4:29 AM Tuesday10 - November 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು | ತರೀಕೆರೆ‌ ಬಳಿ ಮಣ್ಣಿನಗುಡ್ಡೆಗೆ ಬೈಕ್ ಡಿಕ್ಕಿ: ಪುತ್ರಿ ಸಾವು; ತಂದೆ… ಎಚ್​.ಡಿ.ಕುಮಾರಸ್ವಾಮಿ ಆರೋಪಕ್ಕೆ ಹಾಸನ ಜಿಲ್ಲಾಧಿಕಾರಿ ತಿರುಗೇಟು: ಪಿಎ ವಾಟ್ಸಪ್​ ಚಾಟ್​ ಬಗ್ಗೆ ಡಿಸಿ… ಮುಖ್ಯಮಂತ್ರಿ ಡಿಕೆಶಿ ಹಾಸನಾಂಬೆ ದರ್ಶನ ಪಡೆಯುತ್ತಿರುವ ವೀಡಿಯೋಗೆ ಭಕ್ತರಿಂದ ಚಪ್ಪಲಿ ಎಸೆತ: ಸರತಿ… ಕೊಡಗಿನ ಜನತೆಗೆ ಬೆಲೆ ಏರಿಕೆ ನಡುವೆಯೇ ಮತ್ತೊಂದು ಶಾಕ್: ಖಾಸಗಿ ಬಸ್ ದರ… Bangalore | ಹಾಕಿ ದಿಗ್ಗಜ ಕೊಡಗಿನ ಎಂ.ಎಂ. ಸೋಮಯ್ಯ ಮನೆಯಲ್ಲಿದ್ದ ಒಲಿಂಪಿಕ್ಸ್ ಚಿನ್ನದ… ಬಸ್ ದರ ಏರಿಕೆ | ಹೆಂಡ್ತಿಗೆ ಫ್ರಿ ಕೊಟ್ಟು ಗಂಡನಿಂದ ಡಬಲ್ ವಸೂಲಿ… Mysore | ಹುಣಸೂರು ಬಳಿ ಬೈಕ್‌ಗೆ ಒಕ್ಕಣೆ ಯಂತ್ರ ಡಿಕ್ಕಿ: ಸವಾರರಿಬ್ಬರ ದುರ್ಮರಣ ಕುಟುಂಬ ಸಮೇತರಾಗಿ ಹಾಸನಾಂಬೆ ದೇವಿಯ ದರ್ಶನ ಪಡೆದ ಸಚಿವ ಕೃಷ್ಣ ಬೈರೇಗೌಡ: ₹1,000… Kodagu | ಚಲಿಸುತ್ತಿದ್ದಾಗಲೇ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಹೊಗೆ: ಪ್ರಯಾಣಿಕರಲ್ಲಿ ಆತಂಕ ಅಂತಾರಾಷ್ಟ್ರೀಯ ಸಾಧಕ ಡಾ. ಜಿ. ರಾಮಕೃಷ್ಣ ಆಚಾರ್ ಅವರ ಜೀವನಚರಿತ್ರೆ ‘Village Boy…

ಇತ್ತೀಚಿನ ಸುದ್ದಿ

ಡಾ. ರಾಜ್ ಕುಮಾರ್ ಸಂಬಂಧಿ ಮನೆಯಲ್ಲಿ ಸ್ಫೋಟ ಪಟಾಕಿಯಿಂದ ಸಂಭವಿಸಿದ್ದು: ಪೊಲೀಸರ ಸ್ಪಷ್ಟನೆ

10/11/2026, 16:31

ಗಾಜನೂರು(reporterkarnataka.com): ತಮಿಳುನಾಡಿನ ಗಾಜನೂರಿನಲ್ಲಿರುವ ವರನಟ ಡಾ. ರಾಜ್‌ಕುಮಾರ್ ಅವರ ಸಂಬಂಧಿಕರ ಮನೆಯಲ್ಲಿ ನಿಗೂಢ ಸ್ಫೋಟವೊಂದು ಸಂಭವಿಸಿದ್ದು, ಆರಂಭದಲ್ಲಿ ಇದು ಕಚ್ಚಾ ಬಾಂಬ್ ದಾಳಿ ಎಂಬ ಶಂಕೆ ವ್ಯಕ್ತವಾಗಿತ್ತು. ಇದೀಗ ಘಟನೆಗೆ ಸಂಬಂಧಿಸಿದಂತೆ ಇದು ಕಚ್ಚಾ ಬಾಂಬ್ ಅಲ್ಲ, ಪಟಾಕಿ ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.
ರಾಜ್‌ಕುಮಾರ್ ಅವರ ತಂಗಿಯ ಮೊಮ್ಮಗಳು ಮನೋಜ್ಞಾ ಅವರ ನಿವಾಸದಲ್ಲಿ ಈ ಘಟನೆ ನಡೆದಿದ್ದು, ಮನೆಯಲ್ಲಿದ್ದವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ಈ ಬಗ್ಗೆ ಸ್ಪಷ್ಟನೆ ನೀಡಿರುವ ಈರೋಡ್ ಪೊಲೀಸರು ಇದೊಂದು ಪಟಾಕಿ ಸ್ಫೋಟ ಎಂದು ಸ್ಪಷ್ಟಪಡಿಸಿದ್ದಾರೆ.

*ಈರೋಡ್ ಪೊಲೀಸರಿಂದ ಸ್ಪಷ್ಟನೆ:*
ಘಟನೆಯ ಕುರಿತು ಪರಿಶೀಲನೆ ನಡೆಸಿದ ತಮಿಳುನಾಡಿನ ಈರೋಡ್ ಪೊಲೀಸರು ಮನೆಯವರ ಶಂಕೆಯನ್ನು ತಳ್ಳಿಹಾಕಿದ್ದಾರೆ. ಇದು ಕಚ್ಚಾ ಬಾಂಬ್, ನಾಡ ಬಾಂಬ್ ಅಥವಾ ಇನ್ಯಾವುದೇ ಪ್ರಬಲ ಸ್ಫೋಟಕವಲ್ಲ, ಬದಲಾಗಿ ಕೇವಲ ಪಟಾಕಿಯಿಂದ ಸಂಭವಿಸಿದ ಸ್ಫೋಟ ಎಂದು ಸ್ಪಷ್ಟಪಡಿಸಿದ್ದಾರೆ. ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಿಡಿಸಿದ ಪಟಾಕಿಯಿಂದಲೇ ಈ ಘಟನೆ ನಡೆದಿದ್ದು, ಯಾವುದೇ ರೀತಿಯ ಬಾಂಬ್ ದಾಳಿ ನಡೆದಿಲ್ಲ ಎಂದು ಪೊಲೀಸರು ಅಧಿಕೃತವಾಗಿ ಮಾಹಿತಿ ನೀಡುವ ಮೂಲಕ ಆತಂಕಕ್ಕೆ ತೆರೆ ಎಳೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು