1:29 PM Sunday7 - December 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ: ಆಕಸ್ಮಿಕ ಗುಂಡಿನ ಚೂರು ತಗುಲಿ ಇಬ್ಬರು ಯುವಕರಿಗೆ ಗಾಯ ರಾಷ್ಟ್ರವ್ಯಾಪಿ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಸಚಿವ ಡಾ. ಶರಣಪ್ರಕಾಶ್‌ ಒತ್ತಾಯ ಸೌರಶಕ್ತಿಗೆ 3ನೇ ಅತಿದೊಡ್ಡ ಕೊಡುಗೆದಾರ ಭಾರತ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Shivamogga | ಬಸ್ ಚಾಲಕನ ಅತೀ ವೇಗ, ಅಜಾಗರೂಕತೆ: ಬೈಕ್ ಸವಾರ ಗಂಭೀರ ತೋಟಕ್ಕೆ ತೆರಳಿದ್ದ ಸಂದರ್ಭ ಏಕಾಏಕಿ ಹೆಜ್ಜೇನು ದಾಳಿ: ಮಹಿಳೆ ಸಹಿತ 3 ಮಂದಿಗೆ… ವಿರಾಜಪೇಟೆ | ಕ್ಷುಲ್ಲಕ ಕಾರಣ: ಕುಡಿದ ಮತ್ತಿನಲ್ಲಿ ನಡುರಸ್ತೆಯಲ್ಲಿ ಯುವಕರ ಮಾರಮಾರಿ..!! “ಸ್ವಸ್ಥ ಮೈಸೂರು” ಅಭಿಯಾನ ಒಪ್ಪಂದಕ್ಕೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸಹಿ New Delhi | ಬೆಳ್ಳಿ ವಸ್ತು, ಆಭರಣಗಳಿಗಿನ್ನು BIS ಹಾಲ್‌ಮಾರ್ಕ್‌, HUID ಕಡ್ಡಾಯ ರಾಜ್ಯ ಸರಕಾರ ಅನ್ನದಾತ ರೈತನ ಬಗ್ಗೆ ಕಾಳಜಿ ವಹಿಸುತ್ತಿಲ್ಲ: ಮಾಜಿ ಗೃಹ ಸಚಿವ… ವಿಶೇಷ ಚೇತನರು ಇನ್ನು ವಿಮಾನವೇರುವುದು ಸುಲಭ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ‘ಮೊಬಿಲಿಟಿ…

ಇತ್ತೀಚಿನ ಸುದ್ದಿ

ಫೆಬ್ರವರಿ 17ರಂದು ತಿರುವೈಲೋತ್ಸವ: ಸಂಕು ಪೂಂಜಾ- ದೇವು ಪೂಂಜಾ ಜೋಡುಕೆರೆ ಕಂಬಳ

06/02/2024, 14:20

ಮಂಗಳೂರು(reporterkarnataka.com):ತುಳುನಾಡಿನ ತಿರುವೈಲೋತ್ಸವ ವಾಮಂಜೂರು ತಿರುವೈಲು ಶ್ರೀ ಅಮೃತೇಶ್ವರ ದೇವಳ ಎದುರಿನ ತಿರುವೈಲು ಗುತ್ತು ವಿನ ಕಂಬಳ ಗದ್ದೆಯಲ್ಲಿ ಫೆಬ್ರವರಿ 17 ರಂದು ನಡೆಯಲಿದೆ.

ವಾಮಂಜೂರು ತಿರುವೈಲು ಗುತ್ತು ಸಂಕು ಪೂಂಜಾ ದೇವು ಪೂಂಜಾ ಜೋಡುಕೆರೆ ಕಂಬಳ ತಿರುವೈಲು ಗುತ್ತು ಕಂಬಳ ಸಂಸ್ಥಾಪಕ, ತಿರುವೈಲು ಗುತ್ತು ಕಂಬಳ ಸಮಿತಿ ಅಧ್ಯಕ್ಷ ನವೀನ್ ಚಂದ್ರ ಹಾಗೂ ತಿರುವೈಲು ಗುತ್ತು ಗೌರವ ಅಧ್ಯಕ್ಷ ಮಿಥುನ್ ರೈ, ಕಂಬಳ ಸಮಿತಿ ಕಾರ್ಯಾಧ್ಯಕ್ಷ ಹಾಗೂ ಮಂಗಳೂರು ಮಹಾನಗರ ಪಾಲಿಕೆ ವಿರೋಧ ಪಕ್ಷ ನಾಯಕ ಟಿ. ಪ್ರವೀಣ್ ಚಂದ್ರ ಆಳ್ವ ಅವರ ನೇತೃತ್ವದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ವಿಧಾನ ಸಭಾ ಸ್ಪೀಕರ್ ಯು. ಟಿ. ಖಾದರ್, ಗೃಹ ಸಚಿವ ಡಾ. ಜಿ. ಪರಮೇಶ್ವರ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬಾಳ್ಕರ್ ಉಪಸ್ಥಿತಿ ವಹಿಸುವರು.
ಕಾರ್ಯಕ್ರಮ ಉದ್ಘಾಟನೆಯನ್ನು,ಜಿ. ಆರ್. ಕಾಲೇಜು, ಕರಾವಳಿ ಕಾಲೇಜು ಸಮೂಹ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷ ಗಣೇಶ್ ರಾವ್ ನಡೆಸಲಿದ್ದಾರೆ.
ಅನೇಕ ರಾಜಕೀಯ ನಾಯಕರು, ಗಣ್ಯರು ಕಂಬಳದಲ್ಲಿ ಭಾಗವಹಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು