ಇತ್ತೀಚಿನ ಸುದ್ದಿ
ಫಾಝಿಲ್ ಹಂತಕರ ಸುಳಿವು ಸಿಕ್ಕಿದೆ, ಶೀಘ್ರ ಬಂಧನ: ಎಡಿಜಿಪಿ ಅಲೋಕ್ ಕುಮಾರ್
29/07/2022, 23:08

ಮಂಗಳೂರು(reporterkarnataka.com): ಸುರತ್ಕಲ್‌ನಲ್ಲಿ ನಡೆದ ಫಾಝಿಲ್ ಹತ್ಯೆ ಪ್ರಕರಣದ ಆರೋಪಿಗಳ ಸುಳಿವು ಸಿಕ್ಕಿದ್ದು, ಶೀಘ್ರವಾಗಿ ಬಂಧಿಸಲಾಗುವುದು ಎಂದು ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.
ಪ್ರಾಥಮಿಕ ತನಿಖೆಯಲ್ಲಿ ಆರೋಪಿಗಳ ಸುಳಿವು ದೊರೆತಿದೆ. ವಿಶೇಷ ಕಾರ್ಯಾಚರಣೆ ನಡೆಸಿ
ಆರೋಪಿಗಳ ಬಂಧಿಸಲಾಗುವುದು. ಜಿಲ್ಲೆಯ ಜನತೆ ಶಾಂತಿ ಸುವ್ಯವಸ್ಥೆ ಕಾಪಾಡಲು ಒತ್ತು ನೀಡಬೇಕು. ಯಾವುದೇ ಊಹಾಪೋಹಗಳಿಗೆ ಕಿವಿಗೊಡಬಾರದು. ಪೊಲೀಸ್ ಇಲಾಖೆ ಆರೋಪಿಗಳನ್ನು ಬಂಧಿಸಲಿದೆ ಎಂದು ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ತಿಳಿಸಿದರು.
ಘಟನೆ ನಡೆದ ಸ್ಥಳದಲ್ಲಿನ ಸಿಸಿಟಿವಿ ಕ್ಯಾಮೆರಾ ದೃಶ್ಯ ಆಧರಿಸಿ ಕಾರು ಪತ್ತೆ ಹಚ್ಚಿ ತನಿಖೆ ನಡೆಸಿ ತನಿಖೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ಸಾರ್ವಜನಿಕರು ಪೊಲೀಸರಿಗೆ ಸಹಕಾರ ನೀಡಬೇಕು ಎಂದು ಎಡಿಜಿಪಿ ಮನವಿ ಮಾಡಿದರು.