ಇತ್ತೀಚಿನ ಸುದ್ದಿ
ತಲಪಾಡಿ ಬಳಿ ಭೀಕರ ರಸ್ತೆ ಅಪಘಾತ: ಆಟೋ ಮತ್ತು ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಬಸ್; 6 ಮಂದಿ ದಾರುಣ ಸಾವು
28/08/2025, 22:36

ಮಂಗಳೂರು(reporterkarnataka.com): ನಗರದ ಹೊರವಲಯದ ತಲಪಾಡಿ ಬಳಿ ಕೆಎಸ್ಸಾರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ.
ಕಾಸರಗೋಡಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಬಸ್ ತಲಪಾಡಿ ಟೋಲ್ ಗಿಂತ 150 ಮೀಟರ್ ದೂರದಲ್ಲಿ ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದು ಹಠಾತ್ತನೆ ಸ್ಜೀಡ್ ಆಗಿ ತಿರುಗಿ ನಿಂತು ಹಿಮ್ಮುಖವಾಗಿ ಚಲಿಸಿ ರಸ್ತೆ ಬದಿ ನಿಂತಿದ್ದ 4 ಮಂದಿಗೆ ಹೊಡೆಯಿತು. ಬಸ್ ಆಟೋಕ್ಕೆ ಡಿಕ್ಕಿ ಹೊಡೆದು ಸ್ಕಿಡ್ ಆದ ತಕ್ಷಣ ಚಾಲಕ ನಿಜಲಿಂಗಪ್ಪ ಚಲವಾದಿ ಎಂಬವರು ಬಸ್ಸಿನಿಂದ ಹಾರಿ ಪರಾರಿಯಾಗಿದ್ದಾರೆ. ಚಾಲಕರ ಅತಿಯಾದ ವೇಗ ಮತ್ತು ಅಜಾಗರೂಕತೆ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ.