ಇತ್ತೀಚಿನ ಸುದ್ದಿ
ಮಾಜಿ ಪ್ರಧಾನಿ, ಆರ್ಥಿಕ ಸುಧಾರಣೆಯ ಹರಿಕಾರ ಡಾ. ಮನಮೋಹನ್ ಸಿಂಗ್ ನಿಧನ
26/12/2024, 23:07
ಹೊಸದಿಲ್ಲಿ(reporterkarnataka.com): ಮಾಜಿ ಪ್ರಧಾನಿ, ಕಾಂಗ್ರೆಸ್ ಹಿರಿಯ ನಾಯಕ ಡಾ. ಮನಮೋಹನ್ ಸಿಂಗ್ ಅವರು ಇಂದು ನಿಧನರಾದರು.
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ 92ರ ಹರೆಯದ ಡಾ. ಸಿಂಗ್ ಅವರನ್ನು ರಾತ್ರಿ 8 ಗಂಟೆ ಸುಮಾರಿಗೆ ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ನ (ಎಐಐಎಂಎಸ್) ತುರ್ತು ವಿಭಾಗಕ್ಕೆ ದಾಖಲಿಸಲಾಗಿತ್ತು. ಆದರೆ, ಅವರು ಚಿಕಿತ್ಸೆಗೆ ಸ್ಪಂದಿಸದೆ ನಿಧನರಾದರು. ಡಾ. ಮನಮೋಹನ್ ಸಿಂಗ್ 2004ರಿಂದ 2014ರ ವರೆಗೆ 10 ವರ್ಷಗಳ ಕಾಲ ಪ್ರಧಾನ ಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು. ಆರ್ಥಿಕ ಸುಧಾರಣೆ ಹೆಸರುವಾಸಿಯಾದ ಡಾ. ಸಿಂಗ್ ಅವರು ಜನರಿಗೆ ಪ್ರಯೋಜನವಾಗುವ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದರು. ಅವರು 33 ವರ್ಷಗಳ ಸುದೀರ್ಘ ಅವಧಿಯಲ್ಲಿ ರಾಜ್ಯಸಭಾ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು.
ಕಾಂಗ್ರೆಸ್ ನ ಹಿರಿಯ ನಾಯಕರಾದ ಅವರು ಏಪ್ರಿಲ್‌ನಲ್ಲಿ ರಾಜ್ಯಸಭೆಯಿಂದ ನಿವೃತ್ತರಾದರು.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ, ಒಂದು ವಾರ ರಾಜ್ಯದಲ್ಲಿ ಶೋಕಾಚರಣೆ, *ಡಿ.27ರಂದು ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ*