11:05 PM Wednesday30 - September 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಸಿದ್ದರಾಮಯ್ಯ!: ಬೆಳ್ಳಿತೆರೆಗೆ ಭರ್ಜರಿ ಎಂಟ್ರಿ ಕೊಟ್ಟ ಮಾಜಿ ಸಿಎಂ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ…

ಇತ್ತೀಚಿನ ಸುದ್ದಿ

ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಬಸವರಾಜು ಅವರಿಗೆ ಮಂಗಳೂರು ವಕೀಲರ ಸಂಘದಿಂದ ಬೀಳ್ಕೊಡುಗೆ

30/09/2026, 23:05

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಸವರಾಜು ಅವರು ನಿವೃತ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ, ಮಂಗಳೂರು ವಕೀಲರ ಸಂಘದ ವತಿಯಿಂದ ಮಂಗಳೂರು ಬಾರ್ ಅಸೋಸಿಯೇಷನ್‌ ಆವರಣದಲ್ಲಿರುವ ಕಾನ್ಫರೆನ್ಸ್ ಹಾಲ್‌ನಲ್ಲಿ ಬೀಳ್ಕೊಡುಗೆ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ವಕೀಲರ ಸಂಘದ ಅಧ್ಯಕ್ಷರಾದ ಜಗದೀಶ್ ಕೆ. ಶೇಣವ ಅವರು ವಹಿಸಿದ್ದರು. ಈ ಸಂದರ್ಭದಲ್ಲಿ ಸಂಘದ ಮಾಜಿ ಅಧ್ಯಕ್ಷರಾದ ಅಶೋಕ್ ಅರಿಗ, ಪ್ರಧಾನ ಜಿಲ್ಲಾ ಸರ್ಕಾರಿ ವಕೀಲರಾದ ಎಂ. ಪಿ. ನೊರೋನ್ಹಾ, ಪ್ರಧಾನ ಕಾರ್ಯದರ್ಶಿ ಗೌತಮ್ ಬಿ.ಪಿ., ಕೋಶಾಧಿಕಾರಿ ರೇಖಾ, ಜೊತೆ ಕಾರ್ಯದರ್ಶಿ ರವಿಕುಮಾರ್ ವಿ. ಸೇರಿದಂತೆ ನ್ಯಾಯಾಧೀಶರು ಹಾಗೂ ಹಿರಿಯ ಮತ್ತು ಕಿರಿಯ ವಕೀಲರು ಉಪಸ್ಥಿತರಿದ್ದರು.
ನ್ಯಾಯಾಂಗ ಕ್ಷೇತ್ರದಲ್ಲಿ ಬಸವರಾಜು ಅವರು ಸಲ್ಲಿಸಿದ ಸೇವೆ ಹಾಗೂ ವಕೀಲರು ಮತ್ತು ನ್ಯಾಯಾಂಗದ ನಡುವಿನ ಉತ್ತಮ ಬಾಂಧವ್ಯವನ್ನು ಕಾರ್ಯಕ್ರಮದಲ್ಲಿ ಸ್ಮರಿಸಲಾಯಿತು. ಅವರ ನಿವೃತ್ತಿ ಜೀವನ ಸುಖ, ಶಾಂತಿ ಹಾಗೂ ಆರೋಗ್ಯದಿಂದ ಕೂಡಿರಲಿ ಎಂದು ಮಂಗಳೂರು ವಕೀಲರ ಸಂಘದ ವತಿಯಿಂದ ಶುಭ ಹಾರೈಸಲಾಯಿತು.
ಕಾರ್ಯಕ್ರಮದಲ್ಲಿ ವಕೀಲರ ಸಂಘದ ಪದಾಧಿಕಾರಿಗಳು, ನ್ಯಾಯಾಧೀಶರು ಹಾಗೂ ಅಪಾರ ಸಂಖ್ಯೆಯ ಹಿರಿಯ ಮತ್ತು ಕಿರಿಯ ವಕೀಲರು ಭಾಗವಹಿಸಿ ಬಸವರಾಜು ಅವರಿಗೆ ಆತ್ಮೀಯವಾಗಿ ಬೀಳ್ಕೊಡುಗೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು