6:13 PM Tuesday30 - June 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ… ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ… 2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ…

ಇತ್ತೀಚಿನ ಸುದ್ದಿ

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ ರೈತರ ದೂರಿನ ಸುರಿಮಳೆ

30/06/2026, 18:13

ಬೆಂಗಳೂರು(reporterkarnataka.com): ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಹಾಸನ ಜಿಲ್ಲಾ ರೈತ ಸಂಘಟನೆಯ ಪ್ರತಿನಿಧಿಗಳ ನಿಯೋಗವು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿತು.
ಈ ವೇಳೆ ಪ್ರಸ್ತಾಪಿಸಿದ ರೈತರು, ಎಚ್.ಡಿ.ದೇವೇಗೌಡ ಎಜುಕೇಷನ್ ಟ್ರಸ್ಟ್ ಮಾಡಲು ನಮ್ಮ ಭೂಮಿ ಕಬಳಿಕೆ ಮಾಡಲಾಗಿದೆ. ಅದರಲ್ಲೂ, ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಕುಮ್ಮಕ್ಕಿನಿಂದ ನಿವೇಶನವೂ ಇಲ್ಲ, ಪರಿಹಾರವೂ ಇಲ್ಲ. ಐಐಟಿಗೆ ಮೊದಲು 334 ಎಕರೆ ಭೂಸ್ವಾಧೀನ ಎನ್ನುವ ಮಾತುಗಳು ಕೇಳಿಬಂದವು, ನಂತರ 1057 ಎಕರೆ ಎಂದು ಹೇಳಿದರು. ಈಗ ನೋಡಿದರೆ ಐಐಟಿ ಧಾರವಾಡಕ್ಕೆ ಹೋಗಿದೆ.ಆದರೆ, ಅದರ ಹೆಸರಲ್ಲಿ ದೇವೇಗೌಡರ ಕುಟುಂಬ ಭೂಕಬಳಿಸಲು ಸಂಚು ಮಾಡಿದೆ ಎಂದು ಆರೋಪಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ನಾನು ಬಿಡದಿ ರೈತರಿಗೆ ಒಂದು ನ್ಯಾಯ, ಹಾಸನ ರೈತರಿಗೆ ಮತ್ತೊಂದು ನ್ಯಾಯ ಮಾಡುವುದಿಲ್ಲ. ರೈತರ ಕೈಗೆ ಹೆಚ್ಚಿಗೆ ಹಣ ಬಂದರೆ ಎಲ್ಲರಿಗಿಂತ ಹೆಚ್ಚು ಸಂತೋಷ ಪಡುವವನು ನಾನು. ಈ ಸರಕಾರ ರೈತರ ಪರವಾಗಿ ಇರುತ್ತದೆ. ಸಂಬಂಧಪಟ್ಟ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಸ್ಥಳದಲ್ಲೇ ಚರ್ಚಿಸಿ, ಸಮಸ್ಯೆಗಳ ಶೀಘ್ರ ಹಾಗೂ ಕಾನೂನುಬದ್ಧ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡುತ್ತೇನೆ ಎಂದರು.
ಸಭೆಯಲ್ಲಿ ಹಾಸನ ಕಾಂಗ್ರೆಸ್ ಸಂಸದ ಶ್ರೇಯಸ್ ಪಟೇಲ್, ಶಾಸಕ ಶಿವಲಿಂಗೇಗೌಡ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಗೋಪಾಲಸ್ವಾಮಿ ಸೇರಿದಂತೆ ಯೋಜನೆ ವ್ಯಾಪ್ತಿಯ ಏಳು ಗ್ರಾಮಗಳ ರೈತರು ಭಾಗಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು