಗಳನ್ನು ಮಾಡಿಕೊಂಡು ಬರುತ್ತಿದ್ದಾರೆ. ನಮ್ಮ ತಂದೆಯವರ ಸ್ಮರಣಾರ್ಥ ಇಂದು ಬಡವರು ಹಿಂದುಳಿದವರು, ವಿಕಲಚೇತನರು ವಿದ್ಯಾರ್ಥಿಗಳು, ಪೌರಕಾರ್ಮಿಕರು, ಆಟೋ ಡ್ರೈವರ್ ಗಳು ಸೇರಿದಂತೆ ನೂರಾರು ಮಂದಿಗೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ವಿವಿಧ ಸವಲತ್ತುಗಳನ್ನು ನೀಡಿ ತಮ್ಮ ಸಾಮಾಜಿಕ ಕಳಕಳಿಯನ್ನು ಮೆರೆದಿದ್ದಾರೆ. ಇವರಿಗೆ ಇನ್ನಷ್ಟು ಜನಸೇವೆ ಮಾಡುವ ಶಕ್ತಿಯನ್ನು ಆ ದೇವರು ಕರುಣಿಸಲಿ ಎಂದು ಶುಭ ಹಾರೈಸಿದರು.
ಆಶ್ರಯ ಚಾರಿಟೀಸ್ ಸಂಸ್ಥಾಪಕ ಸಂಜಯ್ ಪಾಲ್ ಮಾತನಾಡಿ ಮಾಜಿ ಸಂಸದರಾದ ಆರ್ ಧ್ರುವನಾರಾಯಣ್ ಅವರು ಯಾವಾಗಲೂ ಬಡವರ ಹಿಂದುಳಿದವರ ದೀನ ದಲಿತರ ಏಳಿಗೆಗಾಗಿ ಶ್ರಮಿಸುತ್ತಿದ್ದರು. ಅವರ ಸ್ಮರಣಾರ್ಥ ಇಂದು ಅವರ ಪುತ್ರ ಶಾಸಕ ದರ್ಶನ್ ದ್ರುವನಾರಾಯಣ್ ನೇತೃತ್ವದಲ್ಲಿ ಬಡವರಿಗಾಗಿ ನನ್ನ ಕೈಲಾದ ಅಳಿಲು ಸೇವೆಯನ್ನು ಮಾಡುತ್ತಿದ್ದೇನೆ ಎಂದರು.


ಇದೇ ಸಂದರ್ಭ ವೇದಿಕೆ ಮೇಲಿನ ಗಣ್ಯರು ಅರ್ಹಫಲಾನುಭವಿಗಳಿಗೆ, ಸೀರೆ, ಬಟ್ಟೆ, ಸಮವಸ್ತ್ರ ಸ್ಕೂಲ್ ಬ್ಯಾಗ್, ವಿಕಲಚೇತನರಿಗೆ ವೀಲ್ ಚೇರ್, ಊರುಗೋಲು ಸೇರಿದಂತೆ ವಿವಿಧ ಸಲಕರಣೆಗಳನ್ನು ವಿತರಣೆ ಮಾಡಿದರು. ಇದೇ ಸಂದರ್ಭ ಬಂದ ಎಲ್ಲಾ ಫಲಾನುಭವಿಗಳು ಹಾಗೂ ಅತಿಥಿ ಗಣ್ಯರಿಗೆ ಊಟದ ವ್ಯವಸ್ಥೆಯನ್ನು ಸಹ ಮಾಡಲಾಗಿತ್ತು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಮುಖಂಡರಾದ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮಹೇಶ್, ವಕೀಲ ರಾಚಪ್ಪ, ದೊರೆಸ್ವಾಮಿ ನಾಯಕ, ತಗಡೂರು ನಾಯಕ, ಸಂಸ್ಥೆಯ ಕಾರ್ಯದರ್ಶಿ ಭಾರ್ಗವ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು