10:44 PM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಮಂತ್ರಾಲಯದ ಬಳಿ ಭೀಕರ ಅಪಘಾತ: 8 ಮಂದಿ ಸಾವು, ತರೀಕೆರೆ ತಾಲೂಕಿನ ಇಬ್ಬರು ಮಹಿಳೆಯರು ಬಲಿ

17/04/2026, 22:28

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಂತ್ರಾಲಯದ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಟ್ಟು 8 ಮಂದಿ ಮೃತಪಟ್ಟಿದ್ದಾರೆ.
ಈ ದುರ್ಘಟನೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ.
ಮೃತರನ್ನು ತರೀಕೆರೆ ತಾಲೂಕಿನ ಉಡೇವಾ ಗ್ರಾಮದ ಪುಟ್ಟಮ್ಮ (60) ಮತ್ತು ಮೀನಾಕ್ಷಿ (50) ಎಂದು ಗುರುತಿಸಲಾಗಿದೆ.
ಮಾಹಿತಿಯ ಪ್ರಕಾರ, ಉಡೇವಾ ಗ್ರಾಮದಿಂದ ಒಟ್ಟು 9 ಮಂದಿ ಸಂಬಂಧಿಕರು ಮಂತ್ರಾಲಯ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ನಡೆದ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನಿಬ್ಬರ ಸ್ಥಿತಿ ಗಂಭೀರವಾಗಿರುವುದಾಗಿ ತಿಳಿದು ಬಂದಿದೆ. ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಬೇಲೂರು ತಾಲೂಕು ಮತ್ತು ತರೀಕೆರೆ ತಾಲೂಕಿನವರು ಪರಸ್ಪರ ಸಂಬಂಧಿಕರಾಗಿದ್ದು, ಎಲ್ಲರೂ ಒಟ್ಟಾಗಿ ಧಾರ್ಮಿಕ ಪ್ರವಾಸ ಕೈಗೊಂಡಿದ್ದರು. ಆದರೆ ಈ ಸಂತೋಷದ ಪ್ರಯಾಣವೇ ದುರಂತವಾಗಿ ಮಾರ್ಪಟ್ಟಿದೆ.
ಘಟನೆಯ ನಂತರ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.
ಈ ಘಟನೆ ಕುಟುಂಬಸ್ಥರ ದುಃಖಕ್ಕೆ ಕಾರಣವಾಗಿದ್ದು, ಗ್ರಾಮದಲ್ಲಿ ಶೋಕ ಸಾಗರ ನಿರ್ಮಾಣವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು