11:55 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಫೆ.10ರಂದು ಕೊಲ್ಲಮೊಗ್ರದಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ: ಜಿಲ್ಲಾ ಉಸ್ತುವಾರಿ ಸಚಿವರಿಂದ ಮಾಹಿತಿ ಕೈಪಿಡಿ ಬಿಡುಗಡೆ

23/01/2024, 23:22

ಸುಳ್ಯ(reporterkarnataka.com): ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ಹಾಗೂ ಜಿಲ್ಲಾಡಳಿತ, ತಾಲೂಕು ಆಡಳಿತ, ಸ್ಥಳೀಯಾಡಳಿತಗಳ ಸಹಕಾರದಲ್ಲಿ ಫೆ.10ರಂದು ಕೊಲ್ಲಮೊಗ್ರದಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ ನಡೆಯಲಿದೆ. ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಮಾಹಿತಿ ಕೈ ಪಿಡಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಬಿಡುಗಡೆ ಮಾಡಿದರು.

ಸುಳ್ಯದಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಚಿವರು ಕೈಪಿಡಿ ಬಿಡುಗಡೆ ಮಾಡಿದರು. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅವರು ಗ್ರಾಮ ವಾಸ್ತವ್ಯ ಕಾರ್ಯಕ್ರಮದ‌ ಕುರಿತು ವಿವರಿಸಿ ಸಚಿವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿದರು.
ಶಾಸಕಿ ಭಾಗೀರಥಿ ಮುರುಳ್ಯ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ‌‌ ಅಧಿಕಾರಿ ಡಾ.ಆನಂದ, ಪುತ್ತೂರು ಸಹಾಯಕ ಕಮೀಷನರ್ ಜುಬಿನ್ ಮಹೋಪಾತ್ರ, ತಹಶೀಲ್ದಾರ್ ಜಿ.ಮಂಜುನಾಥ್ ಉಪಸ್ಥಿತರಿದ್ದರು.
ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಕೋಶಾಧಿಕಾರಿ ಪುಷ್ಪರಾಜ್, ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಜಿಲ್ಲಾ ಕಾರ್ಯದರ್ಶಿ ಗಂಗಾಧರ ಕಲ್ಲಪಳ್ಳಿ, ತಾಲೂಕು ಸಂಘದ ಅಧ್ಯಕ್ಷ ದಯಾನಂದ ಕಲ್ನಾರ್, ಕಾರ್ಯದರ್ಶಿ ತೇಜೇಶ್ವರ ಕುಂದಲ್ಪಾಡಿ, ಪತ್ರಕರ್ತರಾದ ದುರ್ಗಾಕುಮಾರ್ ನಾಯರ್ ಕೆರೆ, ಶಿವಪ್ರಸಾದ್ ಕೇರ್ಪಳ, ಮಿಥುನ್ ಕರ್ಲಪ್ಪಾಡಿ, ಗಿರೀಶ್ ಅಡ್ಪಂಗಾಯ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು