4:47 AM Sunday11 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ಫಾದರ್ ಮಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆ: ವಿನೂತನ ಶೈಲಿಯ ಚಿಕಿತ್ಸೆಯಿಂದ ಮಹಿಳಾ ಹೃದ್ರೋಗಿಗೆ ಜೀವದಾನ

20/04/2026, 14:17

ಮಂಗಳೂರು(reporterkarnataka.com): ಕೇರಳ ರಾಜ್ಯದ ಕಾಸರಗೋಡು ಜಿಲ್ಲೆ ನಗರ ಮೂಲದ 46 ವಯಸ್ಸಿನ ಸಾವು ಬದುಕಿನ ಹೋರಾಟದಲ್ಲಿದ್ದ ಮತ್ತು ಹೃದ್ರೋಗ ಸಂಬಂಧಿ ತೀವ್ರ ಕಾಯಿಲೆಯಿಂದ ಬಳಲುತ್ತಿದ್ದ ಮಹಿಳಾ ಹೃದ್ರೋಗಿಗೆ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಪರಿಣಿತ ವೈದ್ಯರ ತಂಡವು ವಿನೂತನ ಶೈಲಿಯ ಅಪಾಯಕಾರಿ, ಜೀವರಕ್ಷಕಾ ಹೃದ್ರೋಗ ಚಿಕಿತ್ಸೆಯನ್ನು, ಆಧುನಿಕ ತಂತ್ರಜ್ಞಾನವನ್ನು ಬಳಸಿ, ಯಶಸ್ವಿಯಾಗಿ ನಿರ್ವಹಿಸಿ, ರೋಗಿಗೆ ಜೀವದಾನ ನೀಡಿ ಆರೋಗ್ಯ ಕ್ಷೇತ್ರದಲ್ಲಿ ಒಂದು ಸಾಧನೆ ಮಾಡಿ ಮಹತ್ವದ ಮೈಲಿಗಲ್ಲು ಸ್ಥಾಪಿಸಿದೆ.
ರೋಗಿಯು ದೀರ್ಘ ಕಾಲದ ತೀವ್ರ ಉಸಿರಾಟದ ಸಮಸ್ಯೆ, ತೀಕ್ಷ÷್ಣ ಎದೆ ನೋವು, ನಿಶಕ್ತಿ, ದಣಿವು, ದೌರ್ಬಲ್ಯ, ರಕ್ತ ಚಲನವಲನ ಸಮಸ್ಯೆಯಿಂದ ಬಳಲುತಿದ್ದು, ದೈನಂದಿನ ಚಟುವಟಿಕೆಗಳನ್ನು ನಿರ್ವಹಿಸಲು ಅಸಮರ್ಥಳಾಗಿದ್ದಳು. ನಗರದ ಫಾದರ್ ಮುಲ್ಲರ್ ಆಸ್ಪತ್ರೆಯ ಮುಖ್ಯ ಹೃದ್ರೋಗ ಶಾಸ್ತ್ರತಜ್ಞರಾದ ಡಾ. ಹೆಚ್. ಪ್ರಭಾಕರ್‌ರವರನ್ನು ಭೇಟಿ ಮಾಡಿ ತಮ್ಮ ತೀವ್ರ ಮತ್ತು ವಿವಿಧ ಮಾರಣಾಂತಿಕ ಆರೋಗ್ಯ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಿದರು.
ವೈದ್ಯರು ಸೂಕ್ಷ್ಮವಾಗಿ ರೋಗಿಯನ್ನು ಸಮಗ್ರ ಆರೋಗ್ಯ ತಪಾಸಣೆ ಒಳಪಡಿಸಿದಾಗ ರೋಗಿಯು ತೀವ್ರ ಹೃದ್ರೋಗಿ ಸಂಬಂಧಿ ಅಪರೂಪದ “ತಕಯಾಸು” ಕಾಯಿಲೆಯಿಂದ ಬಳಲುತಿದ್ದು, ಹೃದಯದ ರಕ್ತನಾಳದಲ್ಲಿ ರಕ್ತ ಚಲನವಲನದ ಅಡ್ಡಿಯಾಗುತ್ತಿದ್ದು, ಹೃದಯದ ಕಾರ್ಯಕ್ಷಮತೆ ಕುಂಠಿತವಾಗುತ್ತಿತ್ತು. ರೋಗಿಯ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು ಮತ್ತು ಶಸ್ತç ಚಿಕಿತ್ಸೆಯ ಅಪಾಯ ಅತ್ಯಂತ ಗಂಬೀರವಾಗಿತ್ತು. ಈ ಸಮಸ್ಯೆಯನ್ನು ಪರಿಗಣಿಸಿ ಈ ಗಂಭೀರ ಕಾಯಿಲೆ ಹೃದಯ ವೈಫಲ್ಯಕ್ಕೆ ಕಾರಣವಾಗಬಹುದು ಎಂದು ಅರಿತು ತಕ್ಷಣ ವೈದ್ಯರು ರೋಗಿಯನ್ನು ಆಸ್ಪತ್ರೆಗೆ ದಾಖಲಿಸಿ, ವೈದ್ಯರು ಗಂಭೀರ ಹೃದ್ರೋಗ ಜೀವಕ್ಕೆ ಅಪಾಯವಾಗುವ ಸವಾಲನ್ನು ಸ್ವೀಕರಿಸಿದರು. ಒಂದು ಪರಿಣಿತ ವೈದ್ಯರ ತಂಡವನ್ನು ನಿರ್ಮಿಸಿ, 2 ವಿಭಿನ್ನ ದಿನಗಳ ಅವಧಿಯ 2 ಪ್ರತ್ಯೇಕ ಹಂತದಲ್ಲಿ ವಿನೂತನ ಶೈಲಿಯ ಜೀವ ಅಪಾಯಕಾರಿ ಕ್ಲಿಷ್ಟಕರ “ಅಂಜಿಯೋಪ್ಲಾಸ್ಟಿ” ಚಿಕಿತ್ಸೆಯನ್ನು ನೆರವೇರಿಸಿ ಸಾಮಾನ್ಯ ರಕ್ತ ಚಲನವಲನಕ್ಕೆ ಅನುವು ಮಾಡಿಕೊಟ್ಟರು. ರೋಗಿಯ ತೊಡೆಯಲ್ಲಿ ಸೂಕ್ಷ್ಮ ರಂಧ್ರವನ್ನು ಕೊರೆದು ಅತ್ಯಾಧುನಿಕ ಇಮೇಜಿಂಗ್ ತಂತ್ರಜ್ಞಾನವನ್ನು ಬಳಸಿ, ಅದರ ಮೂಲಕ ವಿಶೇಷ ಕ್ಯಾಮರಾ ಮತ್ತು ಬೆಲೂನನ್ನು ಅಳವಡಿಸಿ, ಈ ಚಿಕಿತ್ಸೆಯನ್ನು ಯಶಸ್ವಿಯಾಗಿ ನಿರ್ವಹಿಸಲಾಯಿತು. ಈ ಅಪರೂಪದ ಚಿಕಿತ್ಸೆಯಲ್ಲಿ ಹೃದ್ರೋಗ ಶಾಸ್ತ್ರ ತಜ್ಞರಾದ ಡಾ. ಪ್ರದೀಪ್ ಪಿರೇರಾ, ಡಾ. ಜೋಸ್ಟಲ್ ಪಿಂಟೋ ಮತ್ತು ಡಾ. ಅಶೋಕ ಸಹಕರಿಸಿದ್ದರು. ರೋಗಿಯು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸಿ ಸಂಪೂರ್ಣವಾಗಿ ಚೇತರಿಸಿಕೊಂಡು, ಆಸ್ಪತ್ರೆಯಿಂದ ಬಿಡುಗಡೆಗೊಂಡು ತಮ್ಮ ನಿವಾಸದಲ್ಲಿ ಸಹಜ ಆರೋಗ್ಯ ಜೀವನ ನಡೆಸುತಿದ್ದಾರೆ.
ಡಾ. ಹೆಚ್. ಪ್ರಭಾಕರ್‌ರವರು ಯಶಸ್ವಿ ಶಸ್ತç ಚಿಕಿತ್ಸೆ ಬಳಿಕ ಈ ಕ್ಲಿಷ್ಟಕರ ಶಸ್ತ್ರ ಚಿಕಿತ್ಸೆಯಲ್ಲಿ ಉತ್ತಮ ದರ್ಜೆಯ ಚಿಕಿತ್ಸೆ ನೀಡಿದ್ದು, ಮತ್ತು ಮಾರಣಾಂತಿಕ ಸಮಸ್ಯೆಯನ್ನು ಹೊಂದಿರುವ ರೋಗಿಗೆ ಅತ್ಯಾಧುನಿಕ ತಂತ್ರಜ್ಞಾನದ ಚಿಕಿತ್ಸಾ ವಿಧಾನಗಳಿಂದ ಸಂಪೂರ್ಣ ಗುಣಮುಖರಾಗಿದ್ದಾರೆ ಎಂದು ಮಾಹಿತಿ ನೀಡಿದರು.
ಫಾದರ್ ಮುಲ್ಲರ್ ಸಮೂಹ ಸಂಸ್ಥೆಗಳ ನಿರ್ದೇಶಕರಾದ ವಂದನೀಯ ಫೋಸಿನ್ ಲೂಕಸ್ ಲೋಬೋರವರು ವೈದ್ಯಕೀಯ ತಂಡದ ಗಮನಾರ್ಹ ಸಾಧನೆಯನ್ನು ಅಭಿನಂದಿಸಿದ್ದಾರೆ.
ಹೃದ್ರೋಗ ಶಾಸ್ತ್ರ ವಿಭಾಗ
ಹೆಚ್ಚಿನ ಮಾಹಿತಿಗಾಗಿ ಡಾ. ಹೆಚ್. ಪ್ರಭಾಕರ್ – ೯೮೪೫೦ ೮೩೨೮೧ ಸಂಪರ್ಕಿಕಿಸಿ.

ಇತ್ತೀಚಿನ ಸುದ್ದಿ

ಜಾಹೀರಾತು