5:04 PM Sunday8 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ಸುರತ್ಕಲ್ ಫಾಝಿಲ್‌ ಕೊಲೆ ಪ್ರಕರಣ; 6 ಮಂದಿ ಬಂಧನ: ಪೊಲೀಸ್ ಕಮಿಷನರ್ ಶಶಿಕುಮಾರ್

02/08/2022, 15:34

ಸುರತ್ಕಲ್(reporterkarnataka.com): ಸುರತ್ಕಲ್ ಮುಹಮ್ಮದ್ ಫಾಝಿಲ್ ಹತ್ಯೆಗೆ ಸಂಬಂಧಿಸಿದಂತೆ 6 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. 

ಪಣಂಬೂರು ಎಸಿಪಿ ಕಚೇರಿಯಿಂದ ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಕರೆದೊಯ್ಯುತ್ತಿದ್ದ ವೇಳೆ ಮಾಧ್ಯಮಗಳ ಜತೆ ಮಾತನಾಡಿದ ಪೊಲೀಸ್ ಕಮಿಷನರ್ ಶಶಿಕುಮಾರ್ ಈ ವಿಷಯ ತಿಳಿಸಿದರು.

ಆರೋಪಿಗಳು ವಿಚಾರಣೆಯ ವೇಳೆ ಕೃತ್ಯ ಎಸಗಿರುವುದನ್ನು ಒಪ್ಪಿಕೊಂಡಿದ್ದಾರೆ ಎಂದು ಅವರು ನುಡಿದರು.

ಘಟನೆಗೆ ಸಂಬಂಧಿಸಿದಂತೆ ದುಷ್ಕರ್ಮಿಗಳು ಹತ್ಯೆಗೆ ಬಳಸಿದ್ದ ಕಾರಿನ ನೋಂದಣಿ‌ ಸಂಖ್ಯೆ ಪತ್ತೆ ಹಚ್ಚಿ ಅದರ‌‌ ಮಾಲಕ ಅಜಿತ್ ಕ್ರಾಸ್ತ ಎಂಬಾತನನ್ನು ವಶಕ್ಕೆ ಪಡೆಯಲಾಗಿತ್ತು. ಬಳಿಕ ಆತನನ್ನು ವಿಚಾರಣೆಗೆ ಒಳಪಡಿಸಿದಾಗ ಆತ ಹೆಚ್ಚುವರಿ ಹಣ ಪಡೆದು ಕಾರನ್ನು ಬಾಡಿಗೆ ರೂಪದಲ್ಲಿ ನೀಡಿರುವುದಾಗಿ ಮಾಹಿತಿ ನೀಡಿದ್ದ.ಆತನ ಮಾಹಿತಿಯಂತೆ ಕಾರ್ಯ ಪ್ರವೃತ್ತರಾದ ಪೊಲೀಸ್‌ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು