ಇತ್ತೀಚಿನ ಸುದ್ದಿ
ಫಲಾನುಭವಿಗಳ ಸಮ್ಮೇಳನಕ್ಕೆ ಮುಖ್ಯಮಂತ್ರಿ ನಾಳೆ ಮಂಗಳೂರಿಗೆ: ಕೆಎಸ್ಸಾರ್ಟಿಸಿ ಬಸ್ ಸೇವೆಯಲ್ಲಿ ವ್ಯತ್ಯಯ
15/03/2023, 20:38
ಮಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ ಮಂಗಳೂರಿನಲ್ಲಿ ಫಲಾನುಭವಿಗಳ ಸಮ್ಮೇಳನದಲ್ಲಿ ಭಾಗವಹಿಸುವ ಹಿನ್ನೆಲೆಯಲ್ಲಿ ಫಲಾನುಭವಿಗಳಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸಲು ಜಿಲ್ಲಾಡಳಿತ ಬೇಡಿಕೆ ಸಲ್ಲಿಸಿರುವುದರಿಂದ ಕೆಲವು ರೂಟ್ ಗಳ ಬಸ್ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಕೆಎಸ್ಸಾರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.
ಗುರುವಾರ(ಮಾ.16) ರಂದು ನಗರದ ಕರಾವಳಿ ಉತ್ಸವ ಮೈದಾನದಲ್ಲಿ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಜಿಲ್ಲಾಮಟ್ಟದ ಸಮ್ಮೇಳನ (ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳು) ಆಯೋಜಿಸಲಾಗಿದೆ.
ಮುಖ್ಯಮಂತ್ರಿ, ಸಚಿವರುಗಳು, ಶಾಸಕರುಗಳು ಭಾಗವಹಿಸಲಿದ್ದು, ಕಾರ್ಯಕ್ರಮಕ್ಕೆ ಆಗಮಿಸುವ ಫಲಾನುಭವಿಗಳ ಅನುಕೂಲಕ್ಕಾಗಿ ಕ.ರಾ.ರ.ಸಾ.ನಿಗಮ, ಮಂಗಳೂರು ವಿಭಾಗದಿಂದ ಬಸ್ಸುಗಳನ್ನು ನಿಯೋಜನೆ ಮಾಡಲು ಜಿಲ್ಲಾಡಳಿತದಿಂದ ಬೇಡಿಕೆ ಬಂದಿದೆ. ಈ ಕಾರ್ಯಕ್ರಮಕ್ಕೆ ಮಂಗಳೂರು ವಿಭಾಗದಿಂದ ಬಸ್ಸುಗಳನ್ನು ಸಾಂದರ್ಭಿಕ ಜಪ್ಪಂದದ ಮೇರೆಗೆ ನಿಯೋಜಿಸಲಾಗುತ್ತಿದೆ.
ಆದುದರಿಂದ ಮಾ. 16ರಂದು ಮಂಗಳೂರು/ಸ್ಟೇಟ್ ಬ್ಯಾಂಕ್-ಧರ್ಮಸ್ಥಳ/ಉಪ್ಪಿನಂಗಡಿ/ಸುಬ್ರಹ್ಮಣ್ಯ/ ಕಾಸರಗೋಡು: ಮಾರ್ಗದ ಸಾರಿಗೆ ಕಾರಾಚರಣೆಯಲ್ಲಿ ಸ್ವಲ್ಪ ಮಟ್ಟಿನ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕ ಪ್ರಯಾಣಿಕರು ಕರಾರಸಾಗಮದೊಂದಿಗೆ ಸಹಕರಿಸುವಂತೆ ಈ ಮೂಲಕ ಕೋರಲಾಗಿದೆ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.














