ಇತ್ತೀಚಿನ ಸುದ್ದಿ
ಫರಂಗಿಪೇಟೆ: ಮುಖ್ಯಮಂತ್ರಿ ಕಾರಿಗೆ ಎಸ್ ಡಿಪಿಐ ಕಾರ್ಯಕರ್ತರಿಂದ ಮುತ್ತಿಗೆ ಯತ್ನ; ಕಪ್ಪು ಬಾವುಟ ಪ್ರದರ್ಶನ
13/04/2022, 13:23
ಮಂಗಳೂರು(reporterkarnataka.com): ನಗರದ ಹೊರವಲಯದ ಫರಂಗಿಪೇಟೆಯಲ್ಲಿ
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಎಸ್ ಡಿಪಿಐ ಪಕ್ಷದ ಕಾರ್ಯಕರ್ತರು ಮುತ್ತಿಗೆ ಹಾಕಿ ಕಪ್ಪು ಬಾವುಟ ಪ್ರದರ್ಶಿಸಿದ ಘಟನೆ ನಡೆದಿದೆ.
ಅಲ್ಪಸಂಖ್ಯಾತರ ವಿರೋಧಿ ಸಿಎಂ ಗೋ ಬ್ಯಾಕ್ ಎಂದು ಘೋಷಣೆಗಳನ್ನು ಕೂಗುತ್ತಾ ಸಿಎಂ ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.
ಕೊಲೆ ಆರೋಪ ಎದುರಿಸುತ್ತಿರುವ ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನು ಬಂಧಿಸಬೇಕು ಎಂದು ಕಾರ್ಯಕರ್ತರು ಒತ್ತಾಯಿಸಿದರು.
ಬಂಟ್ವಾಳದ ಬಂಟರ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಮಂಗಳೂರಿನಿಂದ ರಸ್ತೆ ಮಾರ್ಗವಾಗಿ ಪ್ರಯಾಣಿಸುತ್ತಿದ್ದ ಮುಖ್ಯಮಂತ್ರಿ
ಕಾರಿಗೆ ಎಸ್ ಡಿಪಿಐ ಕಾರ್ಯಕರ್ತರು ಮುತ್ತಿಗೆಗೆ ಯತ್ನಿಸಿದ್ದಾರೆ. ಕೂಡಲೇ ಮುಖ್ಯಮಂತ್ರಿ ಭದ್ರತಾ ಸಿಬ್ಬಂದಿಗಳು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.