2:15 PM Thursday4 - December 2025
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಮುಂದುವರಿದ ಆನೆ- ಮಾನವ ಸಂಘರ್ಷ: ಕುಶಾಲನಗರ ಬಳಿ ರೈಲ್ವೆ ಬ್ಯಾರಿಕೇಡ್ ಮುರಿದ… ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

ಇತ್ತೀಚಿನ ಸುದ್ದಿ

ಫೆ.27: ಬಲೆ ತುಳು ಓದುಗ ಅಭಿಯಾನ; ಅಕಾಡೆಮಿಗೆ ರಥಬೀದಿ ಸರಕಾರಿ ಕಾಲೇಜು ವಿದ್ಯಾರ್ಥಿಗಳ ಭೇಟಿ

25/02/2025, 22:21

ಮಂಗಳೂರು(reporterkarnataka.com): ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಯುವಜನರಲ್ಲಿ ತುಳು ಸಾಹಿತ್ಯ ಓದಿನ ಅಭಿರುಚಿ ಮೂಡಿಸಲು ಹಮ್ಮಿಕೊಂಡಿರುವ ‘ಅಕಾಡೆಮಿಡ್ ಒಂಜಿ ದಿನ ; ಬಲೆ ತುಳು ಓದುಗ’ ಅಭಿಯಾನದ ಮೂರನೇ ಕಾರ್ಯಕ್ರಮ ಫೆ. 27ರಂದು ನಡೆಯಲಿದೆ.
ಗುರುವಾರದಂದು ಮಂಗಳೂರು ರಥಬೀದಿಯ ಡಾ.ಪಿ.ದಯಾನಂದ ಪೈ- ಪಿ.ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿನ 40 ವಿದ್ಯಾರ್ಥಿಗಳು ಉರ್ವಾಸ್ಟೋರ್ ನಲ್ಲಿರುವ ತುಳು ಭವನದ ಗ್ರಂಥಾಲಯಕ್ಕೆ ಭೇಟಿ ನೀಡಿ ಅಧ್ಯಯನ ಹಾಗೂ ಸಂವಾದ ನಡೆಸುವರು.
ಕಾರ್ಯಕ್ರಮವನ್ನು ಬೆಳಿಗ್ಗೆ 10.00 ಗಂಟೆಗೆ ಸೆಂಟ್ರಲ್ ಬ್ಯೂರೋ ಆಫ್ ಕಮ್ಯೂನಿಕೇಶನ್ ಇಲಾಖೆಯ ಸಹಾಯಕ ನಿರ್ದೇಶಕ ಜಿತು ನಿಡ್ಲೆ ಅವರು ಉದ್ಘಾಟಿಸಿ, ದಿಕ್ಸೂಚಿ ಮಾತನ್ನಾಡುವರು. ಮುಖ್ಯ ಅತಿಥಿಯಾಗಿ ಹಿರಿಯ ಪತ್ರಕರ್ತ ಹಾಗೂ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಆನಂದ ಶೆಟ್ಟಿ ಭಾಗವಹಿಸುವರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅಧ್ಯಕ್ಷತೆ ವಹಿಸುವರು. ರಥಬೀದಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕಿ ಡಾ.ಜ್ಯೋತಿ ಪ್ರಿಯಾ ಅತಿಥಿಯಾಗಿ ಭಾಗವಹಿಸುವರು ಎಂದು ಅಕಾಡೆಮಿ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು