8:22 PM Friday18 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:…

ಇತ್ತೀಚಿನ ಸುದ್ದಿ

ಫೆಬ್ರವರಿ 27ರಿಂದ ಪ್ರಥಮ ಬಾರಿಗೆ ವಿಧಾನಸೌಧದ ಆವರಣದಲ್ಲಿ ಪುಸ್ತಕ ಮೇಳ

11/02/2025, 10:30

ಮಂಗಳೂರು (reporterkarnataka.com): ಕರ್ನಾಟಕ ವಿಧಾನ ಸಭೆ ಸಚಿವಾಲಯದಿಂದ ಪ್ರಥಮ ಬಾರಿಗೆ ನಾಡಿನ ಜನತೆಗೆ ಅತಿ ಅಮೂಲ್ಯವಾದ ಪುಸ್ತಕಗಳನ್ನು ಖರೀದಿಸಲು ಮತ್ತು ವೀಕ್ಷಿಸಲು ಫೆಬ್ರವರಿ 27 ರಿಂದ ಮಾರ್ಚ್ 3 ರವರೆಗೆ “ವಿಧಾನಸೌಧದ ಆವರಣದಲ್ಲಿ ಪುಸ್ತಕ ಮೇಳ” ಏರ್ಪಡಿಸಲಾಗಿದೆ.
ಪುಸ್ತಕ ಮೇಳದಲ್ಲಿ, ನಾಡಿನ ಪ್ರಕಾಶಕರು/ಮಾರಾಟಗಾರರು ಭಾಗವಹಿಸಬಹುದು. ಮಳಿಗೆಯೊಂದಕ್ಕೆ ರೂ. 1000 ಭದ್ರತಾ ಠೇವಣಿ ಡಿ.ಡಿ.ಯನ್ನು ಬೆಂಗಳೂರು, ವಿಧಾನಸೌಧ, ಕರ್ನಾಟಕ ವಿಧಾನ ಸಭೆ ಸಚಿವಾಲಯ ಕಾರ್ಯದರ್ಶಿಗಳ ಹೆಸರಿನಲ್ಲ್ಲಿ ಸಲ್ಲಿಸಬೇಕು.
ಪುಸ್ತಕ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವ ಪ್ರಕಾಶಕರು/ಮಾರಾಟಗಾರರು ನಿಗದಿತ ಅರ್ಜಿ ನಮೂನೆಯನ್ನು ಮುಖ್ಯ ಗ್ರಂಥಪಾಲಕರು, ಕರ್ನಾಟಕ ವಿಧಾನಸಭಾ ಸಚಿವಾಲಯ, ವಿಧಾನ ಸೌಧ, ಬೆಂಗಳೂರು ಅಥವಾ ಸಚಿವಾಲಯದ ವೆಬ್‍ಸೈಟ್: ತಿತಿತಿ.ಞಟಚಿ.ಞಚಿಡಿ.ಟಿiಛಿ.iಟಿ ನಲ್ಲಿ ಉಚಿತವಾಗಿ ಪಡೆದುಕೊಳ್ಳಬಹುದು. ಭರ್ತಿಮಾಡಿದ ಅರ್ಜಿಯನ್ನು ಡಿ.ಡಿ.ಯೊಂದಿಗೆ ಫೆ.12 ರಂದು ಸಂಜೆ 5 ಗಂಟೆಯೊಳಗೆ ಸಲ್ಲಿಸಬೇಕು. ನಿರ್ಮಿಸಲಾಗುವ 75 ಮಳಿಗೆಗಳನ್ನು ಆದ್ಯತೆಯ ಮೇರೆಗೆ ಹಂಚಿಕೆ ಮಾಡಲಾಗುವುದು.
ಹೆಚ್ಚಿನ ಮಾಹಿತಿಗೆ ಕರ್ನಾಟಕ ವಿಧಾನ ಸಭೆ ಸಚಿವಾಲಯದ ಮುಖ್ಯ ಗ್ರಂಥಪಾಲಕರನ್ನು (ದೂ:080-22381350) ಸಂಪರ್ಕಿಸಬಹುದು ಎಂದು ಸಚಿವಾಲಯದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು