ಇತ್ತೀಚಿನ ಸುದ್ದಿ
ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು
13/12/2025, 15:03
ಮಡಿಕೇರಿ(reporterkarnataka.com): ಮಂಜಿನನಗರಿ ಮಡಿಕೇರಿಯಲ್ಲಿ ಆಂಧ್ರ ಪ್ರದೇಶದ ನಕಲಿ ಪೊಲೀಸರನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಲಾಗಿದೆ.

ಆಂಧ್ರ ಪ್ರದೇಶ ನೋಂದಣಿಯ ಕಾರಿನಲ್ಲಿ ಯುವಕರ ಗುಂಪು ಕಾರಿನ ಮುಂಭಾಗದ ಗ್ಲಾಸ್ ಮೇಲೆ ಪೊಲೀಸ್ ಎಂದು ನಾಮಫಲಕ ಹಾಕಿಕೊಂಡು ಓಡಾಡುತ್ತಿರುವ ಬಗ್ಗೆ ಸ್ಥಳೀಯ ಆಟೋ ಚಾಲಕರು ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನಲೆಯಲ್ಲಿ ಮಡಿಕೇರಿ ಟೌನ್ ಹಾಲ್ ಸರ್ಕಲ್ ನಲ್ಲಿ ವಾಹನ ಅಡ್ಡ ಗಟ್ಟಿ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗಿದೆ.












