ಇತ್ತೀಚಿನ ಸುದ್ದಿ
ಸಾಲ ಮರು ಪಾವತಿಸಲು ಬ್ಯಾಂಕ್ ಅಧಿಕಾರಿಗಳ ಕಿರುಕುಳ: ರೈತ ಮನನೊಂದು ಆತ್ಮಹತ್ಯೆ
01/10/2025, 22:24

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಸಾಲ ಭಾದೆಯಿಂದ ವಿಷ ಸೇವಿಸಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಅಜ್ಜಂಪುರ ತಾಲೂಕಿನ ಹೊಸಹಳ್ಳಿ ತಾಂಡ್ಯಾದಲ್ಲಿ ನಡೆದಿದೆ.
ಹನುಮಂತ್ ನಾಯ್ಕ (41) ಮೃತ ದುರ್ದೈವಿ. ಬ್ಯಾಂಕ್ ಅಧಿಕಾರಿಗಳ ಕಿರುಕುಳದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ತರೀಕೆರೆ, ಶಿವಮೊಗ್ಗದಲ್ಲಿ ಚಿಕಿತ್ಸೆ ಕೊಡಿಸಿ ಮಂಗಳೂರಿಗೆ ರವಾನಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಯಲ್ಲಿ ಸಾವು ಸಂಭವಿಸಿದೆ.
ಹನುಮಂತ್ ನಾಯ್ಕ ಅವರು ಯೂನಿಯನ್ ಬ್ಯಾಂಕಿನಲ್ಲಿ 7 ಲಕ್ಷ ಸಾಲ ಮಾಡಿದ್ದರು. ಬ್ಯಾಂಕ್ ಅಧಿಕಾರಿಗಳ ಮನೆಗೆ ಬಂದು ಜಮೀನು ಹರಾಜು ಹಾಕುವುದಾಗಿ ಬೆದರಿಕೆ ಹಾಕಿದ್ದರು. ಇದರಿಂದ
ಮನನೊಂದು ಮನೆಯಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.