3:27 PM Monday7 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ಇತ್ತೀಚಿನ ಸುದ್ದಿ

ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆ: ವಯಸ್ಸಾದ ಹೃದ್ರೋಗಿಗೆ ವಿನೂತನ ಶೈಲಿಯ ಚಿಕಿತ್ಸೆಯಿಂದ ಜೀವದಾನ

26/04/2025, 17:22

ಮಂಗಳೂರು(reporterkarnataka.com): ನಗರದ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಹೃದ್ರೋಗ ಶಾಸ್ತ್ರ ವಿಭಾಗದ ವೈದ್ಯರ ತಂಡ ವಯಸ್ಸಾದ ಹೃದ್ರೋಗಿಗೆ ವಿನೂತನ ಶೈಲಿಯ ಚಿಕಿತ್ಸೆಯ ಮೂಲಕ ಜೀವದಾನ ನೀಡಿದ ಘಟನೆ ನಡೆದಿದೆ.
ವೈದ್ಯರು ಈ ಮೂಲಕ ವೈದ್ಯಕೀಯ ಕ್ಷೇತ್ರದಲ್ಲಿ ಅಪರೂಪದ ಮತ್ತು ಗಮನಾರ್ಹ ಸಾಧನೆ ಮಾಡಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಹೊನ್ನಾವರ (ಉತ್ತರ ಕನ್ನಡ) ನಗರ ಮೂಲದ 69 ವಯಸ್ಸಿನ ಹೃದ್ರೋಗಿಯು, ತೀವ್ರ ಎದೆ ನೋವು, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದು, ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಹೃದ್ರೋಗ ವಿಭಾಗದ ಮುಖ್ಯಸ್ಥ ಹಾಗೂ ಹೃದ್ರೋಗ ಶಾಸ್ತ್ರ‌ ತಜ್ಞ ಡಾ. ಪ್ರಭಾಕರ್ ಅವರನ್ನು ಭೇಟಿ ಮಾಡಿ ತಮ್ಮ ಹೃದ್ರೋಗದ ಸಮಸ್ಯೆಗಳನ್ನು ವಿವರಿಸಿದರು. ರೋಗಿಯನ್ನು ಸೂಕ್ಷ್ಮವಾಗಿ ತಪಾಸಣೆ ಮಾಡಿದಾಗ ವೈದ್ಯರು ರೋಗಿಯು ತೀವ್ರ ಹೃದ್ರೋಗ ಸಂಬಂಧಿತ ಕಾಯಿಲೆಗಳಿಂದ ಬಳಲುತ್ತಿದ್ದು, ಹೃದಯದ ಅಪದಮನಿಯಲ್ಲಿ ಕ್ಯಾಲ್ಸಿಯಂ ಕಣಗಳಿದ್ದು, ರಕ್ತದ ಚಲನವಲನಕ್ಕೆ ಅಡ್ಡಿ ಮಾಡುತ್ತಿತ್ತು. ಅದಲ್ಲದೆ ರೋಗಿಯು 10 ವರ್ಷದ ಹಿಂದೆ ಬೈಪಾಸ್ ಶಸ್ತ್ರ ಚಿಕಿತ್ಸೆಗೆ ಒಳಗೊಂಡಿದ್ದರು. ಈ ಕಾರಣ 2ನೇ ಬೈಪಾಸ್ ಶಸ್ತ್ರ ಚಿಕಿತ್ಸೆಯು ರೋಗಿಯ ಜೀವಕ್ಕೆ ಗಂಭೀರ ಸಮಸ್ಯೆ ಮತ್ತು ಅಪಾಯಕಾರಿಯಾಗಿತ್ತು. ತಕ್ಷಣ ರೋಗಿಯನ್ನು ಆಸ್ಪತ್ರೆಗೆ ದಾಖಲಿಸಿ ಡಾ. ಪ್ರಭಾಕರ್‌ ಅವರು ಈ ಗಂಭೀರ ಸಮಸ್ಯೆ ಮತ್ತು ಜೀವಕ್ಕೆ ಅಪಾಯಕಾರಿಯಾಗುವ ಸವಾಲನ್ನು ಸ್ವೀಕರಿಸಿ, 1 1/2 ಗಂಟೆ ಅವಧಿಯ ವಿನೂತನ ಶೈಲಿಯ ಕ್ಲಿಷ್ಟಕರವಾದ ಅರ್ಬಿಟಲ್ ಅಥೆರೆಕ್ಟೆಮಿ ಚಿಕಿತ್ಸೆಯನ್ನು ನಿರ್ವಹಿಸಿ ಹೃದಯದಲ್ಲಿರುವ ಕ್ಯಾಲ್ಸಿಯಂ ಕಣಗಳನ್ನು ನಿರ್ಮೂಲಿಸಿ 2 ಸ್ಟೆಂಟ್‌ಗಳನ್ನು ಅಳವಡಿಸಿ ಸಾಮಾನ್ಯ ರಕ್ತ ಚಾಲನೆಗೆ ಅನುವುಮಾಡಿಕೊಟ್ಟರು.
ಈ ಚಿಕಿತ್ಸೆಗೆ ಆಸ್ಪತ್ರೆಯ ಹೃದ್ರೋಗ ತಜ್ಞರಾದ ಡಾ. ಪ್ರದೀಪ್ ಪಿರೇರಾ ಮತ್ತು ಡಾ. ಜೋಸ್ಟಲ್ ಪಿಂಟೋ ಸಹಕರಿಸಿದ್ದರು. ರೋಗಿಯು ಚಿಕಿತ್ಸೆಗೆ ಸ್ಪಂದಿಸಿ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಏ.26 ರಂದು ಬಿಡುಗಡೆಗೊಂಡಿದ್ದಾರೆ.
ಫಾದರ್ ಮುಲ್ಲರ್ ಸಂಸ್ಥೆಗಳ ನಿರ್ದೇಶಕ ಫಾ. ರಿಚರ್ಡ್ ಕುವೆಲ್ಲೋ ಅವರು ಈ ಚಿಕಿತ್ಸೆಯನ್ನು ಯಶಸ್ವಿಯಾಗಿ ಆಸ್ಪತ್ರೆಯಲ್ಲಿ ಪ್ರಥಮ ಬಾರಿಗೆ ನೆರವೇರಿಸಲಾಗಿದೆ ಎಂದು ವೈದ್ಯಕೀಯ ತಂಡದ ಗಮನಾರ್ಹ ಸಾಧನೆಯನ್ನು ಪ್ರಶಂಸಿಸಿ ಅಭಿನಂದಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು